Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ; ಶೀಘ್ರದಲ್ಲೇ ಮತ್ತೊಂದು ಹೊಸ ಯೋಜನೆ ಆರಂಭ

Bengaluru-Mysuru Expressway: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ನಿರ್ಮಾಣ ಆದಾಗಿನಿಂದಲೂ ಒಂದಲ್ಲ ಒಂದು ವಿಚಾರಕ್ಕೆ ಸುದ್ದಿಯಾಗುತ್ತಲೇ ಇದೆ. ಇನ್ನು ಈ ಹೆದ್ದಾರಿಯಲ್ಲಿ ಪ್ರಯಾಣಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ರಾಷ್ಟ್ರೀಯ ಹದ್ದಾರಿ ಪ್ರಾಧಿಕಾರ ಮುಂದಾಗಿದೆ. ಹಾಗಾದರೆ ಮಾಹಿತಿ ಇಲ್ಲಿ ನೀಡಲಾಗಿದೆ ಗಮನಿಸಿ.

ಕೆಲವು ಪಟ್ಟಣಗಳಿಗೆ ತಲುಪಬೇಕೆಂದರೆ ಹೆದ್ದಾರಿಯಿಂದ ಕೆಳಗಿಳಿಯಲು ಎಲ್ಲಿಯೂ ಕೂಡ ಸರ್ವಿಸ್‌ ರಸ್ತೆಯೇ ಇಲ್ಲ. ಇದರಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಪ್ರಯಾಣಿಕರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇದೀಗ ಈ ಸಮಸ್ಯೆಗಳನ್ನು ನಿವಾರಿಸಲು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹೆದ್ದಾರಿಯ ಒಂದು ಬದಿಯಲ್ಲಿ ಸರ್ವೀಸ್‌ ರಸ್ತೆ ನಿರ್ಮಿಸುವ ಯೋಜನೆಯನ್ನು ಹಾಕಿಕೊಂಡಿದೆ. ಮಾರ್ಗದುದ್ದಕ್ಕೂ ಹಲವು ಪಟ್ಟಣಗಳಿಗೆ ಸಂಪರ್ಕ ಹೆಚ್ಚಿಸಲು ಮತ್ತು ಎಕ್ಸ್‌ಪ್ರೆಸ್‌ವೇಗೆ ಪ್ರವೇಶಿಸುವ ಅಥವಾ ನಿರ್ಗಮಿಸುವ ವಾಹನಗಳಿಗೆ ಸುಗಮ ಪ್ರವೇಶವನ್ನು ಒದಗಿಸುವ ಗುರಿಯನ್ನು ಈ ಯೋಜನೆಯ ಉದ್ದೇಶವಾಗಿದೆ.

Bengaluru-Mysuru National Highway Service Road Construction to Begin Soon Along Expressway

118 ಕಿಲೋ ಮೀಟರ್ ಉದ್ದದ ಎಕ್ಸ್‌ಪ್ರೆಸ್‌ವೇ ಅನ್ನು ಪ್ರಯಾಣದ ಸಮಯ ಕಡಿಮೆ ಮಾಡಲು ಮತ್ತು ಬೆಂಗಳೂರು-ಮೈಸೂರು ನಡುವಿನ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ನಿರ್ಮಾಣ ಮಾಡಲಾಗಿದೆ. ಆದರೆ, ಈ ಹೆದ್ದಾರಿಗೆ ಸಂಪೂರ್ಣ ಸರ್ವೀಸ್ ರಸ್ತೆಯೇ ಇಲ್ಲ. ಇದು ರೈಲು ಮಾರ್ಗದಂತಹ ಅಡೆತಡೆಗಳಿಂದ ಕೂಡಿದ್ದು, ಪ್ರಯಾಣಿಕರು ತುಂಬಾ ತೊಂದರೆ ಅನುಭವಿಸುವಂತಾಗಿದೆ.

ಇದೀಗ ವಾಹನಗಳು ಬಿಡದಿ, ಚನ್ನಪಟ್ಟಣ, ಮತ್ತು ಮದ್ದೂರಿನಂತಹ ಪಟ್ಟಣಗಳಿಗೆ ಭೇಟಿ ನೀಡಿ, ಅಲ್ಲಿಂದ ಹೆದ್ದಾರಿಯನ್ನು ಪ್ರವೇಶಿಸಲು ಅಥವಾ ನಿರ್ಗಮಿಸಲು ಮತ್ತು ಈ ಪ್ರದೇಶಗಳಿಗೆ ಆಗಮಿಸಬೇಕೆಂದರೆ ಸುತ್ತಾಡಿಕೊಂಡು ಬರಬೇಕಾಗುತ್ತದೆ. ಇದರಿಂದ ವಾಹನ ಸವಾರರಿಗೆ ತುಂಬಾ ಸವಾಲುಗಳನ್ನು ಎದುರಿಸುತ್ತಿದ್ದಾರೆ.

ಆದ್ದರಿಂದ ಹೊಸ ಯೋಜನೆಯಡಿ ಎಕ್ಸ್‌ಪ್ರೆಸ್‌ ವೇ ಉದ್ದಕ್ಕೂ ಪೂರ್ಣ ಪ್ರಮಾಣದ ಸರ್ವಿಸ್ ರಸ್ತೆಯನ್ನು ನಿರ್ಮಿಸಲಾಗುವುದು. ಇದರಿಂದ ವಾಹನ ಸವಾರರು ಸುತ್ತಾಡಿಕೊಂಡು ಬರುವುದು ತಪ್ಪಿದಂತಾಗಲಿದೆ. ಇನ್ನು ರೈಲ್ವೆ ಮಾರ್ಗಗಳು ಮತ್ತು ಗುಡ್ಡಗಾಡು ಪ್ರದೇಶದಂತಹ ಅಡೆತಡೆಗಳನ್ನು ತಪ್ಪಿಸುವ ಸಲುವಾಗಿ ಅಂಡರ್‌ಪಾಸ್‌ಗಳು ಮತ್ತು ಮೇಲ್ಸೇತುವೆಗಳಂತಹ ಹೆಚ್ಚುವರಿ ಮೂಲಸೌಕರ್ಯಕ್ಕಾಗಿ ಸ್ಥಳಗಳನ್ನು ಗುರುತಿಸಲು ಈಗಾಗಲೇ ಸಮೀಕ್ಷೆಗಳನ್ನು ನಡೆಸಲಾಗಿದೆ.

ಈ ಯೋಜನೆಗೆ ಈಗಾಗಲೇ ಟೆಂಡರ್‌ಗಳನ್ನು ನೀಡಲಾಗಿದೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡ ನಂತರ ಸರ್ವಿಸ್‌ ರಸ್ತೆ ನಿರ್ಮಾಣ ಕಾರ್ಯ ಪ್ರಾರಂಭ ಆಗಲಿದೆ ಎಂದು ತಿಳಿಸಿದ್ದಾರೆ.

ಸರ್ವೀಸ್ ರಸ್ತೆ ಜೊತೆಗೆ ಎಕ್ಸ್‌ಪ್ರೆಸ್‌ವೇ ಉದ್ದಕ್ಕೂ ಇರುವ ಟೋಲ್ ಪ್ಲಾಜಾಗಳಲ್ಲಿ ದಟ್ಟಣೆ ನಿಯಂತ್ರಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಉಪಗ್ರಹ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಜಾರಿ ಮಾಡಲು ಮುಂದಾಗಿದೆ. ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ ಅನ್ನು ಎರಡು ಟೋಲ್ ಸಂಗ್ರಹಣಾ ಕೇಂದ್ರಗಳಲ್ಲಿ ಸ್ಥಾಪಿಸಲಾಗುವುದು. ವಾಹನಗಳನ್ನು ನಿಲ್ಲಿಸದೆ, ಟೋಲ್ ಪಾವತಿಸಲು ಇದು ಸಹಕಾರಿಯಾಗಲಿದೆ.

ಎನ್‌ಎಚ್‌ಎಐನ ಅಂಗಸಂಸ್ಥೆಯಾದ ಐಎಚ್‌ಎಂಸಿಎಲ್ ಗ್ಲೋಬಲ್ ನ್ಯಾವಿಗೇಷನ್ ಸ್ಯಾಟಲೈಟ್ ಸಿಸ್ಟಮ್ ವ್ಯವಸ್ಥೆಯ ಸ್ಥಾಪನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದೆ. ಈಗಾಗಲೇ ಅಗತ್ಯ ಸಮೀಕ್ಷೆಗಳು ಮತ್ತು ಅಧ್ಯಯನಗಳು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭ ಆಗಲಿದೆ. ಇದರಿಂದ ಟೋಲ್ ಬೂತ್‌ಗಳಿಂದ ಉಂಟಾಗುವ ವಿಳಂಬದ ಸಮಸ್ಯೆಯನ್ನು ಕಡಿಮೆ ಮಾಡಲಿದೆ ಎಂದು ನಿರೀಕ್ಷಿಸಲಾಗಿದೆ.

ಎನ್‌ಎಚ್‌ಎಐ ಪ್ರಾದೇಶಿಕ ಅಧಿಕಾರಿ ವಿಲಾಸ್ ಪಿ.ಬ್ರಹ್ಮಂಕರ್ ಅವರು ಮಾತನಾಡಿದ್ದು, ಎಕ್ಸ್‌ಪ್ರೆಸ್‌ ವೇ ಪ್ರವೇಶ-ನಿಯಂತ್ರಿತ ಹೆದ್ದಾರಿಯಾಗಿದೆ ಮತ್ತು ಸಂಪೂರ್ಣ ಸರ್ವೀಸ್‌ ರಸ್ತೆಯ ಕೊರತೆಯಿಂದ ಹತ್ತಿರದ ಪಟ್ಟಣಗಳನ್ನು ಸಂಪರ್ಕಿಸುವ ಪ್ರಯಾಣಿಕರಿಗೆ ತುಂಬಾ ಸಮಸ್ಯೆಯಾಗಿದೆ ಎಂದು ಹೇಳಿದರು. ಇದೀಗ ನಿರ್ಮಾಣ ಆಗಲಿರುವ ಅಂಡರ್‌ಪಾಸ್‌ಗಳು, ಮೇಲ್ಸೇತುವೆಗಳು ಮತ್ತು ಸರ್ವಿಸ್ ರಸ್ತೆ ಸೇರಿದಂತೆ ಹೊಸ ಯೋಜನೆಗಳು ಈ ಸಮಸ್ಯೆಗಳಿಂದ ಮುಕ್ತಿ ನೀಡುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+