ನ.19ರಿಂದ ಬೆಂಗಳೂರು-ಮೈಸೂರು ಜೋಡಿ ಮಾರ್ಗದ ರೈಲು ಸಂಚಾರ

Recommended Video

      ನ.19ರಿಂದ ಬೆಂಗಳೂರು-ಮೈಸೂರು ಜೋಡಿ ಮಾರ್ಗದ ರೈಲು ಸಂಚಾರ | Oneindia Kannada

      ಬೆಂಗಳೂರು, ನವೆಂಬರ್ 17 : ಬಹುನಿರೀಕ್ಷಿತ ಬೆಂಗಳೂರು-ಮೈಸೂರು ದ್ವಿಪಥ ರೈಲು ಯೋಜನೆ ಕಾಮಗಾರಿ ಪೂರ್ಣಗೊಂಡಿದೆ. ನ.19ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗಲಿದೆ.

      ರೈಲ್ವೆ ಸುರಕ್ಷತಾ ಆಯುಕ್ತರು ಮಾರ್ಗದಲ್ಲಿನ ಕಾಮಗಾರಿಗಳನ್ನು ಪರಿಶೀಲನೆ ನಡೆಸಿ ರೈಲುಗಳ ಸಂಚಾರಕ್ಕೆ ಒಪ್ಪಿಗೆ ನೀಡಿದ್ದಾರೆ. 2011ರಲ್ಲಿ ಪೂರ್ಣಗೊಳ್ಳಬೇಕಿದ್ದ ಕಾಮಗಾರಿ ಮುಕ್ತಾಯಗೊಂಡು, ಕೊನೆಗೂ ರೈಲು ಸಂಚಾರಕ್ಕೆ ಅನುಮತಿ ಸಿಕ್ಕಿದೆ.

      Bengaluru-Mysuru railway double track to open on November 19

      2008ರಲ್ಲಿ ಬೆಂಗಳೂರು-ಮೈಸೂರು ಜೋಡಿ ರೈಲು ಮಾರ್ಗ ಕಾಮಗಾರಿ ಆರಂಭವಾಗಿತ್ತು. ನಿರೀಕ್ಷೆಯಂತೆ 2011ರಲ್ಲಿ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಆದರೆ, ಟಿಪ್ಪು ಸುಲ್ತಾನ್ ಕಾಲದ ಶಸ್ತ್ರಾಗಾರ ಸ್ಥಳಾಂತರದ ಕಾರಣ ಕಾಮಗಾರಿ ವಿಳಂಬವಾಗಿತ್ತು.

      ಅಮೆರಿಕ ವೂಲ್ಫ್ ಹಾಗೂ ನವದೆಹಲಿಯ ಪಿಎಸ್‌ಎಲ್ ಇಂಜಿನಿಯರಿಂಗ್ ಕಂಪನಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಸುಮಾರು 1 ಸಾವಿರ ಟನ್ ತೂಕದ ಶಸ್ತ್ರಾಗಾರವನ್ನು ಸ್ಥಳಾಂತರ ಮಾಡಿದ್ದರು.

      Bengaluru-Mysuru railway double track to open on November 19

      ನಂತರ ಶ್ರೀರಂಗಪಟ್ಟಣದಲ್ಲಿ ಬಾಕಿ ಉಳಿದಿದ್ದ ಕಾಮಗಾರಿಯನ್ನು ಪೂರ್ಣಗೊಳಿಸಿ ರೈಲ್ವೆ ಸಂಚಾರಕ್ಕೆ ಅನುಮತಿ ಪಡೆಯಲಾಗಿದೆ. ನ.19ರಿಂದ ಮಾರ್ಗದಲ್ಲಿ ರೈಲುಗಳ ಸಂಚಾರ ಆರಂಭವಾಗುತ್ತಿದೆ.

      ಟಿಪ್ಪು ಸುಲ್ತಾನ್ ಕಾಲದ ಶಸ್ತ್ರಾಗಾರಕ್ಕೆ ಧಕ್ಕೆಯಾಗದಂತೆ 13.66 ಕೋಟಿ ರೂ. ವೆಚ್ಚದಲ್ಲಿ ಸ್ಮಾರಕ ಸ್ಥಳಾಂತರ ಮಾಡಲಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+