Bengaluru Namma Metro: ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಮಾಹಿತಿ: ಮೇ30ಕ್ಕೆ ನೇರಳೆ ಮಾರ್ಗದಲ್ಲಿ ಸೇವೆ ವ್ಯತ್ಯಯ
Bengaluru Namma Metro: ಬೆಂಗಳೂರು ನಮ್ಮ ಮೆಟ್ರೋದ ಪ್ರಮುಖ ಸೇವೆಯಲ್ಲಿ ಮೇ 30ರ ಭಾನುವಾರ ವ್ಯತ್ಯಾಸವಾಗಲಿದೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ತಿಳಿಸಿದೆ. ಬೆಂಗಳೂರಿನಲ್ಲಿ ದಿನವೂ ಲಕ್ಷಾಂತರ ಜನ ಪ್ರಯಾಣಿಸುತ್ತಾರೆ. ಅದರಲ್ಲೂ ವಾರಾಂತ್ಯದಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯು ಹೆಚ್ಚಾಗಿಯೇ ಇರುತ್ತದೆ. ಇದೀಗ ವಾರಾಂತ್ಯದಲ್ಲಿಯೇ ಮೆಟ್ರೋ ಸೇವೆಯಲ್ಲಿ ಬದಲಾವಣೆಯಾಗಿದೆ. ಅದರ ವಿವರ ಇಲ್ಲಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ನೇರಳೆ ಮಾರ್ಗದಲ್ಲಿನ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ಸೇವೆಯಲ್ಲಿ ತಾತ್ಕಾಲಿಕ ವ್ಯತ್ಯಾಸ ಆಗಲಿದೆ ಎಂದು ಹೇಳಲಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (BMRCL)ವು ನೇರಳ ಮಾರ್ಗದಲ್ಲಿನ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅಗತ್ಯ ನಿರ್ವಹಣಾ ಕಾಮಗಾರಿಗಳನ್ನು ಮೇ31ರ ಭಾನುವಾರ ಕೈಗೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ನಿರ್ವಹಿಸುವ ಉದ್ದೇಶದಿಂದ, ನೇರಳೆ ಮಾರ್ಗದಲ್ಲಿನ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಮೆಟ್ರೋ ನಿಲ್ದಾಣಗಳ ನಡುವಿನ ಮೆಟ್ರೋ ರೈಲು ಸಂಚಾರವನ್ನು ಬೆಳಿಗ್ಗೆ 7ಗಂಟೆಯಿಂದ 9 ಗಂಟೆಯವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತದೆ ಎಂದು ಹೇಳಲಾಗಿದೆ.

ಈ ಅವಧಿಯಲ್ಲಿ ಮೆಟ್ರೋ ಸೇವೆಗಳು ಸಂಬಂಧಿತ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 7 ಗಂಟೆಗೆ ನಿಯಮಿತ ವೇಳಾಪಟ್ಟಿಯಂತೆ ಪ್ರಾರಂಭವಾಗಿ ಕೆಳಕಂಡ ಮಾರ್ಗಗಳಲ್ಲಿ ಎಂದಿನಂತೆ ಕಾರ್ಯನಿರ್ವಹಿಸಲಿವೆ.
ಚಲಘಟ್ಟ - ಮೈಸೂರು ರಸ್ತೆ
ಕೆಂಪೇಗೌಡ (ಮಜೆಸ್ಟಿಕ್) - ವೈಟ್‌ಫೀಲ್ಡ್ (ಕಾಡುಗೋಡಿ)
ಮಾದಾವರ - ಸಿಲ್ಕ್ ಇನ್ಸಿಟ್ಯೂಟ್
ಆರ್.ವಿ. ರಸ್ತೆ - ಬೊಮ್ಮಸಂದ್ರ
ಸಂಪೂರ್ಣ ನೇರಳ ಮಾರ್ಗದಲ್ಲಿ, ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಗಳ ನಡುವಿನ ಭಾಗವನ್ನು ಒಳಗೊಂಡಂತೆ, ಸಾಮಾನ್ಯ ಮೆಟ್ರೋ ಸೇವೆಗಳು ಬೆಳಿಗ್ಗೆ 9 ಗಂಟೆಯಿಂದ ಪುನರಾರಂಭವಾಗಲಿವೆ. ಪ್ರಯಾಣಿಕರು ಈ ತಾತ್ಕಾಲಿಕ ಸೇವಾ ವ್ಯತ್ಯಯವನ್ನು ಗಮನದಲ್ಲಿಟ್ಟುಕೊಂಡು ತಮ್ಮ ಪುಯಾಣವನ್ನು ಯೋಜಿಸಿಕೊಳ್ಳುವಂತೆ ವಿನಂತಿಸಿಕೊಳ್ಳಲಾಗಿದೆ. ಉಂಟಾಗುವ ಅನಾನುಕೂಲತೆಗೆ ಬಿಎಂಆರ್‌ಸಿಎಲ್ ವಿಷಾದ ವ್ಯಕ್ತಪಡಿಸುತ್ತದೆ ಹಾಗೂ ಪ್ರಯಾಣಿಕರ ಸಹಕಾರವನ್ನು ಕೋರುತ್ತದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ ಅಧಿಕಾರಿಗಳು ಹೇಳಿದ್ದಾರೆ.
ಇನ್ನು ಈಚೆಗೆ ಬೆಂಗಳೂರಿನ ಐಟಿಪಿಎಲ್ ಮತ್ತು ಸತ್ಯಸಾಯಿ ಆಸ್ಪತ್ರೆ ನಡುವೆ ಹಳಿಯ ಮೇಲೆ ಮರದ ಕೊಂಬೆ ಬಿದ್ದ ಕಾರಣ ವೈಟ್‌ಫೀಲ್ಡ್ ಮತ್ತು ಗರುಡಾಚಾರ್ ಪಾಳ್ಯ ನಡುವೆ ರೈಲು ಸಂಚಾರವನ್ನು ಸಂಜೆ 6 ಗಂಟೆಯಿಂದ 6.35 ವರೆಗೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿತ್ತು. ಈ ರೀತಿ ಪದೇ ಪದೇ ಸೇವೆಯಲ್ಲಿ ವ್ಯತ್ಯಾಸವಾಗುತ್ತಿರುವುದರಿಂದ ನಮ್ಮ ಮೆಟ್ರೋ ಪ್ರಯಾಣಿಕರಲ್ಲಿ ಬೇಸರ ಮೂಡಿಸಿದೆ.












Click it and Unblock the Notifications