Bengaluru Namma Metro: ಸಿಲಿಕಾನ್ ಸಿಟಿಯ ಈ ಭಾಗದಲ್ಲಿ ಭೂಮಿ ಬೆಲೆ ಏರಿಕೆ, ರಿಯಲ್ ಎಸ್ಟೇಟ್ ಬೂಮ್

Bengaluru Namma Metro: ಬೆಂಗಳೂರಿನ ವಿವಿಧ ಪ್ರದೇಶಗಳಲ್ಲಿ ಮೆಟ್ರೋ ವಿಸ್ತರಣೆ ಆಗುತ್ತಿರುವಂತೆಯೇ ಭೂಮಿಗೆ ಬಂಗಾರದ ಬೆಲೆ ಬರುವುದಕ್ಕೆ ಪ್ರಾರಂಭವಾಗಿದೆ. ಬೆಂಗಳೂರಿನಲ್ಲಿ ಮೆಟ್ರೋ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುತ್ತಿದೆ. ನಗರದಲ್ಲಿ ಮೆಟ್ರೋ ಜಾಲ ವಿಸ್ತರಿಸುತ್ತಿರುವ ಪ್ರದೇಶಗಳ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭೂಮಿ ಬೆಲೆ ಹೆಚ್ಚಳವಾಗುತ್ತಿದೆ. ಇದರೊಂದಿಗೆ ಮೆಟ್ರೋ ನಿಲ್ದಾಣದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮನೆಗಳ ಬಾಡಿಗೆ ಬೆಲೆಯೂ ಸಹ ಹೆಚ್ಚಳವಾಗುತ್ತಿದೆ. ಮೆಟ್ರೋ ನಿಲ್ದಾಣ ಸಮೀಪವಿರುವ ಪ್ರದೇಶಗಳಲ್ಲಿ ಜನ ಬಾಡಿಗೆ ಮನೆ ಮಾಡುವುದು ಹೆಚ್ಚಾಗಿರುವುದು ಸಹ ಇದಕ್ಕೆ ಕಾರಣವಾಗಿದೆ. ಬೆಂಗಳೂರು ನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯನ್ನು ತಪ್ಪಿಸುವುದಕ್ಕೆ ಹಾಗೂ ಸುಗಮ ಸಂಚಾರದ ದೃಷ್ಟಿಯಿಂದ ಜನ ಮೆಟ್ರೋ ನಿಲ್ದಾಣದ ಸಮೀಪದ ಪ್ರದೇಶಗಳಲ್ಲಿ ಮನೆ ಖರೀದಿ, ಬಾಡಿಗೆ ಮನೆ ಹುಡುಕುವುದಕ್ಕೆ ಮುಂದಾಗುತ್ತಿದ್ದಾರೆ. ಹೀಗಾಗಿ, ಬೆಂಗಳೂರಿನಲ್ಲಿ ಮೆಟ್ರೋ ಯೋಜನೆ ವಿಸ್ತರಿಸುತ್ತಿರುವ ಪ್ರದೇಶಗಳಲ್ಲಿ ರಿಯಲ್ ಎಸ್ಟೇಟ್ ಚುರುಕು ಪಡೆದುಕೊಂಡಿದೆ.

ಬೆಂಗಳೂರು ಉಪ ನಗರದಲ್ಲಿ ಬಂಪರ್

ಇನ್ನು ಬೆಂಗಳೂರು ಉಪ ನಗರದಲ್ಲಿ ರಿಯಲ್ ಎಸ್ಟೇಟ್‌ಗೆ ಬಂಪರ್ ಬಂದಿದೆ. ಬೆಂಗಳೂರು ಉಪ ನಗರ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ಯೋಜಿತ ಮೆಟ್ರೋ ನಿಲ್ದಾಣಗಳು ಬರಲಿವೆ. ಇನ್ನು ಬೆಂಗಳೂರು ಉಪ ನಗರವು ವೇಗವಾಗಿ ಬೆಳೆಯುತ್ತಿದೆ. ಅಲ್ಲದೆ ಬೆಂಗಳೂರು ಉಪನಗರಗಳಲ್ಲಿ ವಸತಿ ಹಾಗೂ ವಾಣಿಜ್ಯ ಕಟ್ಟಡಗಳ ನಿರ್ಮಾಣ ಕಾರ್ಯವು ವೇಗವಾಗಿ ನಡೆಯುತ್ತಿದೆ. ಇದೀಗ ಮೆಟ್ರೋ ಅಭಿವೃದ್ಧಿ ಹಾಗೂ ಹೊಸ ಮೆಟ್ರೋ ನಿಲ್ದಾಣಗಳ ನಿರ್ಮಾಣದಿಂದಾಗಿ ವಿವಿಧ ಪ್ರದೇಶಗಳಲ್ಲಿ ಭೂಮಿಗೆ ಬಂಗಾರದ ಬೆಲೆ ಬರುವುದಕ್ಕೆ ಪ್ರಾರಂಭವಾಗಿದೆ.

Bengaluru Namma Metro

ಬೆಂಗಳೂರಿನಲ್ಲಿ ಮೆಟ್ರೋ ಜಾಲವನ್ನು ವಿಸ್ತರಿಸಲಾಗುತ್ತಿದೆ. ಕಳೇನಾ ಅಗ್ರಹಾರ, ಜಿಗಣಿ, ಕಾಡುಗೋಡಿ ಮತ್ತು ಅತ್ತಿಬೆಲೆಯನ್ನು ಸಂಪರ್ಕಿಸುವ ಪ್ರಸ್ತಾವಿತ 73-ಕಿಮೀ ಮೆಗಾ ಕಾರಿಡಾರ್‌ನೊಂದಿಗೆ ರಿಯಲ್ ಎಸ್ಟೇಟ್ ವೇಗ ಪಡೆದುಕೊಂಡಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (BMRCL) ಈ ಯೋಜನೆಗೆ ಕಾರ್ಯಸಾಧ್ಯತಾ ವರದಿಯನ್ನು ಪೂರ್ಣಗೊಳಿಸಲಾಗಿದೆ. ಅಲ್ಲದೆ ಶೀಘ್ರದಲ್ಲೇ ಅದನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸುವ ನಿರೀಕ್ಷೆಯಿದೆ.

ನಮ್ಮ ಮೆಟ್ರೋ ಜಾಲದಲ್ಲಿಯೇ ಅತಿ ಉದ್ದವಾಗುವ ಸಾಧ್ಯತೆ ಇರುವ ಪ್ರಸ್ತಾವಿತ ಕಾರಿಡಾರ್, ಕಳೇನಾ ಅಗ್ರಹಾರದಿಂದ ಕಾಡುಗೋಡಿಗೆ 68 ಕಿಮೀ ಉದ್ದವನ್ನು ಚಲಿಸಲಿದೆ. ಜಿಗಣಿಯಿಂದ ಅತ್ತಿಬೆಲೆಗೆ 5 ಕಿ.ಮೀ ಮಾರ್ಗವನ್ನು ವಿಸ್ತರಿಸಲಾಗುತ್ತದೆ. ಈ ಮೆಟ್ರೋ ಮಾರ್ಗವು ಆನೇಕಲ್ ಬಳಿಯ ಪ್ರಸ್ತಾವಿತ ಅಂತರರಾಷ್ಟ್ರೀಯ ಗುಣಮಟ್ಟದ ಕ್ರೀಡಾ ಕ್ರೀಡಾಂಗಣಕ್ಕೂ ಸಂಪರ್ಕ ಕಲ್ಪಿಸುತ್ತದೆ. ಬನ್ನೇರುಘಟ್ಟ ರಸ್ತೆ, ಸರ್ಜಾಪುರ, ದೊಮ್ಮಸಂದ್ರ, ವರ್ತೂರು, ಜಿಗಣಿ ಮತ್ತು ಅತ್ತಿಬೆಲೆ ಸೇರಿದಂತೆ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ವಸತಿ ಮತ್ತು ಕೈಗಾರಿಕಾ ಪ್ರದೇಶಗಳನ್ನು ಸಂಪರ್ಕಿಸುವ ಮಾರ್ಗದಲ್ಲಿ 50ಕ್ಕೂ ಹೆಚ್ಚು ಹೊಸ ಮೆಟ್ರೋ ನಿಲ್ದಾಣಗಳು ಬರಲಿವೆ. ಈ ಬೆಳವಣಿಗೆಯಿಂದ ಸಹಜವಾಗಿಯೇ ರಿಯಲ್ ಎಸ್ಟೇಟ್‌ಗೆ ಬೂಸ್ಟ್‌ ಬಂದಿದೆ.

ಈ ಯೋಜನೆಯು ಬೆಂಗಳೂರಿನ ದಕ್ಷಿಣ ಮತ್ತು ಪೂರ್ವ ಬೆಳವಣಿಗೆಯ ಕಾರಿಡಾರ್‌ಗಳ ನಡುವಿನ ಸಂಪರ್ಕವನ್ನು ಗಮನಾರ್ಹವಾಗಿ ಸುಧಾರಸಲಿದೆ. ಈ ಪ್ರದೇಶಗಳಲ್ಲಿ ವಸತಿ ಹಾಗೂ ವಾಣಿಜ್ಯ ಬಳಕೆಗೆ ಹೆಚ್ಚು ಬೇಡಿಕೆ ಸಹ ಸೃಷ್ಟಿಯಾಗಿದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+