Bengaluru Namma Metro: ಬೆಂಗಳೂರು ನಮ್ಮ ಮೆಟ್ರೋದಲ್ಲಿ ಮತ್ತೆ ಸಮಸ್ಯೆ; ಪೀಕ್ ಅವರ್‌ನಲ್ಲಿ ಪರದಾಡಿದ ಜನ!
Bengaluru Namma Metro: ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರದಲ್ಲಿ ಮತ್ತೆ ಸಮಸ್ಯೆ ಆಗಿದೆ. ಬೆಂಗಳೂರು ನಮ್ಮ ಮೆಟ್ರೋದ ಹಳದಿ ಮಾರ್ಗ (Yellow Line)ದಲ್ಲಿ ಆಗಸ್ಟ್ 6ರ ಗುರುವಾರ ಮತ್ತೆ ಸಮಸ್ಯೆ ಆಗಿದೆ. ಬೆಂಗಳೂರಿನ ಈ ಮಾರ್ಗದಲ್ಲಿ ಕಳೆದ ಕೆಲವೇ ದಿನಗಳ ಅಂತರದಲ್ಲಿ ಪದೇ ಪದೇ ರೈಲು ಸಂಚಾರ ಸೇವೆಯಲ್ಲಿ ವ್ಯತ್ಯಾಸವಾಗುತ್ತಿದೆ. ಬೆಂಗಳೂರಿನಲ್ಲಿ ಪೀಕ್ ಅವರ್‌ನಲ್ಲಿ ಮೆಟ್ರೋ ಬಳಸುವವರ ಸಂಖ್ಯೆ ಹೆಚ್ಚಾಗಿದೆ. ಆದರೆ ಬೆಳ್ಳಂಬೆಳಿಗ್ಗೆಯೇ ಮೆಟ್ರೋ ಸಂಚಾರದಲ್ಲಿ ವ್ಯತ್ಯಾಸ ಹಾಗೂ ವಿಳಂಬವಾಗುತ್ತಿರುವುದು ನಮ್ಮ ಮೆಟ್ರೋದ ಪ್ರಯಾಣಿಕರಿಗೆ ಭಾರೀ ಸಂಕಷ್ಟವನ್ನು ತಂದೊಡ್ಡಿದೆ. ಬೆಂಗಳೂರಿನ ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ರಾಗಿಗುಡ್ಡ ಸೇರಿದಂತೆ ವಿವಿಧ ಮೆಟ್ರೋ ನಿಲ್ದಾಣಗಳಲ್ಲಿ ರೈಲು ಹಲವು ನಿಮಿಷಗಳ ನಿಂತಿದ್ದು, ಪ್ರತಿ ನಿಲ್ದಾಣದಲ್ಲೂ ಪ್ರಯಾಣಿಕರು ಸಂಕಷ್ಟ ಅನುಭವಿಸಿದ್ದಾರೆ.
ಬೆಂಗಳೂರಿನ ನಮ್ಮ ಮೆಟ್ರೋದ ವಿವಿಧ ಮಾರ್ಗಗಳಲ್ಲಿ ಕಳೆದ ಮೂರು ತಿಂಗಳ ಅವಧಿಯಲ್ಲಿ ಹಲವು ಬಾರಿ ನಮ್ಮ ಮೆಟ್ರೋದ ಸಂಚಾರದಲ್ಲಿ ವ್ಯತ್ಯಾಸವಾಗಿದೆ. ಅದರಲ್ಲೂ ಮುಖ್ಯವಾಗಿ ಪೀಕ್ ಅವರ್‌ನಲ್ಲಿಯೇ ಸಮಸ್ಯೆ ಎದುರಾಗುತ್ತಿದ್ದು, ನಮ್ಮ ಮೆಟ್ರೋ ಇದಕ್ಕೆ ಸೂಕ್ತ ಪರಿಹಾರ ಕಂಡುಕೊಳ್ಳುವಲ್ಲಿ ವಿಫಲವಾಗುತ್ತಿದೆ ಎನ್ನುವ ಗಂಭೀರ ಆರೋಪ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ.

Bengaluru Namma Metro: ಪದೇ ಪದೇ ಸಮಸ್ಯೆ
ಇನ್ನು ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಪದೇ ಪದೇ ಸಮಸ್ಯೆ ಎದುರಾಗುತ್ತಿದೆ. ಮೆಟ್ರೋದ ಹಸಿರು ಮಾರ್ಗದಲ್ಲಿ ಜುಲೈ 21ರಂದು ಸಂಚಾರ ಸೇವೆ ವ್ಯತ್ಯಾಸವಾಗಿತ್ತು. ಈ ಮಾರ್ಗದಲ್ಲಿ ವಿದ್ಯುತ್ ವ್ಯತ್ಯಯದ ಕಾರಣಕ್ಕೆ ಸಮಸ್ಯೆ ಎದುರಾಗಿತ್ತು. ಹೀಗಾಗಿ, ಯಶವಂತಪುರದಿಂದ ನಾಗಸಂದ್ರ ನಡುವೆ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತಗೊಳಿಸಲಾಗಿತ್ತು.
ಆದರೆ ಇಂದು ಮೆಟ್ರೋ ಸಂಚಾರ ಪೂರ್ಣ ಪ್ರಮಾಣದಲ್ಲಿ ಸ್ಥಗಿತವಾಗದಿದ್ದರೂ, ನಮ್ಮ ಮೆಟ್ರೋದ ಹಳದಿ ಮಾರ್ಗದಲ್ಲಿ ಪ್ರತಿ ನಿಲ್ದಾಣದಲ್ಲೂ ತಡವಾಗುತ್ತಿದೆ. ಪೀಕ್ ಅವರ್‌ನಲ್ಲಿಯೇ ಸಮಸ್ಯೆ ಎದುರಾಗಿರುವುದರಿಂದ ಬೆಳಿಗ್ಗೆ ಆಫೀಸ್‌ಗೆ ಹೋಗುವವರು, ಶಾಲಾ - ಕಾಲೇಜುಗಳಿಗೆ ತೆರಳುವವರು ಸೇರಿದಂತೆ ಹಲವರಿಗೆ ಸಮಸ್ಯೆ ಎದುರಾಗಿದೆ. ಈ ಸಂಬಂಧ ನಮ್ಮ ಮೆಟ್ರೋದಿಂದ ಅಧಿಕೃತ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


Click it and Unblock the Notifications
