Namma Metro Recruitment: ಬೆಂಗಳೂರು ಮೆಟ್ರೋದಲ್ಲಿ ಉದ್ಯೋಗಗಳು ಖಾಲಿ ಇವೆ
ಬೆಂಗಳೂರು, ಮಾರ್ಚ್ 16: ಬೆಂಗಳೂರಿನಲ್ಲೇ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಸುವರ್ಣ ಅವಕಾಶ ಇದೆ.
ಬೆಂಗಳೂರು ನಮ್ಮ ಮೆಟ್ರೋ ರೈಲು ನಿಗಮದಲ್ಲಿ (BMRCL) ಕೆಲಸಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಕೂಡಲೇ ಆನ್‌ಲೈನ್ ಮತ್ತು ಆಫ್‌ಲೈನ್ ಎರಡು ವಿಧಾನದಲ್ಲೂ ಅರ್ಜಿ ಸಲ್ಲಿಸಬೇಕು ಎಂದು ನಮ್ಮ ಮೆಟ್ರೋ ನೇಮಕಾತಿ ಅಧಿಸೂಚನೆ ತಿಳಿಸಿದೆ.
ಬೆಂಗಳೂರು ಮೆಟ್ರೋ ರೈಲು ನಿಗಮದಲ್ಲಿ (BMRCL) ರೈಲು ಆಪರೇಟರ್ ಹುದ್ದೆಗಳು ಖಾಲಿ ಇವೆ. ಇವುಗಳ ನೇಮಕಾತಿ ಪ್ರಕ್ರಿಯೆ ಆರಂಭಿಸಿರುವ ಅಧಿಕಾರಿಗಳು ಅರ್ಹ ಅಭ್ಯರ್ಥಿಗಳಿಂದ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಇದೊಂದು ಸರ್ಕಾರಿ ಹುದ್ದೆಯಾಗಿದ್ದು, ಬೆಂಗಳೂರು ವ್ಯಾಪ್ತಿಯಲ್ಲಿ ಪೋಸ್ಟಿಂಗ್ ಸಿಗುತ್ತದೆ. ಆದ್ದರಿಂದ ಅರ್ಹ ಆಸಕ್ತರು ಕೂಡಲೇ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮುಂದಿನ ತಿಂಗಳು ಏಪ್ರಿಲ್ 04 ಕೊನೆ ದಿನವೆಂದು ನಿಗದಿಪಡಿಸಲಾಗಿದೆ.

ನೇಮಕಾತಿ ಪೂರ್ಣ ಮಾಹಿತಿ
ನೇಮಕಾತಿ ಸಂಸ್ಥೆ: ಬೆಂಗಳೂರು ಮೆಟ್ರೋ ರೈಲು ನಿಗಮ (BMRCL)
ಖಾಳಿ ಹುದ್ದೆಗಳು: 50
ಹುದ್ದೆಗಳ ಹೆಸರು: ರೈಲು ಆಪರೇಟರ್ (TO)
ಪೋಸ್ಟಿಂಗ್: ಬೆಂಗಳೂರು
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್ ಅಥವಾ ಆಫ್‌ಲೈನ್
ಮಾಸಿ ವೇತನ: ನಿಯಮಾನುಸಾರ
ಶೈಕ್ಷಣಿಕ ಅರ್ಹತೆಗಳೇನು?
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ದ ಅಧಿಕೃತ ಪ್ರಕಾರ, ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 10 ನೇ ತರಗತಿಯನ್ನು ಪೂರ್ಣಗೊಳಿಸಿರಬೇಕು. ಯಾವುದೇ ಶೈಕ್ಷಣಿಕ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಕೋರ್ಸ್‌ನಲ್ಲಿ ಪದವಿ/ದೂರಸಂಪರ್ಕ ಅಥವಾ ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ ಇಲ್ಲವೇ ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್ ಅಥವಾ ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ ಅಥವಾ ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ಪದವಿ ಪೂರ್ಣಗೊಳಿಸಿರಬೇಕು ಎಂದು ತಿಳಿಸಿದೆ.

ವಯೋಮಿತಿ ಮತ್ತು ವೇತನ ವಿವರ
ಬೆಂಗಳೂರು ಮೆಟ್ರೋ ರೈಲು ನಿಗಮ (BMRCL) ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವಂತೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ವರ್ಷದ ಒಳಗೆ ಇರಬೇಕು ಎಂದು ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.
ಆಯ್ಕೆ ಆದ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ಸಹಿತ ತಿಂಗಳಿಗೆ 35,000 ರಿಂದ 82,660 ರೂಪಾಯಿ ವೇತನ ನೀಡಲಾಗುವುದು. ಇದರೊಂದಿಗೆ ಹಾಲಿ ನಿಮಗದ ಉದ್ಯೋಗಿಗಳು ಪಡೆಯುವ ಭತ್ಯೆಗಳೆಲ್ಲವು ಹೊಸ ಉದ್ಯೋಗಿಗಳಿಗೂ ನಿಯಮಗಳ ಅನುಗುಣವಾಗಿ ಸಿಗಲಿವೆ ಎಂದು ತಿಳಿಸಲಾಗಿದೆ.
ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಕೆ ವಿವರ
ಆಸಕ್ತ ಅಭ್ಯರ್ಥಿಗಳು ಕೂಡಲೇ 'ಜನರಲ್ ಮ್ಯಾನೇಜರ್ (HR), ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್, 3ನೇ ಮಹಡಿ, ಬಿಎಂಟಿಸಿ ಕಾಂಪ್ಲೆಕ್ಸ್, ಕೆಎಚ್ ರಸ್ತೆ, ಶಾಂತಿನಗರ, ಬೆಂಗಳೂರು - 560027'' ಇಲ್ಲಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ನಮ್ಮ ಮೆಟ್ರೋ ವೆಬ್‌ಸೈಟ್‌ಗೆ ಭೇಟಿ ನೀಡಬೇಕು.












Click it and Unblock the Notifications