Namma Metro: ಬೆಂಗಳೂರು ನಮ್ಮ ಮೆಟ್ರೋ 4 ಕಡೆ ವಿಸ್ತರಣೆ; ಗುಲಾಬಿ ಮಾರ್ಗ ಆರಂಭ ದಿನಾಂಕ ಹೇಳಿದ ಡಿಕೆ ಶಿವಕುಮಾರ್: ಯಾವಾಗ ಗೊತ್ತಾ?
ಬೆಂಗಳೂರು, ಆಗಸ್ಟ್ 23: ನಮ್ಮ ಮೆಟ್ರೋ ನಾಲ್ಕು ಮಾರ್ಗಗಳಲ್ಲಿ ವಿಸ್ತರಣೆ ಜತೆಗೆ ಬಹುನಿರೀಕ್ಷಿಯ ಗುಲಾಬಿ (ಪಿಂಕ್) ಮಾರ್ಗ ಆರಂಭದ ಸಂಭಾವ್ಯ ದಿನಾಂಕವನ್ನು ಶುಕ್ರವಾರದ ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರು ಅಭಿವೃದ್ಧಿ ಕಾರ್ಯಗಳ ಸಮಸ್ಯೆಗಳು, ಅತಿವೃಷ್ಟಿಯಿಂದಾಗಿರುವ ನಷ್ಟ ಹಾಗೂ ಕೇಂದ್ರದ ಅನುದಾನಗಳ ಬಗ್ಗೆ ವಿಧಾನಸಭೆಯಲ್ಲಿ ನಿಯಮಾವಳಿ 69ರ ಅಡಿಯಲ್ಲಿ ಶುಕ್ರವಾರ ನಡೆದ ವಿಶೇಷ ಚರ್ಚೆಗೆ ಡಿ ಕೆ ಶಿವಕುಮಾರ್ ಅವರು ಉತ್ತರಿಸಿದರು.
ಹೊಸಕೋಟೆ, ನೆಲಮಂಗಲ, ಹೊಸೂರು, ತಾವರೆಕೆರೆ ಭಾಗಕ್ಕೆ ಮೆಟ್ರೋ ಸಂಪರ್ಕ ಕಲ್ಪಿಸಲು ಡಿಪಿಆರ್ ಕರೆಯಲಾಗಿದೆ. ಕಾಳೇನ ಅಗ್ರಹಾರದಿಂದ ತಾವರೆಕೆರೆಗೆ ಸಂಪರ್ಕ ಕಲ್ಪಿಸುವ ನೇರಳೆ ಮಾರ್ಗವು 7.5 ಕಿಮೀ ಇದು ಡಿಸೆಂಬರ್ 26 ರ ಹೊತ್ತಿಗೆ ಸಾರ್ವಜನಿಕ ಸೇವೆಗೆ ದೊರೆಯಲಿದೆ. ಈ ಎಲ್ಲಾ ಯೋಜನೆಗಳ ಬಗ್ಗೆ ಪ್ರಧಾನಿಯವರಿಗೆ ತಿಳಿಸಿ ಸೂಕ್ತ ಅನುದಾನಕ್ಕೆ ಮನವಿ ಸಲ್ಲಿಸಿದ್ದೇನೆ ಎಲ್ಲರೂ ಒತ್ತಡ ಹಾಕಿಸಿದರೆ ನಿಮ್ಮ, ನಮ್ಮ ಬೆಂಗಳೂರು ಅಭಿವೃದ್ಧಿಯಾಗಲಿದೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಈ ಮೂಲಕ ನಮ್ಮ ಮೆಟ್ರೋ 4 ನೇ ಮಾರ್ಗವು ಜನರ ಸೇವೆಗೆ ಲಭ್ಯವಾಗಲಿದೆ.

ಕಸದ ಮಾಫಿಯಾ ತೊಡೆದು ಹಾಕಲು ಯಾರಿಂದಲೂ ಸಾಧ್ಯವಿಲ್ಲ. ಬಿಜೆಪಿ ಕಾಲದಲ್ಲಿ ಕರೆದಿದ್ದ ಟೆಂಡರ್ ಅನ್ನು ನ್ಯಾಯಾಲಯಕ್ಕೆ ಹೋಗಿ ನಿಲ್ಲಿಸಲಾಯಿತು. ಈಗ 33 ಪ್ಯಾಕೇಜ್ ಗಳನ್ನು ಮಾಡಿ ಕಸದ ಟೆಂಡರ್ ಕರೆಯಲಾಗಿದೆ. ಬೆಂಗಳೂರಿನ ಹೊರವಲಯದಲ್ಲಿ ನಾಲ್ಕು ದಿಕ್ಕುಗಳಲ್ಲಿ ಕಸ ವಿಲೇವಾರಿ ಘಟಕ ಮಾಡಲು ಉದ್ದೇಶಿಸಲಾಗಿದ್ದು, ಸಧ್ಯಕ್ಕೆ ದೊಡ್ಡಬಳ್ಳಾಪುರದಲ್ಲಿ ಹಾಗೂ ನೈಸ್ ಸಂಸ್ಥೆಯವರ ಜೊತೆ 100 ಎಕರೆ ಜಾಗ ಪಡೆದು ಇದನ್ನು ನಿರ್ಮಿಸಲಾಗುತ್ತಿದೆ.
ಇನ್ನುಳಿದಂತೆ ಇತರೆ ಎರಡು ಭಾಗದಲ್ಲಿ ಇದನ್ನು ಮಾಡಬೇಕಿದೆ. ಮುಂದೆ ಬೆಂಗಳೂರಿನ ಹೊರ ಭಾಗದಲ್ಲಿ ಎಲೆಕ್ಟ್ರಾನಿಕ ಸಿಟಿ, ರಾಮನಗರ, ಚನ್ನಪಟ್ಟಣ, ಮಾಗಡಿ ಭಾಗದಲ್ಲಿಯೂ ಮಾಡಲು ಸಿದ್ಧತೆ ಮಾಡುತ್ತಿದ್ದೇವೆ. ಈಗಿನ ಹೊಸ ತಂತ್ರಜ್ಞಾನದಲ್ಲಿ ಕಸವನ್ನು ಮೂರು ದಿನಗಳಲ್ಲಿ ಖಾಲಿ ಮಾಡಬಹುದು. ಅಲ್ಲದೇ ವಾಸನೆ ಮುಕ್ತವಾದ ಘಟಕಗಳನ್ನು ನಿರ್ಮಾಣ ಮಾಡಬಹುದಾಗಿದೆ. ಇದಕ್ಕಾಗಿ ಅಧಿಕಾರಿಗಳ ತಂಡವನ್ನು ಕರೆದುಕೊಂಡು ಚೆನ್ನೈ, ಹೈದರಾಬಾದ್, ದೆಹಲಿಗೆ ಹೋಗಿ ಅಧ್ಯಯನ ಮಾಡಿದ್ದೇವೆ ಎಂದು ವಿವರಿಸಿದರು.
ರಸ್ತೆ ಬದಿ ವ್ಯಾಪಾರಿಗಳಿಗೆ 7200 ತಳ್ಳುವ ಗಾಡಿ ನೀಡಲಾಗಿದೆ. ವಿಶ್ವಬ್ಯಾಂಕ್ ನೆರವಿನಿಂದ 2 ಸಾವಿರ ಕೋಟಿ ರೂ. ಮೊತ್ತದಲ್ಲಿ 173 ಕಿ.ಮೀ ಮಳೆ ನೀರುಗಾಲುವೆಗಳ ಅಭಿವೃದ್ಧಿಗೆ 16 ಪ್ಯಾಕೇಜ್ ಗಳಲ್ಲಿ ಕೆಲಸ ಕೈಗೆತ್ತಿಕೊಳ್ಳಲಾಗಿದೆ. 800 ಕಿಮೀನಲ್ಲಿ 480 ಕಿ.ಮೀ ಕಾಮಗಾರಿ ಮುಗಿದಿದ್ದು, 195 .ಕಿಮೀ ಕಾಮಗಾರಿ ನಡೆಯುತ್ತಿದೆ. 170 ಕಿ.ಮೀ ಬಾಕಿ ಉಳಿದಿದೆ ಇದಕ್ಕೆ ಟೆಂಡರ್ ಕರೆಯಲಾಗಿದೆ. ಕೆರೆಗಳ ಇಂಟರ್ ಲಿಂಕಿಂಗ್ ಗೆ 1700 ಕೋಟಿ ಮೊತ್ತದ ಯೋಜನೆ ಕೈಗೆತ್ತಿಕೊಳ್ಳಲಾಗಿದೆ ಎಂದರು.
"ಪಿಆರ್ ಆರ್ ಯೋಜನೆಗೆ ವಶಪಡಿಸಿಕೊಂಡಿರುವ ಭೂಮಿಯನ್ನು ಡಿನೋಟಿಫೈ ಮಾಡಿ ನಾನು ಜೈಲಿಗೆ ಹೋಗಲು ತಯಾರಿಲ್ಲ. ನನ್ನ ತಾಯಿಯ ಭೂಮಿಯೇ ಹೋಗಿದೆ. ಶಿವರಾಂ ಕಾರಂತ ಬಡಾವಣೆಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲು ಆಗಿಲ್ಲ. ನ್ಯಾಯಾಲಯದಲ್ಲಿ ತಡೆಯಾಜ್ಞೆ ತರಲಾಗಿದೆ. ಪರಿಹಾರಕ್ಕೆ 60:40 ಅನುಪಾತದಲ್ಲಿ ಒಪ್ಪಿಗೆ ಸೂಚಿಸಲಾಗಿದೆ ಎಂದರು.












Click it and Unblock the Notifications