Bengaluru Metro: ಶೀಘ್ರದಲ್ಲೇ ನಮ್ಮ ಮೆಟ್ರೋ ಟಿಕೆಟ್ ದರ ಹೆಚ್ಚಳ ಸಾಧ್ಯತೆ.!-ಕಾರಣ ಏನು ಗೊತ್ತಾ?
Bengaluru Metro: ಬೆಂಗಳೂರು ಮೆಟ್ರೋ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಬೆಲೆ ಏರಿಕೆ ವಿಚಾರದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಈಗಾಗಲೇ ಬೆಲೆ ಏರಿಕೆಯಿಂದ ನಗರದ ಜನರು ಬೇಸತ್ತಿದ್ದು, ಇದರ ನಡುವೆಯೇ ಇಲ್ಲಿನ ಜನರ ಜೀವನಾಡಿ ಸಾರಿಗೆಯಲ್ಲೊಂದಾದ ನಮ್ಮ ಮೆಟ್ರೋದ ಟಿಕೆಟ್ ದರ ಹೆಚ್ಚಳ ಮಾಡುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. ಹಾಗಾದರೆ ಈ ನಿರ್ಧಾರ ಯಾಕೆ ಎಂದು ಇಲ್ಲಿ ತಿಳಿಯಿರಿ.
ಬೆಂಗಳೂರಿಗರಿಗೆ ಇದೀಗ ಶಾಕ್ ಎದುರಾಗಿದ್ದು, ಶೀಘ್ರವೇ ನಮ್ಮ ಮೆಟ್ರೋ ರೈಲಿನ ಟಿಕೆಟ್ ದರ ಹೆಚ್ಚಳ ಆಗಲಿದೆ ಎಂದು ತಿಳಿದುಬಂದಿದೆ.

ನಮ್ಮ ಮೆಟ್ರೋ ನಿಲ್ದಾಣಗಳಲ್ಲಿ ಇತ್ತೀಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಈ ದೃಷ್ಟಿಯಿಂದ ಮೆಟ್ರೋ ರೈಲ್ವೇ ನಿಲ್ದಾಣದಲ್ಲಿ ಕೆಲವು ಸುರಕ್ಷಿತ ಕ್ರಮಗಳನ್ನು ಕೈಗೊಳ್ಳಲಿದೆ. ರೈಲ್ವೇ ನಿಲ್ದಾಣದಲ್ಲಿ ಪ್ಲಾಟ್ ಫಾರಂ ಸ್ಕ್ರೀನ್ ಅಳವಡಿಸಲು ಚಿಂತನೆ ನಡೆಸಲಾಗಿದ್ದು, ಇದಕ್ಕೆ 6-7 ಕೋಟಿ ರೂಪಾಯಿ ವೆಚ್ಚ ಆಗಲಿದೆ. ಆದ್ದರಿಂದ ಬಿಎಂಆರ್‌ಸಿ ಎಲ್ ಟಿಕೆಟ್ ದರ ಏರಿಕೆ ಮಾಡಲು ಚರ್ಚೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಈ ವ್ಯವಸ್ಥೆಯನ್ನು ಮಾಡಬೇಕೆಂದರೆ ಹೆಚ್ಚಿನ ಹಣ ಬೇಕಾಗುತ್ತದೆ. ಆದ್ದರಿಂದ ಟಿಕೆಟ್ ದರ ಹೆಚ್ಚಳ ಮಾಡುವುದು ಅನಿವಾರ್ಯ ಆಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ.
ಆತ್ಮಹತ್ಯೆ ಪ್ರಕರಣಗಳು ಹೆಚ್ಚುತ್ತಿದ್ದಂತೆ ಎಚ್ಚೆತ್ತುಕೊಂಡ ಬಿಎಂಆರ್‌ಸಿಎಲ್ ಬೆಂಗಳೂರಿನ ಮೆಜೆಸ್ಟಿಕ್ ಸೇರಿದಂತೆ ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕಂಬಿಗಳನ್ನು ಅಳವಡಿಕೆ ಮಾಡಿತ್ತು. ಆದರೂ ಆತ್ಮಹತ್ಯೆ ಪ್ರಕರಣಗಳು ದಾಖಲಾಗುತ್ತಲೇ ಇವೆ. ಆದ್ದರಿಂದ ಬಿಎಂಆರ್‌ಸಿಎಲ್ ಈ ನಿರ್ಧಾರಕ್ಕೆ ಬಂದಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಆಹತ್ಮಹತ್ಯೆ ಮಾಡಿಕೊಂಡ ವ್ಯಕ್ತಿ: ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಈ ಮೂಲಕ ಮೆಟ್ರೋ ಸುದ್ದಿಯಾಗುತ್ತಲೇ ಇದೆ. ಇನ್ನು ಇದೀಗ 49 ವರ್ಷದ ವ್ಯಕ್ತಿಯೊಬ್ಬರು ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಇಂದು (ಆಗಸ್ಟ್ 08) ಮಧ್ಯಾಹ್ನ ನಡೆದಿದೆ.
ಅದರಲ್ಲೂ ಬೆಂಗಳೂರಿನ ನಮ್ಮ ಮಟ್ರೋ ಭಾರೀ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ನಗರದಲ್ಲಿ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಅಷ್ಟೇ ಅಲ್ಲದೆ, ಈ ಹಿಂದೆಯೂ ಸಹ ಹಲವರು ಆಹತ್ಮಹತ್ಯೆಗೆ ಯತ್ನಿಸಿದ ಘಟನೆಗಳು ಕೂಡ ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ನಡೆದಿವೆ. ಹಾಗೆಯೇ ಇಂತಹಹದ್ದೇ ಘಟನೆಯೊಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ (ಆಗಸ್ಟ್ 08) ನಡೆದಿದೆ.
ಸೂರಜ್ಮಲ್ ಮೆಟ್ರೋ ನಿಲ್ದಾಣದಲ್ಲಿ ನಿನ್ನೆ ಮಧ್ಯಾಹ್ನದ ವೇಳಗೆ ಫ್ಲಾಟ್ಫಾರ್ಮ್ 1ರಿಂದ ರಸ್ತೆಗೆ ಜಿಗಿದು 49 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿದ್ದು, ಈ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹರೀಶ್ ಎಂದು ಗುರುತಿಸಲಾಗಿದ್ದು, ಈತ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಿದೆ.
ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭದ್ರತಾ ಸಿಬ್ಬಂದಿಗಳು ವ್ಯಕ್ತಿಯನ್ನು ರಕ್ಷಿಸಲು ಮುಂದಾದರೂ ಕೂಡ ನಿರಾಕರಿಸಿ ರಸ್ತೆಗೆ ಜಿಗಿದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.












Click it and Unblock the Notifications