ಮೆಟ್ರೋ ಕಾಮಗಾರಿ: ಶಿವಾಜಿನಗರದ ಈ ರಸ್ತೆಗಳಲ್ಲಿ ಸಂಚಾರ ಮಾಡಿದ್ರೆ ಪಕ್ಕಾ ಲೇಟ್ ಆಗುತ್ತೆ.... 30 ದಿನ ಈ ಕಡೆ ಹೋಗ್ಬೇಡಿ

ಮೆಟ್ರೋ ಕಾಮಗಾರಿ ಕಾರಣ ಬೆಂಗಳೂರಿನ ಕೆಲ ರಸ್ತೆಗಳಲ್ಲಿ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ನವೆಂಬರ್ 11ರಿಂದ ಮುಂದಿನ 30 ದಿನ ಶಿವಾಜಿನಗರದ ಕೆಲ ರಸ್ತೆಗಳಲ್ಲಿ ಸಂಚಾರ ಬಂದ್ ಆಗಲಿದ್ದು ಪರ್ಯಾಯ ಮಾರ್ಗಗಳನ್ನು ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಹಾಗಾದರೆ ಶಿವಾಶಿನಗರದ ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ನಿಷೇಧ ಹೇರಲಾಗಿದೆ. ಯಾವ ಪರ್ಯಾಯ ಮಾರ್ಗಗಳಿವೆ ಇಲ್ಲಿದೆ ಮಾಹಿತಿ..

ನವೆಂಬರ್‌ 11ರ ನಂತರ ಶಿವಾಜಿ ಸರ್ಕಲ್ ಮತ್ತು ಜ್ಯೋತಿ ಕೆಫೆ ಬಳಿ ಮೆಟ್ರೋ ಕಾಮಗಾರಿ ನಡೆಯಲಿದೆ. ಹೀಗಾಗಿ ಸೋಮವಾರದಿಂದ ಶಿವಾಜಿನಗರದ ಕೆಲ ರಸ್ತೆಗಳಲ್ಲಿ ವಾಹನ ಸಂಚಾರಕ್ಕೆ ಅವಕಾಶಗಳು ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ವಾಹನ ಸಂಚಾರರು ಸಹಕರಿಸಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ. ಹಾಗಾದರೆ ಯಾವೆಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧಿಸಲಾಗುತ್ತದೆ ಎಂದು ತಿಳಿಯೋಣ.

bengaluru namma metro works traffic restrictionon in shivajinagar for 30 days

ಶಿವಾಜಿನಗರ ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಆಗಮಿಸುವ ಬಿಎಂಟಿಸಿ ಬಸ್‌ ಮತ್ತು ಎಲ್ಲಾ ಮಾದರಿಯ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರಲಾಗಿದೆ. ಜೊತೆಗೆ ಶಿವಾಜಿನಗರ ಬಿಎಂಟಿಸಿ ಬಸ್‌ ನಿಲ್ದಾಣ ಹಾಗೂ ಜೊತಿ ಕೆಫೆ ಕಡೆಗೆ ಶಿವಾಜಿ ಸರ್ಕಲ್ ಕಡೆಯಿಂದ ಬರುವ ವಾಹನಗಳಿಗೂ ನಿರ್ಬಂಧ ಹೇರಲಾಗಿದೆ. ಹಾಗಾದರೆ ಪರ್ಯಾಯ ಮಾರ್ಗಗಳು ಯಾವುವು ಎಂದು ಈಗ ತಿಳಿಯೋಣ.

ಪರ್ಯಾಯ ಮಾರ್ಗಗಳು ಹೀಗಿದೆ...

ಶಿವಾಜಿನಗರ ಬಿಎಂಟಿಸಿ ಬಸ್‌ ನಿಲ್ದಾಣಕ್ಕೆ ಬಾಳೆಕುಂದ್ರಿಯಿಂದ ಶಿವಾಜಿ ಸರ್ಕಲ್ ಮೂಲಕ ಆಗಮಿಸುವ ಬಿಎಂಟಿಸಿ ಬಸ್‌ ಮತ್ತು ಎಲ್ಲಾ ಮಾದರಿಯ ವಾಹನಗಳು ಟ್ರಾಫಿಕ್ ಹೆಡ್ ಕ್ವಾರ್ಟರ್ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕಕ್ಷನ್‌ನಲ್ಲಿ ಎಡ ತಿರುವು ಪಡೆದು ಸೆಂಟ್ರಲ್ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಿಎಂಟಿಸಿ ಬಸ್‌ ನಿಲ್ದಾಣದ ಕಡೆಗೆ ಸಂಚಾರ ಮಾಡಬಹುದು.

ಶಿವಾಜಿನಗರ ಬಿಎಂಟಿಸಿ ಬಸ್‌ ನಿಲ್ದಾಣ ಹಾಗೂ ಜೊತಿ ಕೆಫೆ ಕಡೆಗೆ ಶಿವಾಜಿ ಸರ್ಕಲ್ ಕಡೆಯಿಂದ ಬರುವ ವಾಹನಗಳು ಶಿವಾಜಿ ಸರ್ಕಲ್‌ನಲ್ಲಿ ಬಲ ತಿರುವು ಪಡೆದು ವೆಂಕಟಸ್ವಾಮಿ ನಾಯ್ಡು ಮೂಲಕ ಬಾಳೆಕುಂದ್ರಿ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಹೆಡ್‌ ಕ್ವಾಟರ್ಸ್‌ ಜಂಕ್ಷನ್‌ನಲ್ಲಿ ಎಡ ತಿರುವು ಪಡೆದು ಇನ್‌ಫೆಂಟ್ರಿ ರಸ್ತೆಯ ಮೂಲಕ ಸೆಂಟ್ರಲ್ ಸ್ಟ್ರೀಟ್ ಜಂಕ್ಷನ್‌ನಲ್ಲಿ ಎಡ ತಿರುವು ತೆರೆದುಕೊಂಡು ಸೆಂಟ್ರಲ್‌ ಸ್ಟ್ರೀಟ್ ರಸ್ತೆಯ ಮೂಲಕ ಶಿವಾಜಿನಗರ ಬಸ್‌ ನಿಲ್ದಾಣ ತಲುಪಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+