E Khata Update: ಇ - ಖಾತಾ ಇಂದಿನಿಂದ ಹೊಸ ಮಾದರಿ ಜಾರಿ, ಆಸ್ತಿದಾರರಿಗೆ ಭರ್ಜರಿ ಗುಡ್‌ನ್ಯೂಸ್
ಬೆಂಗಳೂರು: ಬೆಂಗಳೂರಿನ ಆಸ್ತಿದಾರರಿಗೆ ಕರ್ನಾಟಕ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಇ ಖಾತಾ ವಿಚಾರದಲ್ಲಿ ಮಹತ್ವದ ಗುಡ್‌ನ್ಯೂಸ್ ಕೊಟ್ಟಿದೆ. ಆಸ್ತಿದಾರರು ಇ - ಖಾತಾ ಪಡೆದುಕೊಳ್ಳುವುದಕ್ಕೆ ಸಮಸ್ಯೆ ಆಗುತ್ತಿತ್ತು. ಇದೀಗ ಇ ಖಾತಾ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಮತ್ತೊಂದು ಮಹತ್ವದ ಅಪ್ಡೇಟ್ಸ್ ನೀಡಲಾಗಿದೆ. ಈ ಹೊಸ ನಿಯಮವು ಇಂದಿನಿಂದಲೇ (ಡಿಸೆಂಬರ್ 18ರಿಂದಲೇ ಜಾರಿಗೆ) ಬರುತ್ತಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಆಸ್ತಿಗಳ ಮಾರಾಟ ಹಾಗೂ ಖರೀದಿಯಲ್ಲಿ ಆಗುತ್ತಿರುವ ಮೋಸವನ್ನು ತಪ್ಪಿಸುವುದು ಹಾಗೂ ಪ್ರಾಪರ್ಟಿ ಟ್ಯಾಕ್ಸ್‌ನಿಂದ ಹೊರಗೆ ಉಳಿದವರನ್ನು ಪ್ರಾಪರ್ಟಿ ಟ್ಯಾಕ್ಸ್ ವ್ಯಾಪ್ತಿಗೆ ತರವುದು ಸೇರಿದಂತೆ ಹಲವು ಪ್ರಮುಖ ಕಾರಣಗಳಿಗೆ ಇ - ಖಾತಾ ಜಾರಿ ಮಾಡಲಾಗಿದೆ. ಇದೀಗ ಆಸ್ತಿದಾರರು ಮನೆಯಿಂದಲೇ ಇ - ಖಾತಾ ಮಾಡಿಸಿಕೊಳ್ಳುವುದಕ್ಕೆ ಬೇಕಾದ ಅವಕಾಶವನ್ನು ನೀಡಲಾಗಿದೆ. ಆಸ್ತಿದಾರರು ಇದೀಗ ತಮ್ಮ ಇ - ಖಾತಾವನ್ನು ಪಡೆದುಕೊಳ್ಳುವುದಕ್ಕೆ ಕಚೇರಿಗಳಿಗೆ ಅಲೆಯು ಅವಶ್ಯಕತೆ ಇಲ್ಲ. ಮನೆಯಿಂದಲೇ ಸರಳ ವಿಧಾನದ ಮೂಲಕ ಇ ಖಾತಾ ಪಡೆದುಕೊಳ್ಳುವುದಕ್ಕೆ ಅವಕಾಶ ಕಲ್ಪಿಸಲಾಗಿದೆ.

ಇ- ಖಾತಾಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಇಲಾಖೆ ಪೌರಾಡಳಿತ ನಿರ್ದೇಶನಾಲಯ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದೆ. ನಿಮ್ಮ ಮನೆಯಲ್ಲೇ ಕುಳಿತು ಇ ಖಾತಾ ಪಡೆದುಕೊಳ್ಳಿ. ಸಾರ್ವಜನಿಕರ ಆಸ್ತಿ ದಾಖಲೆ ಈಗ ಮತ್ತಷ್ಟು ಸುರಕ್ಷಿತ ಎಂದು ಹೇಳಲಾಗಿದೆ.
E Khata Update: ಮನೆಯಿಂದಲೇ ಇ - ಖಾತಾ ಪಡೆಯಲು ಬೇಕಾಗುವ ದಾಖಲೆಗಳು
1. ಮಾಲೀಕರ ಭಾವಚಿತ್ರ ಮತ್ತು ಅಧಾರ್
2. ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ
3. ಸ್ವತ್ತಿನ ಕ್ರಯ / ನೋಂದಾಯಿತ ಪತ್ರ ಸಂಖ್ಯೆ (ಕಾವೇರಿ ತಂತ್ರಾಶದಿಂದ ಪಡೆದುಕೊಳ್ಳುವುದು)
4. ವಿದ್ಯುತ್ ಆರ್.ಆರ್ ಸಂಖ್ಯೆ (ಖಾಲಿ ನಿವೇಶನಗಳಿಗೆ ಅಗತ್ಯವಿಲ್ಲ).
5. ಸ್ವತ್ತಿನ ಛಾಯಾಚಿತ್ರ
6. EC: 15/16
7. ಸ್ವತ್ತಿಗೆ ಸಂಬಂಧಿಸಿದ ಇತರ ಪೂರಕ ಅಗತ್ಯ ದಾಖಲೆಗಳು
45 ಲಕ್ಷಕ್ಕೂ ಹೆಚ್ಚು ಕರಡು ಆಸ್ತಿ ದಾಖಲೆ ಇ ಆಸ್ತಿ
ಕರ್ನಾಟಕ ಸರ್ಕಾರವು ಇ - ಖಾತಾ ಯೋಜನೆಯನ್ನು ಮೊದಲು ಬೆಂಗಳೂರಿನಲ್ಲಿ ಪರಿಚಯಿಸಿತ್ತು. ಇದೀಗ ಇ - ಖಾತಾ ಯೋಜನೆಯನ್ನು ಕರ್ನಾಟಕದಾದ್ಯಂತ ಪರಿಚಯಿಸಲಾಗಿದೆ. ನಗರದ 45 ಲಕ್ಷಕ್ಕೂ ಹೆಚ್ಚು ಆಸ್ತಿದಾರರ ಕರಡು ಆಸ್ತಿ ವಿವರಗಳನ್ನು ಇ - ಆಸ್ತಿ ತಂತ್ರಾಂಶದಲ್ಲಿ ಪ್ರಕಟಿಸಲಾಗಿವುದು ಎಂದು ನಗರಾಭಿವೃದ್ಧಿ ಹಾಗೂ ನಗರ ಯೋಜನಾ ಸಚಿವ ಸುರೇಶ್ ಬಿ.ಎಸ್ ಅವರು ತಿಳಿಸಿದ್ದಾರೆ.
1. www.eaasthi.karnataka.gov.in Online ನಲ್ಲಿ ಆಸ್ತಿ ದಾಖಲೆ ಪರಿಶೀಲಿಸಬಹುದು.
2. ಅಗತ್ಯವಿದ್ದಲ್ಲಿ ದಾಖಲೆ ನೀಡಿ ತಿದ್ದುಪಡಿ / ತಕರಾರು ಅರ್ಜಿ ಸಲ್ಲಿಸಬಹುದು.
3. ಆನ್‌ಲೈನ್‌ನಲ್ಲೇ ಶುಲ್ಕ ಪಾವತಿ ದಾಖಲೆ ಸಲ್ಲಿಸಿ ಅನುಮೋದಿತ ಅಧಿಕೃತ ಇ - ಖಾತಾ ಪಡೆಯಬಹುದು.
4. K - 1 ಕೇಂದ್ರಗಳಲ್ಲೂ ಸಹ ಸಾರ್ವಜನಿಕರು ತಂತ್ರಾಂಶವನ್ನು ಬಳಸಿ ಸೇವೆಯನ್ನು ಪಡೆಯಬಹುದು.
5. ಇ - ಖಾತಾ ಪಡೆಯುವ ಮೂಲಕ ಸರಳವಾಗಿ ಆಸ್ತಿ ತೆರಿಗೆಯನ್ನು ಆನ್‌ಲೈನ್ ಮೂಲಕ ಪಾವತಿಸಬಹುದು.
ಕಾವೇರಿ 2 ಮತ್ತು ಇ-ಸ್ವತ್ತು
ಇನ್ನು ಕರ್ನಾಟಕದಲ್ಲಿ ಕಾವೇರಿ 2 ಮತ್ತು ಇ-ಸ್ವತ್ತು ಡಿಜಿಟಲ್ ಡೇಟಾ ಪರಸ್ಪರ ಲಿಂಕ್ ಮಾಡುವಲ್ಲಿ ಉಂಟಾಗಿರುವ ತಾಂತ್ರಿಕ ತೊಂದರೆ ಸರಿಪಡಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದ್ದಾರೆ.
ಕಾವೇರಿ 2.0 ತಂತ್ರಾಂಶದಲ್ಲಿ ವಿಭಾಗಪತ್ರ ಹಾಗೂ ದಾನಪತ್ರಗಳ ನೋಂದಣಿ ಸ್ಥಗಿತವಾಗಿಲ್ಲ. ಆರ್‌ಟಿಸಿ, ಮೋಜಿಣಿ ನಕ್ಷೆ, ಇ ಸ್ವತ್ತು ಖಾತಾ, ಇ-ಆಸ್ತಿ ಖಾತಾ ಹಾಗೂ ಯುಎಲ್‌ಎಮ್‌ಎಸ್ ಖಾತಾ ಹೊಂದಿರುವ ಸ್ವತ್ತುಗಳ ವಿಭಾಗಪತ್ರ ಹಾಗೂ ದಾನಪತ್ರಗಳು ಎಂದಿನಂತೆ ನೋಂದಣಿ ಆಗುತ್ತಿವೆ. ಕಾವೇರಿ 2.0 ತಂತ್ರಾಂಶದಲ್ಲಿ 2024-25ನೇ ಸಾಲಿನಲ್ಲಿ 1,15,068 ವಿಭಾಗ ಪತ್ರಗಳು ಮತ್ತು 1,39,134 ದಾನಪತ್ರಗಳು ಅದೇ ರೀತಿ 2025-26ನೇ ಸಾಲಿನಲ್ಲಿ 79,515 ವಿಭಾಗ ಪತ್ರಗಳು ಹಾಗೂ 92,618 ದಾನಪತ್ರಗಳು ನೋಂದಣಿ ಆಗಿವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನ ಆಸ್ತಿದಾರರು ಇ ಖಾತಾ ವಿಚಾರದಲ್ಲಿ ಭಾರೀ ಸಮಸ್ಯೆ ಎದುರಿಸುತ್ತಿದ್ದರು ಇದೀಗ ಈ ಸಮಸ್ಯೆಗೆ ಸರ್ಕಾರ ಪರಿಹಾರ ನೀಡಿದೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Property Sale: ಬೆಂಗಳೂರು ದಕ್ಷಿಣ ನಗರ ಪಾಲಿಕೆ: 42 ಅತಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಆಸ್ತಿಗಳ ಹರಾಜು -
Bengaluru Rent: ಬೆಂಗಳೂರು ಬಾಡಿಗೆ, ಅಡ್ವಾನ್ಸ್ ದುಬಾರಿ: ದೆಹಲಿ, ಮುಂಬೈನಲ್ಲಿ ಇಷ್ಟಿಲ್ಲ, ನಾರ್ಥಿ ಯುವತಿ ವೈರಲ್ ವಿಡಿಯೋ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications