ಬೆಂಗಳೂರು ಟನಲ್ ರೋಡ್ ಯೋಜನೆ: ಡಿ.ಕೆ ಶಿವಕುಮಾರ್ಗೆ ಡಬಲ್ ಸಂಕಟ!
ಬೆಂಗಳೂರು: ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಹೆಚ್ಚು ಚರ್ಚೆ ಆಗುತ್ತಿರುವ ಪ್ರಮುಖ ಯೋಜನೆಗಳಲ್ಲಿ ಒಂದಾಗಿರುವ ಬೆಂಗಳೂರು ಟನಲ್ ರೋಡ್ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಬದಲಾವಣೆ ಆಗಿದೆ. ಈ ಯೋಜನೆಯನ್ನು ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ಪ್ರತಿಷ್ಠೆಯಾಗಿ ತೆಗೆದುಕೊಂಡಿದ್ದಾರೆ. ಆದರೆ ಇದೀಗ ಕಾಂಗ್ರೆಸ್ ಸರ್ಕಾರವು ಉಭಯ ಸಂಕಟಕ್ಕೆ ಸಿಲುಕಿದಂತೆ ಆಗಿದೆ.
ಬೆಂಗಳೂರಿನಲ್ಲಿ ಕಳೆದ ಐದಾರು ತಿಂಗಳಿನಿಂದಲೂ ಬೆಂಗಳೂರು ಟನಲ್ ರೋಡ್ ಯೋಜನೆಯ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಅಲ್ಲದೇ ಬಿಜೆಪಿ ಸಹ ಬೀದಿಗೆ ಇಳಿದು ಇದನ್ನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸಿತ್ತು. ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗೆ ಮುಕ್ತಿಗೆ ಹಾಗೂ ಬೆಂಗಳೂರಿನಲ್ಲಿ ಭೂಸ್ವಾಧೀನ ಪ್ರಕ್ರಿಯೆ ಸಾಧ್ಯವೇ ಇಲ್ಲದೆ ಇರುವುದರಿಂದ ಟನಲ್ ರೋಡ್ ಯೋಜನೆ ಅತ್ಯುತ್ತಮವಾಗಿದೆ ಎಂದು ಡಿ.ಕೆ ಶಿವಕುಮಾರ್ ಅವರು ಪ್ರತಿಪಾದಿಸಿದ್ದರು.

ಇದೀಗ ಡಿ.ಕೆ ಶಿವಕುಮಾರ್ ಅವರ ಕನಸಿನ ಯೋಜನೆಗಳಲ್ಲಿ ಒಂದಾಗಿರುವ ಟನಲ್ ರೋಡ್ ಯೋಜನೆಯು ಇದೀಗ ಹೊಸ ಚರ್ಚೆಗೆ ಕಾರಣವಾಗಿದೆ. ರಾಷ್ಟ್ರ ಮಟ್ಟದಲ್ಲಿ ಕಾಂಗ್ರೆಸ್ ಅದಾನಿ ಹಾಗೂ ಅದಾನಿ ಸಮೂಹದ ವಿರುದ್ಧ ಕತ್ತಿ ಮಸಿಯುತ್ತಿದೆ. ಇದೀಗ ಅದಾನಿ ಸಮೂಹಕ್ಕೆ ಬೆಂಗಳೂರು ಟನಲ್ ರೋಡ್ ಪ್ರಾಜೆಕ್ಟ್ ಟೆಂಡರ್ ಆಗಿದೆ. ಇದು ಕಾಂಗ್ರೆಸ್ ಪಕ್ಷಕ್ಕೆ ಬಿಸಿ ತುಪ್ಪವಾಗಿ ಪರಿಣಮಿಸುವ ಸಾಧ್ಯತೆ ಇದೆ.
ಅದಾನಿ ಗ್ರೂಪ್ಸ್ಗೆ ಬಿಡ್: ಇನ್ನು ಬೆಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿರುವ 16.75 ಕಿ.ಮೀ ಉದ್ದದ ಟನಲ್ ರಸ್ತೆ ಯೋಜನೆ ಅಭಿವೃದ್ಧಿ / ನಿರ್ಮಾಣಕ್ಕೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಈಚೆಗೆ ಟೆಂಡರ್ ಆಹ್ವಾನಿಸಿತ್ತು. ಈ ಟೆಂಡರ್ ಅದಾನಿ ಗ್ರೂಪ್ಸ್ ಪಾಲಾಗಿದೆ. ಅದಾನಿ ಸಮೂಹವು ಅತ್ಯಂತ ಕಡಿಮೆ ಮೊತ್ತಕ್ಕೆ ಬಿಡ್ ಮಾಡಿದ್ದು, ಎರಡು ಪ್ಯಾಕೇಜ್ಗಳಲ್ಲಿ ನಡೆದ ಈ ಬಿಡ್ಡಿಂಗ್ ಪ್ರಕ್ರಿಯೆಯಲ್ಲಿ ಅದಾನಿ ಸಮೂಹವು ಮುಂಚೂಣಿಯಲ್ಲಿದೆ. ಆದರೆ, ಅದಾನಿ ಗ್ರೂಪ್ಸ್ ಸಲ್ಲಿಸಿರುವ ಮೊತ್ತವು ಸರ್ಕಾರದ ಅಂದಾಜು ಪಟ್ಟಿಗಿಂತಲೂ ಅಧಿಕವಾಗಿದೆ ಎಂದು ಹೇಳಲಾಗಿದೆ.
ಸಂಸದ ಪಿ.ಸಿ ಮೋಹನ್ ಟ್ವೀಟ್
ಡಿ.ಕೆ ಶಿವಕುಮಾರ್ಗೆ ಉಭಯ ಸಂಕಟ: ಇನ್ನು ಈ ಯೋಜನೆಯು ಡಿ.ಕೆ ಶಿವಕುಮಾರ್ ಅವರಿಗೆ ಉಭಯ ಸಂಕಟವಾಗಿ ಪರಿಣಮಿಸಿದೆ ಎಂದು ಹೇಳಲಾಗುತ್ತಿದೆ. ಇದಕ್ಕೆ ಮುಖ್ಯ ಕಾರಣ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ದೇಶದ ಕೆಲವೊಂದು ಪ್ರಮುಖ ಖಾಸಗಿ ಸಂಸ್ಥೆಗಳ ಬಗ್ಗೆ ಪದೇ ಪದೇ ಪ್ರಸ್ಥಾಪಿಸುತ್ತಿದ್ದಾರೆ. ಅದರಲ್ಲಿ ಅದಾನಿ ಸಮೂಹವೂ ಸೇರಿದೆ. ಆದರೆ ಈ ಯೋಜನೆಯೂ ಡಿ.ಕೆ ಶಿವಕುಮಾರ್ ಅವರಿಗೆ ಪ್ರತಿಷ್ಠೆಯಾಗಿದ್ದು ಏನು ಮಾಡುತ್ತಾರೆ ಎಂದು ಕಾದು ನೋಡಬೇಕಿದೆ.
-
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್












Click it and Unblock the Notifications