Bengaluru Rain: ಬೆಂಗಳೂರಿನಲ್ಲಿ ಮಳೆಗಾಗಿ 146 ದಿನ ಕಾಯಬೇಕು: ಕರ್ನಾಟಕ ಸೇರಿದಂತೆ ಎಲ್ಲೆಲ್ಲಿ ಮಳೆ ಸೂಚನೆ?
ಬಿಸಿಲಿನ ಬಿಸಿ ಹೆಚ್ಚಾಗುತ್ತಿರುವ ಈ ದಿನಗಳಲ್ಲಿ ಹವಾಮಾನ ಇಲಾಖೆ ಸಿಹಿ ಸುದ್ದಿಯನ್ನು ನೀಡಿದೆ. ಮುಂದಿನ 146 ದಿನಗಳ ನಂತರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಮಳೆರಾಯ ತಂಪೆರೆಯಲಿದ್ದಾನೆ. ಹೌದು.. ಐಎಂಡಿ ವರದಿ ಪ್ರಕಾರ ಬೆಂಗಳೂರು ನಗರದಲ್ಲಿ ಕೆಲ ದಿನಗಳ ನಂತರ ಮಳೆಯಾಗಲಿದೆ.
ಹೀಗಾಗಿ ಸದ್ಯ ತಾಪಮಾನ ಮತ್ತು ಬಿಸಿಲಿನ ಶಾಖ ಅನುಭವಿಸುವುದು ಅನಿವಾರ್ಯವಾಗಿದೆ. ಕಳೆದ ವರ್ಷ ನವೆಂಬರ್ 21ರಂದು ಬೆಂಗಳೂರಿನಲ್ಲಿ ಕೊನೆಯ ಬಾರಿಗೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ವರದಿ ಮಾಡಿದೆ. ಬೆಂಗಳೂರಿನಲ್ಲಿ ಮಾತ್ರವಲ್ಲದೆ ದೇಶದಾದ್ಯಂತ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಬುಧವಾರ, ಗುರುವಾರ ಮತ್ತು ಶುಕ್ರವಾರದಂದು ಲಘು ಮಳೆಯಾಗುವ ನಿರೀಕ್ಷೆಯಿದೆ ಎಂದು ಐಎಂಡಿ ಪ್ರಕಟಣೆಗೆ ತಿಳಿಸಿದೆ.

ಕರ್ನಾಟಕದಲ್ಲಿ ಈ ವಾರ ಮಳೆಯ ಮುನ್ಸೂಚನೆ
ಐಎಂಡಿ ತನ್ನ ದೈನಂದಿನ ಬುಲೆಟಿನ್‌ನಲ್ಲಿ ಮುಂದಿನ ಕೆಲ ದಿನಗಳಲ್ಲಿ ಕರ್ನಾಟಕದಲ್ಲಿ ಮಳೆಯಾಗುವ ಸೂಚನೆಯನ್ನು ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ನಗರ ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯ ಮುನ್ಸೂಚನೆ ನೀಡಿದೆ.
ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವಾರದ ಅಂತ್ಯದವರೆಗೆ ಮಳೆಯಾಗುವ ನಿರೀಕ್ಷೆ ಇದೆ.
ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 36 ಡಿಗ್ರಿ ಸೆಲ್ಸಿಯಸ್ ಮತ್ತು 22 ಡಿಗ್ರಿ ಸೆಲ್ಸಿಯಸ್ ಇರಲಿದೆ.
ದೇಶದ ಹಲವೆಡೆ ಮಳೆ
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎರಡು-ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿಲ್ಲದಿದ್ದರೂ ಜೋರಾಗಿ ಗಾಳಿ ಬೀಸಲಿದೆ. ಈ ಅವಧಿಯಲ್ಲಿ ಗಾಳಿಯ ವೇಗ ಗಂಟೆಗೆ 40 ಕಿ.ಮೀ. ಇರಲಿದ್ದು, ಇದರಿಂದ ದೆಹಲಿಗೆ ಬಿಸಿಲಿನ ತಾಪದಿಂದ ಮುಕ್ತಿ ಸಿಗಲಿದೆ.
ಮುಂದಿನ 24 ಗಂಟೆಗಳಲ್ಲಿ, ಅರುಣಾಚಲ ಪ್ರದೇಶದಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಹಿಮಪಾತದ ಸಾಧ್ಯತೆಯಿದೆ. ಪಶ್ಚಿಮ ಹಿಮಾಲಯದಲ್ಲಿ ತುಂತುರು ಮಳೆ ಮತ್ತು ಹಿಮಪಾತ ಆಗಬಹುದು. ತಾಜಾ ಪಾಶ್ಚಾತ್ಯ ಅಡಚಣೆಯ ಪ್ರಭಾವದಿಂದ ಏಪ್ರಿಲ್ 18 ಮತ್ತು 21 ರ ನಡುವೆ ಪಶ್ಚಿಮ ಹಿಮಾಲಯದ ಮೇಲೆ ಗುಡುಗು, ಮಿಂಚು ಮತ್ತು ರಭಸದ ಗಾಳಿ (30-40 kmph) ಜೊತೆಗೆ ಮಧ್ಯಮ ಮಳೆ ಮತ್ತು ಹಿಮಪಾತವಾಗಲಿದೆ.
ಉತ್ತರ ಪ್ರದೇಶ, ಬಿಹಾರ ಮತ್ತು ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದಲ್ಲಿ ಈಗ ಆಕಾಶದಿಂದ ಬೆಂಕಿಯ ಮಳೆ ಸುರಿಯುತ್ತಿದ್ದು, ಜನರು ಭಾರೀ ಬಿಸಿಲಿನಿಂದ ಹೈರಾಣಾಗಿದ್ದಾರೆ. ಹವಾಮಾನ ವೈಪರೀತ್ಯ ತೋರಲು ಆರಂಭಿಸಿದ್ದು, ಬೆಳಗ್ಗಿನಿಂದಲೇ ಬಿಸಿಲಿನ ಝಳವು ಜನರನ್ನು ಕಾಡಲಾರಂಭಿಸಿದೆ.












Click it and Unblock the Notifications