ಬೆಂಗಳೂರಿನಲ್ಲಿ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಬಂಧನ
ಬೆಂಗಳೂರು, ಫೆಬ್ರವರಿ 13 : ನಗರದಲ್ಲಿ ಡ್ರಗ್ಸ್ ಮಾರಾಟ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಡ್ರಗ್ಸ್ ಮಾರಾಟ ಮಾಡುತ್ತಿದ್ದವನು ನೈಜೀರಿಯಾದ ಫೆಲಿಕ್ಸ್ ಎಂದು ತಿಳಿದುಬಂದಿದೆ. ಕಾಲೇಜು ವಿದ್ಯಾರ್ಥೀಗಳಿಗೆ ಡ್ರಗ್ಸ್ ಮಾರಾಟ ಮಾಡಿ ಯುವಕರನ್ನು ದಾರಿತಪ್ಪಿಸುತ್ತಿದ್ದ ಎನ್ನಲಾಗಿದೆ. ಬಂಧಿತನಿಂದ 3 ಲಕ್ಷ ಮೌಲ್ಯದ 50 ಗ್ರಾಂ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ.
ಸಂಪಿಗೆ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆತನ ಗ್ಯಾಂಗ್ ನಲ್ಲಿರುವವರನ್ನು ಬಂಧಿಸುವ ಕುರಿತು ಸಿಸಿಬಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.













Click it and Unblock the Notifications