Street Dogs: ಸುಪ್ರೀಂಕೋರ್ಟ್ ಆದೇಶದಂತೆ ಬೆಂಗಳೂರು ಬೀದಿ ನಾಯಿಗಳ ನಿರ್ವಹಣೆಗೆ ಮಾಸ್ಟರ್ ಪ್ಲಾನ್..GBA
ಬೆಂಗಳೂರು, ನವೆಂಬರ್ 12: ದೆಹಲಿ ಬೀದಿ ನಾಯಿಗಳು ರೇಬಿಸ್ ಖಾಯಿಲೇ, ಕಡಿತದಂತಹ ಸಾರ್ವಜನಿಕ ಸಮಸ್ಯೆಗಳನ್ನು ಉಂಟು ಮಾಡಿದ್ದರಿಂದ ಸುಪ್ರೀಂ ಕೋರ್ಟ್ ಅವುಗಳ ನಿರ್ವಹಣೆಗೆ ಸೂಚಿಸಿ ಆದೇಶಿಸಿತ್ತು. ಈ ಸುದ್ದಿ ಸಾಕಷ್ಟು ಶ್ವಾನ ಪ್ರಿಯರನ್ನು ಬಡಿದೆಬ್ಬಿಸಿತ್ತು. ಇದೀಗ ಬೆಂಗಳೂರಿನಲ್ಲಿ ಸಹ ಸುಪ್ರೀಂ ಆದೇಶದನ್ವಯ ಅಪಾಯಕಾರಿ/ಆಕ್ರಮಣಕಾರಿ ಬೀದಿ ನಾಯಿಗಳ ನಿರ್ವಹಣೆಗೆ ಬೆಂಗಳೂರು ನಗರ ಪಾಲಿಕೆ ಮಾಸ್ಟರ್ ಪ್ಲಾನ್ ಮಾಡಿದೆ.
ನ್ಯಾಯಾಲಯದ ಆದೇಶದಂತೆ ಅಪಾಯಕಾರಿ/ಆಕ್ರಮಣಕಾರಿ ಬೀದಿ ನಾಯಿಗಳ ಸಮಸ್ಯೆಗಳನ್ನು ತಡೆಗಟ್ಟಲು ಹಾಗೂ ಸೂಕ್ತ ಚಿಕಿತ್ಸೆಗೆ ಒಳಪಡಿಸಿ. ನಿರ್ವಹಣೆ ಮಾಡಲು ಕ್ರಮ ಕೈಗೊಳ್ಳಬೇಕು. ಘನ ಸರ್ವೋಚ್ಛ ನ್ಯಾಯಾಲಯದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ಬುಧವಾರ ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ರವರು ಅಧಿಕಾರಿಗಳಿಗೆ ಸೂಚಿಸಿದರು.

ಘನ ನ್ಯಾಯಾಲಯವು ಬೀದಿ ನಾಯಿಗಳ ಹಾವಳಿ ಹಾಗೂ ಬೀದಿ ನಾಯಿಗಳ ನಿರ್ವಹಣೆ ಕುರಿತಾಗಿ ನೀಡಿದ ಆದೇಶದ ಪಾಲನೆ ಹಾಗೂ ಎ.ಬಿ.ಸಿ/ಎ.ಆರ್.ವಿ (Animal Birth Control/Anti Rabies Vaccination) ಪ್ರಗತಿ ಪರಿಶೀಲನೆ ಸಂಬಂಧ ಇಂದು ಬ್ಯಾಟರಾಯನಪುರದಲ್ಲಿರುವ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಅವರು ಮಾತನಾಡಿದರು.
ಬೀದಿ ನಾಯಿಗಳ ನಿಯಂತ್ರಣ, ಪ್ರಾಣಿಗಳ ಕಲ್ಯಾಣ ಹಾಗೂ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು. ಶಿಕ್ಷಣ ಸಂಸ್ಥೆಗಳನ್ನು ಪಟ್ಟಿ ಮಾಡಿ, ಸಂಸ್ಥೆಯ ಮ್ಯಾನೇಜ್ಮೆಂಟ್ ಅನ್ನು ಸಂಪರ್ಕಿಸಿ, ಬೀದಿ ನಾಯಿಗಳ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ಆಸ್ಪತ್ರೆ, ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ (ಅಂತರರಾಜ್ಯ ಬಸ್ ಟರ್ಮಿನಲ್) ಹಾಗೂ ಕ್ರೀಡಾ ತರಬೇತಿ ಕೇಂದ್ರ / ಕ್ರೀಡಾಂಗಣಗಳಲ್ಲಿ ಬೀದಿ ನಾಯಿಗಳ ಮಾಹಿತಿ ಪಡೆಯುವುದು ಸೇರಿದಂತೆ ಹಲವು ನಿರ್ಧಾರಗಳನ್ನು ಕೈಗೊಳ್ಳಲಾಯಿತು.
ಸಭೆ ಕೈಗೊಂಡ ಇತರ ನೀರ್ಣಯಗಳು
* ನಗರ ಪಾಲಿಕೆಯ ವ್ಯಾಪ್ತಿಯಲ್ಲಿರುವ ನಾಯಿಗಳ ನಿಖರ ಸಂಖ್ಯೆ, ಸ್ಥಳ ಹಾಗೂ ಅವುಗಳ ಆರೋಗ್ಯ ಸ್ಥಿತಿಯ ಮಾಹಿತಿಯನ್ನು ಸಂಗ್ರಹಿಸುವುದು.
* ಆರೋಗ್ಯ, ಶಿಕ್ಷಣ, ಸಾರಿಗೆ, ಯೋಜನೆ ಹಾಗೂ ರೈಲ್ವೇ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಒಬ್ಬ ನೋಡಲ್ ಅಧಿಕಾರಿಯನ್ನು ನೇಮಿಸುವಂತೆ ಸಂಸ್ಥೆಗಳಿಗೆ ಕೋರುವುದು.
* ಸದರಿ ಸಂಸ್ಥೆಗಳಿಂದ ನೇಮಿಸಲಾದ ನೋಡಲ್ ಅಧಿಕಾರಿಗಳ ಮಾಹಿತಿಯನ್ನು ಸಂಸ್ಥೆಯ ಪ್ರವೇಶ ದ್ವಾರದಲ್ಲಿ ನಮೂದಿಸಲು ಕ್ರಮ ಕೈಗೊಳ್ಳತಕ್ಕದ್ದು.
* ಅಪಾಯಕಾರಿ ನಾಯಿಗಳನ್ನು ಹಿಡಿಯಲು ಅಭಿಯಾನ ಕೈಗೊಂಡು, ಬೀದಿ ನಾಯಿಗಳ ಸಂತಾನ ಹರಣ ಶಸ್ತ್ರಚಿಕಿತ್ಸೆ ಮತ್ತು ಆರೈಕೆಗೆ ಅಗತ್ಯ ಕ್ರಮ ಕೈಗೊಳ್ಳ ತಕ್ಕದ್ದು.
* ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಥವಾ ಪಾಲಿಕೆ ವ್ಯಾಪ್ತಿಯಿಂದ ಹೊರ ಪ್ರದೇಶದಲ್ಲಿ ಬೀದಿ ನಾಯಿಗಳ ಆಶ್ರಯ ತಾಣಗಳ/ಕೇಂದ್ರ ನಿರ್ಮಾಣ ಮತ್ತು ನಿರ್ವಹಣೆಗೆ ಸೂಕ್ತ ಸ್ಥಳ ಪರಿಶೀಲನೆ ಮಾಡುವುದು.
* ಬೀದಿನಾಯಿಗಳ ಹಾವಳಿಯನ್ನು ತಪ್ಪಿಸಲು ಅಗತ್ಯ ಬೇಲಿ, ಕಾಂಪೌಂಡ್ ಗೋಡೆಗಳು, ಗೇಟ್‌ಗಳು ಹಾಗೂ ಇನ್ನಿತರೆ ಅವಶ್ಯ ಸುರಕ್ಷತಾ ಕ್ರಮಗಳನ್ನು ಕೈಗೊಂಡಿರುವ ಬಗ್ಗೆ ಪರಿಶೀಲಿಸಿಕೊಳ್ಳತಕ್ಕದ್ದು.
* ಸ್ಥಳೀಯ ಸಂಸ್ಥೆ/ಪಾಲಿಕೆ ವ್ಯಾಪ್ತಿಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳು ಅವಶ್ಯಕತೆಗನುಗುಣವಾಗಿ ಹಾಗೂ ದಿನದ 24 ಗಂಟೆಯೂ ಹುಚ್ಚು ರೋಗದ ಲಸಿಕೆ (Anti Rabies Vaccine) ಮತ್ತು Immunoglobulin ಲಭ್ಯತೆಯಿರುವಂತೆ ಕ್ರಮವಹಿಸುವುದು.
* ಬೀದಿ ನಾಯಿಗಳ ನಿರ್ವಹಣೆ ಮತ್ತು ಸಂತಾನಹರಣ ಶಸ್ತ್ರ ಚಿಕಿತ್ಸೆ ಕಾರ್ಯಗಳಲ್ಲಿ ಘನ ಸರ್ವೋಚ್ಛ ನ್ಯಾಯಾಲಯದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲು ನಿರ್ದೇಶಿಸಿದರು.
ಒಟ್ಟು 73,040 ಬೀದಿ ನಾಯಿಗಳ ಗುರುತು
ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ 2023ರ ಗಣತಿ ಅನ್ವಯ ಒಟ್ಟು 73040 ಬೀದಿ ನಾಯಿಗಳನ್ನು ಗುರುತಿಸಲಾಗಿದೆ. ನಗರ ಪಾಲಿಕೆಯಲ್ಲಿ ಪ್ರಸ್ತುತ 2 ಎಬಿಸಿ ಕೇಂದ್ರಗಳ ಕಾರ್ಯನಿರ್ವಹಣೆ ಮಾಡಲಾಗುತ್ತಿವೆ. ಈ ವರ್ಷದಲ್ಲಿ ಇಲ್ಲಿಯವರೆಗೆ ಒಟ್ಟು 3877 ಬೀದಿ ನಾಯಿಗಳಿಗೆ ಸಂತಾನ ಹರಣ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗಿದೆ. 21,140 ಬೀದಿ ನಾಯಿಗಳಿಗೆ ಲಸಿಕೆಯನ್ನು ಹಾಕಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದೆ.
-
ಬೆಂಗಳೂರು ಇ-ಖಾತಾ ದಂಧೆ ಬಯಲು: ಬ್ರ್ಯಾಂಡ್ ಬೆಂಗಳೂರಿಗೆ ಆರ್ ಅಶೋಕ್ ತೀವ್ರ ಟೀಕೆ -
Harish Rana: ಭಾರತದ ಮೊದಲ ದಯಾಮರಣದ ಹಕ್ಕುದಾರ ಹರೀಶ್ ರಾಣಾ ನಿಧನ, ಕುಟುಂಬಸ್ಥರಿಂದ ಅಂಗಾಂಗ ದಾನ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ











Click it and Unblock the Notifications