ಬೆಂಗಳೂರು ಉತ್ತರ: ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್ ಬಗ್ಗೆ ಮಹತ್ವದ ಚರ್ಚೆ
Bengaluru: ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಮಳೆಗಾಲಕ್ಕೂ ಮುನ್ನ ಮುನ್ನೆಚ್ಚರಿಕೆ ಕ್ರಮ, ರಸ್ತೆ ಅಗಲೀಕರಣ, ಟಿ.ಡಿ.ಆರ್‌ಗೆ ಸಂಬಂಧಿಸಿದಂತೆ ಮಹತ್ವದ ಚರ್ಚೆ ಮಾಡಲಾಗಿದೆ. ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ವಿಷಯ ಚರ್ಚೆ ಮಾಡಲಾಗಿದೆ.
ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ, ಟಿ.ಡಿ.ಆರ್. (Transferable Development Rights) ಹಾಗೂ ವಿವಿಧ ಕಾಮಗಾರಿಗಳ ಪ್ರಗತಿ ಕುರಿತು ನಗರ ಪಾಲಿಕೆಯ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ 24ರ ಮಂಗಳವಾರ ಆಯುಕ್ತರ ಕಚೇರಿಯ ಸಭಾಂಗಣದಲ್ಲಿ ಸಮಗ್ರ ಪರಿಶೀಲನಾ ಸಭೆ ನಡೆಯಿತು.

ಸಭೆಯಲ್ಲಿ 'ಸುರಕ್ಷೆ-75' ಯೋಜನೆಯಡಿ ಕೈಗೊಂಡಿರುವ 16 ವೃತ್ತಗಳ ಕಾಮಗಾರಿಗಳ ಪ್ರಗತಿಯನ್ನು ಪರಿಶೀಲಿಸಲಾಯಿತು. ಮೆಟ್ರೋ ಕಾಮಗಾರಿ, ಅಂಡರ್‌ಪಾಸ್ ಮತ್ತು ಫ್ಲೈಓವರ್‌ಗಳ ಕಾರಣದಿಂದ ಬಾಕಿ ಉಳಿದ ವೃತ್ತಗಳನ್ನು ಹೊರತುಪಡಿಸಿ, ಉಳಿದ 9 ವೃತ್ತಗಳ ಕಾಮಗಾರಿಗಳನ್ನು ಶೀಘ್ರ ಪೂರ್ಣಗೊಳಿಸಲು ಆಯುಕ್ತರು ಸೂಚಿಸಿದ್ದಾರೆ.
ಆಯುಕ್ತರು ನೀಡಿದ ಪ್ರಮುಖ ಸೂಚನೆಗಳು
ಮಳೆಗಾಲಕ್ಕೂ ಮೊದಲು ನೀರು ನಿಲ್ಲುವ ಸ್ಥಳಗಳನ್ನು ಗುರುತಿಸಿ ಸಮಸ್ಯೆಯನ್ನು ಸಂಪೂರ್ಣವಾಗಿ ನಿವಾರಣೆ ಮಾಡಬೇಕು
ಪ್ರಮುಖ ಜಂಕ್ಷನ್‌ಗಳಲ್ಲಿ ಸಂಚಾರ ಸುಗಮವಾಗುವಂತೆ ತಕ್ಷಣ ಕ್ರಮ ಕೈಗೊಳ್ಳಬೇಕು
ಆಯ್ದ ಸ್ಥಳಗಳಲ್ಲಿ ಹೊಸ ಮಾದರಿಯ ಪಾದಚಾರಿ ಮಾರ್ಗ ವಿನ್ಯಾಸಗಳನ್ನು ಪ್ರಯೋಗಾತ್ಮಕವಾಗಿ ಅಳವಡಿಸಬೇಕು
ಪ್ರಯೋಗಾತ್ಮಕ ವಿನ್ಯಾಸಗಳು ಯಶಸ್ವಿಯಾದಲ್ಲಿ ಇತರೆ ಪ್ರದೇಶಗಳಲ್ಲಿಯೂ ಜಾರಿಗೆ ತರಬೇಕು
ಮಳೆಗಾಲದಲ್ಲಿ ನೀರು ನಿಲ್ಲದಂತೆ ಹಾಗೂ ಅನಾಹುತಗಳಿಗೆ ಅವಕಾಶವಿಲ್ಲದಂತೆ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು
ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಸಕಾಲಿಕ ಕ್ರಮಗಳನ್ನು ಕೈಗೊಳ್ಳಬೇಕು.
ರಸ್ತೆ ಅಗಲೀಕರಣ ಹಾಗೂ ಟಿಡಿಆರ್ ಕುರಿತು ಚರ್ಚೆ
ಸಭೆಯಲ್ಲಿ ರಸ್ತೆ ಅಗಲೀಕರಣ ಹಾಗೂ ಟಿ.ಡಿ.ಆರ್. ಕುರಿತು ಚರ್ಚೆ ನಡೆಯಿತು. ಈಗಾಗಲೇ ಕಾಮಗಾರಿಗಳು ಪೂರ್ಣಗೊಂಡಿದ್ದರೂ ಟಿ.ಡಿ.ಆರ್. ಪೂರೈಕೆಯಲ್ಲಿ ವಿಳಂಬವಾಗಿರುವುದನ್ನು ಗಮನಿಸಿದ ಆಯುಕ್ತರು, ತ್ವರಿತ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಈ ವೇಳೆ ಕಾನೂನಿನ ಎಲ್ಲ ತೊಡಕುಗಳನ್ನು ನಿವಾರಿಸಿಕೊಂಡು, ಟಿ.ಡಿ.ಆರ್.ಗಳನ್ನು ಶೀಘ್ರದಲ್ಲಿ ಪೂರೈಸಲು ಸಂಬಂಧಿತ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಸಭೆಯಲ್ಲಿ ಅಪರ ಆಯುಕ್ತರು (ಅಭಿವೃದ್ಧಿ)ಲತಾ, ಜಂಟಿ ಆಯುಕ್ತರಾದ ಮೊಹಮ್ಮದ್ ನಯೀಮ್ ಮೊಮಿನ್ ಮತ್ತು ಪಲ್ಲವಿ, ಮುಖ್ಯ ಎಂಜಿನಿಯರರಾದ ರಾಘವೇಂದ್ರ ಪ್ರಸಾದ್ ಮತ್ತು ಯಮುನಾ, ಅಧೀಕ್ಷಕ ಎಂಜಿನಿಯರರಾದ ಪ್ರಕಾಶ್ ಮತ್ತು ಕೃಷ್ಣಕುಮಾರ್, B-SMILE ಅಧಿಕಾರಿಗಳು, ಸಮಾಲೋಚಕರು, ಕಾರ್ಯಪಾಲಕ ಎಂಜಿನಿಯರರು, ಟ್ರಾಫಿಕ್ ಪೊಲೀಸ್ ಹಾಗೂ ಇತರೆ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.
-
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election












Click it and Unblock the Notifications