Bangalore North Result: ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಶೋಭಾ ಕರಂದ್ಲಾಜೆ ಭರ್ಜರಿ ಗೆಲುವು

ಬೆಂಗಳೂರು, ಜೂನ್‌ 04: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಗೆ ಪ್ರತಿಷ್ಠೆಯಾದ್ರೆ, ಇತ್ತ ಆಡಳಿತರೂಢ ಕಾಂಗ್ರೆಸ್‌ ಗೆ ಅಸ್ತಿತ್ವದ ಪ್ರಶ್ನೆಯಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿಹೆಚ್ಚು ಮತದಾರರನ್ನು ಹೊಂದಿರುವುದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಈ ಬಾರಿ ಯಾರು ಗೆಲ್ಲುವ ಸಾಧಿಸುತ್ತಾರೆ ಎಂಬುದು ಸಾಕಷ್ಟು ಕುತೂಹಲವನ್ನ ಮೂಡಿಸಿದೆ.

2004 ರಿಂದ ಇಲ್ಲಿಯವರೆಗೆ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯೇ ತನ್ನ ಹಿಡಿತವನ್ನ ಸಾಧಿಸಿದ್ದು, ರಾಜ್ಯದಲ್ಲಿ ಈ ಬಾರಿಯೂ ಪ್ರಧಾನಿ ನರೇಂದ್ರ ಮೋದಿ ಅಲೆ ವಿರುದ್ಧ ಗ್ಯಾರಂಟಿ ಅಸ್ತ್ರ ಜನರ ಮನ ಗೆದಿದ್ಯಾ ಎಂಬ ಬಗ್ಗೆ ಸಾಕಷ್ಟು ಚರ್ಚೆಗಳು ನಡೆಯುತ್ತಿವೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಹೊರಗಿನಿಂದ ಬಂದ ಸದಾನಂದಗೌಡರನ್ನ ಎರಡು ಬಾರಿ ಗೆಲ್ಲಿಸಿದ್ದು, ಈ ಬಾರಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನ ಕಣದಲ್ಲಿದ್ರೆ, ಕಾಂಗ್ರೆಸ್‌ ಹೈಕಮಾಂಡ್‌ ಪ್ರೋ. ರಾಜೀವ್‌ ಗೌಡ ಅವರನ್ನ ಕಣಕ್ಕಿಳಿಸುವ ಮೂಲಕ ಹಲವು ತಂತ್ರಗಾರಿಕೆಯನ್ನ ನಡೆಸಿದೆ.

Bengaluru North Lok Sabha Election 2024 Results LIVE Who will Win Shobha Karandlaje Or Rajeev Gowda

ಈ ಬಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷದ ನಡುವೆ ನೇರ ಹಣಾಹಣಿ ಇದ್ದು, 1951ರಿಂದ ಲೋಕಸಭಾ ಚುನಾವಣೆ ಆರಂಭವಾಗಿದ್ದು, ಈವರೆಗೂ 17 ಬಾರಿ ಚುನಾವಣೆ ನಡೆದಿದೆ. ಈ ಕ್ಷೇತ್ರದಲ್ಲಿ 2004ರ ವರೆಗೂ ಕಾಂಗ್ರೆಸ್ ಅಭ್ಯರ್ಥಿ ಸತತವಾಗಿ ಗೆಲ್ಲುತ್ತಾ ಬಂದಿದ್ದು, ಒಂದು ಬಾರಿ ಮಾತ್ರ ಜೆಡಿಎಸ್ ಅಭ್ಯರ್ಥಿ ಗೆಲುವನ್ನ ಸಾಧಿಸಿದ್ದಾರೆ. ಒಕ್ಕಲಿಗರ ಭದ್ರಕೋಟೆಯಾಗದ ಬೆಂಗಳೂರು ಉತ್ತರಿದಿಂದ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರು ಗೆಲುತ್ತಾರಾ ಅಥವಾ ಕಾಂಗ್ರೆಸ್‌ ಪ್ರೋ. ರಾಜೀವ್‌ ಗೌಡ ಅವರು ಗೆಲ್ಲುವು ಸಾಧಿಸುತ್ತಾರೆ ಎಂಬ ಬಗ್ಗೆ ತೀವ್ರ ಕುತೂಹುಲ ಮೂಡಿತ್ತು.

ಒಂದು ಕಾಲದಲ್ಲಿ ಕಾಂಗ್ರೆಸ್ ಭದ್ರಕೋಟೆಯಾಗಿದ್ದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಸದಾನಂದಗೌಡರು ಗೆಲುವು ಸಾಧಿಸಿದು, ಈ ಬಾರಿ ಬಿಜೆಪಿ ಹೈಕಮಾಂಡ್‌ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ನೀಡಿದ್ದಯ, ಕಾಂಗ್ರೆಸ್ ಅಭ್ಯರ್ಥಿ ಪ್ರೋ ರಾಜೀವ್ ಗೌಡ ಅವರ ವಿರುದ್ಧ ಶ್ಲೋಭಾ ಕರಂದ್ಲಾಜೆ ಗೆಲುವಿನ ನಗೆ ಬೀರಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಸತತ ನಾಲ್ಕು ಬಾರಿ ಬಿಜೆಪಿ ಜಯ ಸಾಧಿಸಿದ್ದು, 5ನೇ ಬಾರಿಗೂ ಇಲ್ಲಿನ ಮತದಾರರು ಬಿಜೆಪಿ ಅಭ್ಯರ್ಥಿಗೆ ವಿಜಯದ ಮಾಲೆ ಹಾಕಿದ್ದಾರೆ. ಪಂಚ ಗ್ಯಾರಂಟಿಗಳನ್ನು ಮುಂದಿಟ್ಟುಕೊಂಡು ಅಬ್ಬರ ಪ್ರಚಾರ ಮಾಡಿದ್ದ ಕಾಂಗ್ರೆಸ್‌ಗೆ ಮತ್ತೆ ಈ ಬಾರಿಯೂ ನಿರಾಸೆಯಾಗಿದೆ.

* ಸಮಯ 9 ಗಂಟೆ:ಬೆಂಗಳೂರು ಉತ್ತರ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ 13,528 ಮತಗಳನ್ನ ಪಡೆದಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಪ್ರೋ ರಾಜೀವ್‌ ಗೌಡ ಅವರು 6,521 ಪಡೆದಿದ್ದಾರೆ. ಶೋಭಾ ಕರಂದ್ಲಾಜೆ ಅವರು 7007 ಮತಗಳಿಂದ ಮುನ್ನಡೆಯನ್ನ ಕಾಯ್ದುಕೊಂಡಿದ್ದಾರೆ.

* ಸಮಯ 08: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಆರಂಭವಾಗಲಿದೆ. ಮೊದಲು ಅಂಚೆ ಮತಗಳ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭದಲ್ಲೇ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಮುನ್ನಡೆಯನ್ನ ಕಾಯ್ದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+