Lok Sabha Election 2024: ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಇವರಿಗೆ ಗೆಲುವು ಫಿಕ್ಸ್?
ಬೆಂಗಳೂರು, ಮೇ 31: ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಲೋಕಸಭಾ ಕ್ಷೇತ್ರಗಳಲ್ಲಿ ಒಂದಾದ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ ಬಿಜೆಪಿಯ ಭದ್ರಕೋಟೆ. ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ ಅತಿಹೆಚ್ಚು ಮತದಾರರನ್ನು ಹೊಂದಿರುವುದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ. 2004 ರಿಂದ ಇಲ್ಲಿಯವರೆಗೆ ಬಿಜೆಪಿ ಈ ಕ್ಷೇತ್ರದಲ್ಲಿ ತನ್ನ ಹಿಡಿತವನ್ನ ಸಾಧಿಸಿದ್ದು, ಈ ಬಾರಿ ಮೋದಿ ಅಲೆ ವಿರುದ್ಧ ಗ್ಯಾರಂಟಿ ಅಸ್ತ್ರ ಜೋರಾಗಿ ಸದ್ದು ಮಾಡಿದ್ದು, ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಹೊರಗಿನಿಂದ ಬಂದ ಸದಾನಂದಗೌಡರನ್ನ ಎರಡು ಬಾರಿ ಗೆಲ್ಲಿಸಿದ್ದು, ಈ ಬಾರಿ ಟಿಕೆಟ್ ಮಾಜಿ ಮುಖ್ಯಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಹಾಲಿ ಸಂಸದರಾದ ಸದಾನಂದಗೌಡರಿಗೆ ಟಿಕೆಟ್ ಕೈ ತಪ್ಪಿದ್ದು, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರನ್ನ ಕಣಕ್ಕಿಸಿದ್ದು, ಗೆಲ್ಲುವ ವಿಶ್ವಾಸವನ್ನ ಹೊಂದಿದ್ದಾರೆ.

ಬಿಜೆಪಿ ಹೈಕಮಾಂಡ್ ಸದಾನಂದಗೌಡರಿಗೆ ಟಿಕೆಟ್ ಕೈ ತಪ್ಪಿದ್ದರಿಂದ ಬಿಜೆಪಿ ಹೈಕಮಾಂಡ್ ವಿರುದ್ಧ ಅಸಮಾಧಾನವನ್ನ ಹೊರಹಾಕಿದ್ರು. ಅಲ್ಲದೇ ಯಶವಂತಪುರ ಬಿಜೆಪಿ ಶಾಸಕರಾದ ಎಸ್ ಟಿ ಸೋಮಶೇಖರ್ ಅವರು ಬಿಜೆಪಿ ಅಭ್ಯರ್ಥಿ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದು, ಆಂತರಿಕವಾಗಿ ಕಾಂಗ್ರೆಸ್ ಅಭ್ಯರ್ಥಿ ಪ್ರೋ, ರಾಜೀವ್ ಗೌಡ ಅವರಿಗೆ ಬೆಂಬಲವನ್ನ ಎಸ್ ಟಿ ಸೋಮಶೇಖರ್ ನೀಡಿದ್ದರು ಎನ್ನಲಾಗಿದೆ.
ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷದ ನಡುವೆ ನೇರ ಹಣಾಹಣಿ ಇದ್ದು, ಈ ಬಾರಿ ಕಾಂಗ್ರೆಸ್ ಪಕ್ಷಗಳಿಂದ ಹೊಸ ಅಭ್ಯರ್ಥಿಗಳು ಕಣದಲ್ಲಿದ್ದಾರೆ. 1951ರಿಂದ ಲೋಕಸಭಾ ಚುನಾವಣೆ ಆರಂಭವಾಗಿದ್ದು, ಈವರೆಗೂ 17 ಬಾರಿ ಚುನಾವಣೆ ನಡೆದಿದೆ. ಈ ಕ್ಷೇತ್ರದಲ್ಲಿ 2004ರ ವರೆಗೂ ಕಾಂಗ್ರೆಸ್ ಅಭ್ಯರ್ಥಿ ಸತತವಾಗಿ ಗೆಲ್ಲುತ್ತಾ ಬಂದಿದ್ದು, ಒಂದು ಬಾರಿ ಮಾತ್ರ ಜೆಡಿಎಸ್ ಅಭ್ಯರ್ಥಿ ಗೆಲುವನ್ನ ಸಾಧಿಸಿದ್ದಾರೆ.
ಇನ್ನೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ 2004ರಿಂದ ಸತತವಾಗಿ ನಾಲ್ಕು ಬಾರಿ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದ್ದಾರೆ. ಅತಿ ಹೆಚ್ಚು ಬಾರಿ ಕಾಂಗ್ರೆಸ್ ನಿಂದ ದಿವಂಗತ ಮಾಜಿ ಸಚಿವ ಸಿ.ಕೆ ಜಾಫರ್ ಷರೀಫ್ ಪ್ರತಿನಿಧಿಸಿದ್ದು, ಅತಿ ಹೆಚ್ಚು ಬಾರಿ ಗೆಲುವನ್ನ ಸಾಧಿಸಿದರು. 2019 ರಲ್ಲಿ ಮಾಜಿ ಮುಖ್ಯಮಂತ್ರಿ ಸದಾನಂದಗೌಡರು ಗೆಲುವು ಸಾಧಿಸಿದ್ದು, ಈ ಬಾರಿ ಶೋಭಾ ಕರಂದ್ಲಾಜೆ ಅವರಿಗೆ ಚುನಾವಣೆಯನ್ನ ಎದುರಿಸಿದ್ದು, ಶೋಭಾ ಕರಂದ್ಲಾಜೆ ಅವರು ಗೆಲ್ಲುವ ವಿಶ್ವಾಸವನ್ನ ಬಿಜೆಪಿ ವ್ಯಕ್ತಪಡಿಸಿದೆ.
ಒಕ್ಕಲಿಗರ ಭದ್ರಕೋಟೆಯಾಗದ ಬೆಂಗಳೂರು ಉತ್ತರಿದಿಂದ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ಅವರನ್ನ ಬಿಜೆಪಿ ಕಣಕ್ಕಿಳಿದ್ರೆ, ಕಾಂಗ್ರೆಸ್ ಪ್ರೋ. ರಾಜೀವ್ ಗೌಡ ಅವರನ್ನ ಕಣಕ್ಕಿಳಿಸುವ ಮೂಲಕ ಹಲವು ತಂತ್ರಗಾರಿಕೆಯನ್ನ ನಡೆಸಿದೆ.
ಎಸ್ ಟಿ ಸೋಮಶೇಖರ್ ಕಾಂಗ್ರೆಸ್ ಪಕ್ಷದಲ್ಲಿದ್ದಾಗಲೂ, ಬಿಜೆಪಿಗೆ ಹೆಚ್ಚು ಮತಗಳು ಕೊಟ್ಟಿರೋದ್ರಿಂದ ಸೋಮಶೇಖರ್ ಲೆಕ್ಕಾಚಾರಕ್ಕೂ ಪೆಟ್ಟು ಕೊಡುವ ಸಾಧ್ಯತೆ ಇದೆ. ಈ ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿಗಳು ಒಂದುವರೆ ಲಕ್ಷಕ್ಕೂ ಹೆಚ್ಚು ಮತಗಳಿಂದ ಗೆಲ್ಲುತ್ತಾ ಬಂದಿದ್ದು, ಈ ಬಾರಿಯೂ ಶೋಭಾ ಕರಂದ್ಲಾಜೆ ಅವರು ಸುಲಭವಾಗಿ ಗೆಲ್ಲುತ್ತಾರೆ ಎನ್ನಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಡಳಿತ ವೈಖರಿ ಈ ಕ್ಷೇತ್ರದಲ್ಲಿ ಮತ್ತೊಂದು ಗೆಲುವಿಗೆ ಕಾರಣವಾಗುವ ಸಾಧ್ಯತೆ ಇದೆ.












Click it and Unblock the Notifications