ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರ ಫೋನ್ ಇನ್: ದೂರುಗಳ ಸುರಿಮಳೆ!
ಬೆಂಗಳೂರಿನ ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆದಿದ್ದು, ಸಾರ್ವಜನಿಕರಿಂದ ದೂರುಗಳ ಸುರಿಮಳೆ ಬಂದಿದೆ. ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಆಯುಕ್ತರಾದ ಪೊಮ್ಮಲ ಸುನೀಲ್ ಕುಮಾರ್ ಅವರು ಶುಕ್ರವಾರ ಬೆಳಿಗ್ಗೆ 7 ಗಂಟೆಯಿಂದ ಅಮೃತಹಳ್ಳಿ ಮುಖ್ಯ ರಸ್ತೆಯ ಬ್ಯಾಟರಾಯನಪುರದಲ್ಲಿರುವ ಬೆಂಗಳೂರು ಉತ್ತರ ನಗರ ಪಾಲಿಕೆಯ ನಿಯಂತ್ರಣ ಕೊಠಡಿಯಲ್ಲಿ ಫೋನ್ ಇನ್ ಕಾರ್ಯಕ್ರಮ ನಡೆಸಿದರು.
ಆಕ್ರಮಣಕಾರಿ ಬೀದಿ ನಾಯಿಗಳ ಸೆರೆ: ಫೋನ್ ಇನ್ ಕಾರ್ಯಕ್ರಮದಲ್ಲಿ ಶ್ರೀನಿವಾಸ್ ಎಂಬುವವರು ಬೀದಿ ನಾಯಿಗಳ ಆಕ್ರಮಣಕಾರಿ ನಡವಳಿಕೆಯ ಬಗ್ಗೆ ದೂರು ನೀಡಿದ್ದು, ಆಯುಕ್ತರ ನಿರ್ದೇಶನದ ಮೇರೆಗೆ ಸುಗ್ಗಪ್ಪ ಲೇಔಟ್ ನಲ್ಲಿ ಈಗಾಗಲೇ ಎರಡು ಬೀದಿ ನಾಯಿಗಳನ್ನು ಸೆರೆ ಹಿಡಿದಿದ್ದು, ಅವುಗಳನ್ನು ನಡವಳಿಕೆಯ ವೀಕ್ಷಣೆಗೆ ಒಳಪಡಿಸಲಾಗಿದೆ.

ರಸ್ತೆ ಗುಂಡಿಗಳನ್ನು ಮುಚ್ಚಲು ಸೂಚನೆ: ಫೋನ್ ಇನ್ ಕಾರ್ಯಕ್ರಮದಲ್ಲಿ ಬಹುಪಾಲು ದೂರುಗಳು ರಸ್ತೆ ಗುಂಡಿಗಳಿಗೆ ಸಂಬಂಧಿಸಿದ್ದಾಗಿದ್ದು, ಬೆಂಗಳೂರು ಉತ್ತರ ನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಗುಂಡಿಗಳನ್ನು ತ್ವರಿತವಾಗಿ ಮುಚ್ಚಲು ಹಾಗೂ ರಸ್ತೆ ದುರಸ್ತಿಯ ಅಗತ್ಯವಿರುವ ಸ್ಥಳಗಳಲ್ಲಿ ದುರಸ್ತಿ ಕಾರ್ಯಗಳನ್ನು ಕೈಗೆತ್ತಿಕೊಂಡು, ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡುವಂತೆ ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವ್ಯವಸ್ಥಿತ ತ್ಯಾಜ್ಯ ನಿರ್ವಹಣೆಗೆ ಸೂಚನೆ: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಅಸಮರ್ಪಕ ತ್ಯಾಜ್ಯ ನಿರ್ವಹಣೆಯಾಗುತ್ತಿರುವುದರ ಕುರಿತು ಕಾರ್ಯಕ್ರಮದ ವೇಳೆ ದೂರುಗಳು ಬಂದಿದ್ದು, ಆಯುಕ್ತರು ಸಂಬಂಧಪಟ್ಟ ಅಧಿಕಾರಿಗಳಿಗೆ ತ್ವರಿತವಾಗಿ ಸಮಸ್ಯೆಗಳನ್ನು ಬಗೆಹರಿಸಿ, ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಮರ್ಪಕ ತ್ಯಾಜ್ಯ ನಿರ್ವಹಣೆ ಕಾರ್ಯವನ್ನು ನಡೆಸುವಂತೆ ಸೂಚಿಸಿದರು.
ಬೀದಿ ದೀಪಗಳ ಸೂಕ್ತ ನಿರ್ವಹಣೆ: ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬೀದಿ ದೀಪಗಳ ನಿರ್ವಹಣೆಯಲ್ಲಿ ಸಮಸ್ಯೆಗಳು ಎದುರಾಗಿದ್ದು, ಸೂಕ್ತ ರೀತಿಯಲ್ಲಿ ಬೀದಿ ದೀಪಗಳನ್ನು ನಿರ್ವಹಿಸುವಂತೆ ಹಾಗೂ ದುರಸ್ತಿಯ ಅಗತ್ಯವಿದ್ದಲ್ಲಿ ಕಾರ್ಯವನ್ನು ಕೈಗೆತ್ತಿಕೊಂಡು ತ್ವರಿತವಾಗಿ ಸಮಸ್ಯೆ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಈ ದಿನದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ 41 ಕರೆಗಳನ್ನು ಸ್ವೀಕರಿಸಿದ್ದು ಒಟ್ಟಾರೆಯಾಗಿ 64 ಅಹವಾಲುಗಳನ್ನು ಸ್ವೀಕರಿಸಲಾಗಿದೆ. ಸದರಿ ಅಹವಾಲುಗಳನ್ನು ಸಹಾಯ ಪೋರ್ಟಲ್ ನಲ್ಲಿ ದಾಖಲಿಸಿ, ಸಂಬಂಧಪಟ್ಟ ಅಧಿಕಾರಿಗಳಿಗೆ ರವಾನಿಸಿ, ಸೂಕ್ತ ಕ್ರಮ ವಹಿಸಲು ಸೂಚಿಸಲಾಗಿದೆ.
ಮುಂದುವರೆದಂತೆ, ಸಾರ್ವಜನಿಕರ ಕುಂದುಕೊರತೆಗಳನ್ನು ಪರಿಹರಿಸಲು ಸಾರ್ವಜನಿಕರಿಗೆ ಅನುವಾಗುವಂತೆ ಹಾಗೂ ನಗರ ಪಾಲಿಕೆಯ ಮಟ್ಟದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಚಟುವಟಿಕೆಗಳನ್ನು ನಿಯಮಿತವಾಗಿ ಪರಿಶೀಲನೆ ನಡೆಸುವ ಸಲುವಾಗಿ ಪ್ರತಿ ಶುಕ್ರವಾರ ಆಯುಕ್ತರು ಫೋನ್ ಇನ್ ಕಾರ್ಯಕ್ರಮ ಮುಂದುವರಿಸಲಿದ್ದು, ಸಾರ್ವಜನಿಕರ ಅಹವಾಲುಗಳ ಸಂಬಂಧ ಪರಿಶೀಲಿಸಿ ನಿಯಮಾನುಸಾರ ಕ್ರಮ ಕೈಗೊಳ್ಳಲಿದ್ದಾರೆ ಎಂದು ಉತ್ತರ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
-
Bengaluru: ಬೆಂಗಳೂರು ತ್ಯಾಜ್ಯ ನಿರ್ವಹಣೆ: ಪ್ರತಿದಿನವೂ ವರದಿ ನೀಡಿಲು ಅಧಿಕಾರಿಗಳಿಗೆ ರಾಜೇಂದ್ರ ಚೋಳನ್ ಸೂಚನೆ -
Bengaluru Migration: ಬೆಂಗಳೂರಿಗೆ ನಾರ್ಥಿಗಳ ವಲಸೆಗೆ ಇದೇ ಕಾರಣ, ವೈರಲ್ ಪೋಸ್ಟ್ - ಚರ್ಚೆ -
GBA ದಾಳಿ: ಅಕ್ರಮ ಪ್ಲಾಸ್ಟಿಕ್ ಸಂಗ್ರಹಣೆ ವಿರುದ್ಧ ₹2 ಲಕ್ಷ ದಂಡ, ನಾಗರಿಕ ಅಹವಾಲಿಗೆ ಫೋನ್-ಇನ್ ಆರಂಭ -
Cat: ಬೆಂಗಳೂರಲ್ಲಿ ಬೆಕ್ಕುಗಳ ಪ್ರೇಮ ಪ್ರಕರಣ - ಇತ್ಯರ್ಥಕ್ಕೆ ಪೊಲೀಸರೇ ಬರಬೇಕಾಯ್ತು, ವೈರಲ್ ಸುದ್ದಿ -
Bengaluru Rent Crisis: ಬೆಂಗಳೂರಲ್ಲಿ ಬಾಡಿಗೆ ಮನೆ ಡಿಮ್ಯಾಂಡ್ ಬಗ್ಗೆ ಯುವತಿ ವಿಡಿಯೋ ವೈರಲ್ -
ಬೆಂಗಳೂರು ಹೆಬ್ಬಾಳದ ಮೆಟ್ರೋ ಏಕೀಕೃತ ಸಾರಿಗೆ: 55 ಎಕರೆ ಭೂ ವಿವಾದ - ಸಿಬಿಐ ತನಿಖೆಗೆ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ











Click it and Unblock the Notifications