ಬೆಂಗಳೂರಿನ ಕಚೇರಿಗಳಿಗೂ ನೀರಿನ ಬಿಕ್ಕಟ್ಟು: ವರ್ಕ್ ಫ್ರಂ ಹೋಂಗೆ ನೌಕರರ ಬೇಡಿಕೆ
ಬೆಂಗಳೂರು ಮಾರ್ಚ್ 12: ಬೆಂಗಳೂರಿನಲ್ಲಿ ನೀರಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಹೀಗಾಗಿ ತೀವ್ರ ನೀರಿನ ಸಮಸ್ಯೆಗೆ ತಕ್ಷಣದ ಪರಿಹರ ಕ್ರಮವಾಗಿ ಐಟಿ ಕಂಪನಿಗಳು ಮನೆಯಿಂದ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕು ಎಂದು ಉದ್ಯೋಗಿಗಳು ಒತ್ತಾಯಿಸುತ್ತಿದ್ದಾರೆ. ಇದು ಐಟಿ ಸಂಸ್ಥೆಗಳನ್ನು ಇಕ್ಕಟ್ಟಿಗೆ ಸಿಲುಕಿಸಿದೆ.
ಹೌದು... ರಿವೋಟ್ ಆಗಿ ಕೆಲಸ ಮಾಡಲು ಅವಕಾಶ ಇರುವ ಐಟಿ ಉದ್ಯೋಗಿಗಳು ಸ್ವಂತ ಊರುಗಳಲ್ಲಿ, ಮನೆಯಿಂದ ಕೆಲಸ ಮಾಡುವುದರಿಂದ ವಾಣಿಜ್ಯ ಬಳಕೆ ನೀರಿನ ಬೇಡಿಕೆ ಕಡಿಮೆಯಾಗಿ ತಕ್ಕಮಟ್ಟಿಗೆ ನೀರಿನ ಸಮಸ್ಯೆಗೆ ಪರಿಹಾರ ಕಲ್ಪಿಸಬಹುದು. ಈಗಾಗಲೇ ಕಚೇರಿ, ಅಪಾರ್ಟ್‌ಮೆಂಟ್, ಮೆನಗಳಲ್ಲಿನ ನೂರಾರು ಬೋರ್‌ವೆಲ್‌ಗಳು ಬತ್ತಿ ಹೋಗಿವೆ. ಹೀಗಾಗಿ, ಬೇಸಿಗೆ ಆರಂಭದಲ್ಲೇ ಕಾವೇರಿ ನೀರು ಮತ್ತು ಟ್ಯಾಂಕರ್ ನೀರಿನ ಮೇಲೆ ಅವಲಂಬನೆ ಹೆಚ್ಚಾಗಿದೆ. ಮತ್ತೊಂದೆಡೆ ಸಮರ್ಪಕವಾಗಿ ಕಾವೇರಿ ನೀರಿನ ಪೂರೈಕೆಯಾಗದೆ ನೀರಿನ ಕೊರತೆಯ ಬಿಸಿ ಎಲ್ಲ ಕಚೇರಿ, ಅಪಾರ್ಟ್‌ಮೆಂಟ್‌ಗಳನ್ನು ಬಾಧಿಸುತ್ತಿದೆ.

ಹೀಗಿರುವಾಗ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಅವಕಾಶ ನೀಡಿದರೆ ನೀರಿನ ಸಮಸ್ಯೆ ಸುಧಾರಿಸುವವರೆಗೂ ಎಲ್ಲರಿಗೂ ಅನುಕೂಲವಾಗುವುದು ಎಂದು ಉದ್ಯೋಗಿಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳುತ್ತಿದ್ದಾರೆ.
ಟ್ಯಾಂಕರ್ ನೀರಿನ ಬೆಲೆಯನ್ನು ಸರ್ಕಾರ ನಿಯಂತ್ರಿಸುತ್ತಿದ್ದರೂ, ಅತಿಯಾದ ಅವಲಂಬನೆ ಯಾವಾಗ ಕೈಕೊಡುತ್ತದೆಯೋ ಎಂಬ ಭೀತಿ ಕಾಡುತ್ತಿರುವ ಕಾರಣ ಐಟಿ ಕಂಪನಿಗಳು ಮನೆಯಿಂದ ಕೆಲಸ ಮಾಡುವ ಅವಕಾಶ ನೀಡಬೇಕು ಎಂಬ ಕೋರಿಕೆ ಐಟಿ ವಲಯದಿಂದ ಕೇಳಿ ಬಂದಿದೆ. ಹೊರ ರಾಜ್ಯಗಳ ಉದ್ಯೋಗಿಗಳಿಗೆ ಮಳೆಗಾಲ ಆರಂಭವಾಗುವವರೆಗೆ ಮನೆಯಿಂದ ಕೆಲಸ ಮಾಡುವ ಅವಕಾಶ ನೀಡಬಹುದು. ಸರ್ಕಾರವೇ ಈ ಕುರಿತು ಸೂಚನೆ ನೀಡಬಹುದು ಎಂದು ಜಾಲತಾಣದ ಎಕ್ಸ್ನಲ್ಲಿ ಅಭಿಪ್ರಾಯ ವ್ಯಕ್ತವಾಗಿದೆ.

ನಗರದಲ್ಲಿ ನೀರಿನ ಸಮಸ್ಯೆ ತೀವ್ರವಾಗಿದ್ದು ಐಟಿ ಉದ್ಯೋಗಿಗಳಿಗೆ ನೀರಿನ ಸಮಸ್ಯೆ ನಿಯಂತ್ರಣಕ್ಕೆ ಬರುವವರೆಗೆ ಮನೆಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕು. ಇದರಿಂದ ನಗರದ ಕಚೇರಿಗಳಲ್ಲಿನ ನೀರಿನ ಬೇಡಿಕೆ ಕಡಿಮೆಯಾಗುತ್ತದೆ' ಎಂದು ಪರಿಸರ, ನೀರಿನ ಸಂರಕ್ಷಣೆಯಲ್ಲಿ ತೊಡಗಿರುವ ಸಾಮಾಜಿಕ ಕಾರ್ಯಕರ್ತ ಸಂದೀಪ್ ಅನಿರುದ್ದನ್ ಅಭಿಪ್ರಾಯಪಟ್ಟಿದ್ದಾರೆ.
ಮನೆಯಿಂದ ಕೆಲಸ ಮಾಡಿದರೆ ಅನುಕೂಲ
ಕಚೇರಿಗಳಿಗೆ ಹೋಲಿಸಿದರೆ ಮನೆಯಲ್ಲಿನ ನೀರಿನ ಬಳಕೆ ಮಿತವಾಗಿರುತ್ತದೆ. ಆದರೆ ಮನೆಯಲ್ಲಿಯೂ ನೀರಿನ ಸಮಸ್ಯೆ ಇದ್ದರೆ ಏನು ಮಾಡುವುದು? ನಮ್ಮ ಅಪಾರ್ಟ್‌ಮೆಂಟ್‌ಗೆ ಕಳೆದ ಮೂರು ದಿನಗಳಿಂದ ಕಾವೇರಿ ನೀರು ಬಂದಿಲ್ಲ. ಇರುವ ಎರಡು ಬೋರ್‌ವೆಲ್‌ಗಳ ಪೂಕಿ ಒಂದರಲ್ಲಿ ನೀರು ಬರುತ್ತಿಲ್ಲ. ಹೀಗಾಗಿ ಮನೆಯಿಂದ ಕೆಲಸ ಮಾಡುವುದರಿಂದ ನೀರಿನ ಸಮಸ್ಯೆಗೆ ಪರಿಹಾರ ಸಿಗುತ್ತದದೆ ಎನಿಸುವುದಿಲ್ಲ. ಆದರೆ ಉದ್ಯೋಗಿಗಳು ನೀರಿನ ಸಮಸ್ಯೆ ಇಲ್ಲದ ಊರುಗಳಿಂದ ಕೆಲಸ ಮಾಡುವುದಾದರೆ ಅನುಕೂಲ ಆಗಬಹುದು' ಎಂದು ಸ್ಟಾರ್ಟ್‌ಅಪ್ ಕಂಪನಿ ನಡೆಸುತ್ತಿರುವ ಚಂದ್ರಕಾಂತ್ ಅಭಿಪ್ರಾಯಪಟ್ಟರು.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ ವಿನೋದ್ ರಾಜ್ ಎಂಬುವವರು,' ಕಂಪನಿಗಳು ತಮ್ಮ ಉದ್ಯೋಗಿಗಳನ್ನು ವಾಪಸ್ ಕಚೇರಿಗೆ ಎಳೆದು ತರಲು ಒಂದು ವರ್ಷ ಬೇಕಾಯಿತು. ಆದರೆ ಬೆಂಗಳೂರಿನಲ್ಲಿ ನೀರಿನ ಸಮಸ್ಯೆಯಿಂದ ಮತ್ತೆ ಮನೆಯಿಂದ ಕೆಲಸಕ್ಕೆ ಅವಕಾಶ ಕಲ್ಪಿಸುವ ಪರಿಸ್ಥಿತಿ ಎದುರಾಗಿದೆ; ಎಂದು ಮಾರ್ಮಿಕವಾಗಿ ಬರೆದು ಪೋಸ್ಟ್ ಮಾಡಿದ್ದಾರೆ.
-
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಐಪಿಎಲ್ 2026 ಅಂಕಪಟ್ಟಿ: ರಾಜಸ್ಥಾನ್ ರಾಯಲ್ಸ್ ನಂಬರ್ 1, ಎರಡನೇ ಸ್ಥಾನದಲ್ಲಿ ಅಬ್ಬರಿಸುತ್ತಿರುವ ಆರ್ಸಿಬಿ! -
Krunal Pandya: ವಿರಾಟ್ ಕೊಹ್ಲಿ - 2026ರ ಆರ್ಸಿಬಿ ತಂಡದ ಬಗ್ಗೆ ಸ್ಟಾರ್ ಆಟಗಾರ ಕೃನಾಲ್ ಪಾಂಡ್ಯರಿಂದ ಮಹತ್ವ ವಿಷಯ ರಿವೀಲ್ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ?












Click it and Unblock the Notifications