12 ವರ್ಷವಾದ್ರು ಓಕಳಿಪುರಂ ಕಾರಿಡಾರ್ ಅಪೂರ್ಣ; ಬಾಕಿ ಕಾಮಗಾರಿಗೆ ಪರಿಷ್ಕೃತ ವೇಳಾಪಟ್ಟಿ ಕೇಳಿದ ‍ಜಿಬಿಎ

ಬೆಂಗಳೂರು: ಬೆಂಗಳೂರಿನಲ್ಲಿ ಆಮೆಗತಿಯಲ್ಲಿ ಯೋಜನೆಗಳು ನಡೆಯುತ್ತವೆ, ನಿಗದಿತ ಕಾಲಮಿತಿಯಲ್ಲಿ ಯಾವೊಂದು ಯೋಜನೆ ಮುಗಿಯುವುದಿಲ್ಲ. ಈ ಮಾತಿಗೆ ಮೆಜೆಸ್ಟಿಕ್ ಬಳಿಯ ಓಕಳಿಪುರಂ ಅಷ್ಟಪಥ (8 ಲೈನ್) ಪ್ರಮುಖ ಸಾಕ್ಷಿಯಾಗಿದೆ. ಈ ಯೋಜನೆ 12 ವರ್ಷಕ್ಕೂ ಅಧಿಕ ಸಮಯವಾದರೂ ಇನ್ನೂ ಶೇ.100ರಷ್ಟು ಕೆಲಸ ಮುಗಿಸಿಲ್ಲ. ಗುರುವಾರ ಪರಿಶೀಲನೆ ನಡೆಸಿದ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಬಾಕಿ ಕಾಮಗಾರಿ ಪೂರ್ಣಗೊಳಿಸಲು ಪರಿಷ್ಕೃತ ವೇಳಾಪಟ್ಟಿ ನೀಡುವಂತೆ ಸೂಚಿಸಿದ್ದಾರೆ.

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ಗಾಂಧಿನಗರದಲ್ಲಿರುವ ಓಕಳಿಪುರಂ ಅಷ್ಟಪಥ ಕಾರಿಡಾರ್‌ನ ಬಾಕಿ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದ ವೇಳೆ ಮಾತನಾಡಿದರು. ಓಕಳಿಪುರಂ ಅಷ್ಟಪಥ ಕಾರಿಡಾರ್‌ನ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಲು ಪರಿಷ್ಕೃತ ವೇಳಾಪಟ್ಟಿ ಸಿದ್ಧಪಡಿಸಿ. ಅದರಂತೆ ಕಾಮಗಾರಿಗಳನ್ನು ಕೈಗೊಂಡು ಕಾಲಮಿತಿಯೊಳಗೆ ಮುಗಿಸಬೇಕು, ಬಾಕಿ ಕಾಮಗಾರಿ ಪೂರ್ಣಕ್ಕೆ ಹೆಚ್ಚಿನ ಆದ್ಯತೆ ನಿಡುವಂತೆ ಹೇಳಿದರು.

Okalipuram Eight-Lane Corridor

ಬಾಕಿ ಇರುವ ಕಾಮಗಾರಿ ಯಾವುವು?

ರೈಲ್ವೆ ನಿಲ್ದಾಣದ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಯ ಅಪ್ರೋಚ್ ಕಾಮಗಾರಿ ಪ್ರಗತಿಯಲ್ಲಿದೆ. ರಿಟೈನಿಂಗ್ ವಾಲ್ ಕಾಮಗಾರಿಗೆ ವೇಗ ನೀಡಬೇಕು. ಮೆಜೆಸ್ಟಿಕ್ ಕಡೆಯಿಂದ ರಾಜಾಜಿನಗರದ ಕಡೆಗೆ ತೆರಳುವ ರೈಲ್ವೆ ಹಳಿ ಕೆಳಭಾಗದಲ್ಲಿರುವ ಬಾಕ್ಸ್ ಭಾಗದಲ್ಲಿ ಸಂಪೂರ್ಣ ಸ್ವಚ್ಛತಾ ಕಾರ್ಯ ಕೈಗೊಂಡು, ವಾಹನ ಸಂಚಾರಕ್ಕೆ ಅಗತ್ಯವಿರುವ ಕಾಮಗಾರಿಗಳನ್ನು ಕೈಗೊಳ್ಳಬೇಕು.

ರೈಲ್ವೆ ಬಾಕ್ಸ್‌ನ ಕೆಳಭಾಗದಲ್ಲಿ ತ್ಯಾಜ್ಯ ನೀರು ಸೋರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ, ಸೋರಿಕೆಯನ್ನು ತಡೆಯಲು ರೈಲ್ವೆ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಬೇಕು. ಜೊತೆಗೆ, ಕಾಮಗಾರಿ ಸ್ಥಳದಲ್ಲಿ ಸಂಗ್ರಹವಾಗಿರುವ ನೀರನ್ನು ಪಂಪ್ ಮಾಡಿ ತೆರವುಗೊಳಿಸುವಂತೆ ನಿರ್ದೇಶಿಸಿದರು.

ಚೆನ್ನೈ ರೈಲ್ವೆ ಹಳಿಯ ಕೆಳಭಾಗದಲ್ಲಿ ರೈಲ್ವೆ ಇಲಾಖೆಯಿಂದ ಎರಡು ಬಾಕ್ಸ್ ಪುಶಿಂಗ್ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದೇ ಸ್ಥಳದಲ್ಲಿ ರೈಲ್ವೆ ಇಲಾಖೆಯಿಂದ ನಿರ್ಮಿಸಬೇಕಿರುವ ತಡೆಗೋಡೆ ಕಾಮಗಾರಿಯನ್ನೂ ತ್ವರಿತವಾಗಿ ಪೂರ್ಣಗೊಳಿಸಲು ಅಗತ್ಯ ಕ್ರಮ ಜರುಗಿಸಬೇಕು ಎಂದರು.

300 ಲೋಡ್ ತ್ಯಾಜ್ಯ ತೆರವು

ಬಾಕ್ಸ್ ಅಳವಡಿಸಿರುವ ಮಾರ್ಗದಲ್ಲಿ ಕಟ್ಟಡ ಭಗ್ನಾವಶೇಷ, ಮಣ್ಣು ಸೇರಿದಂತೆ ಸುಮಾರು 300 ಲೋಡ್ ತ್ಯಾಜ್ಯವನ್ನು ತೆರವುಗೊಳಿಸಲಾಗಿದೆ. ಮಳೆನೀರು ಸರಾಗವಾಗಿ ಹರಿದು ಹೋಗಲು 1,200 ಮಿ.ಮೀ. ವ್ಯಾಸದ ಚರಂಡಿ ನಿರ್ಮಾಣ ಕಾಮಗಾರಿ ಶೇ. 65ರಷ್ಟು ಪೂರ್ಣಗೊಂಡಿದ್ದು, ಬಾಕಿ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಪರಿಶೀಲನೆಯ ವೇಳೆ ಅಪರ ಆಯುಕ್ತರಾದ ವೆಂಕಟಾಚಲಪತಿ, ಮುಖ್ಯ ಅಭಿಯಂತರರಾದ ವಿಜಯ್ ಕುಮಾರ್ ಹರಿದಾಸ್, ಅಧೀಕ್ಷಕ ಅಭಿಯಂತರರು, ಕಾರ್ಯಪಾಲಕ ಅಭಿಯಂತರರು ಸೇರಿದಂತೆ ಮತ್ತಿತರ ಅಧಿಕಾರಿಗಳು ಆಯುಕ್ತರಿಗೆ ತ್ವರಿತ ಕಾಮಗಾರಿ ಮುಗಿಸುವ ಭರವಸೆ ಕೊಟ್ಟರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+