Get Updates
Get notified of breaking news, exclusive insights, and must-see stories!

ಬೆಂಗಳೂರಲ್ಲಿ ಐಪಿಎಲ್ ಪಂದ್ಯ: ಪಾರ್ಕಿಂಗ್‌ ವ್ಯವಸ್ಥೆ ಎಲ್ಲಿ?

ಬೆಂಗಳೂರು, ಏಪ್ರಿಲ್, 12: ಚಿನ್ನಸ್ವಾಮಿ ಮೈದಾನದಲ್ಲಿ ಬೆಂಗಳೂರು ಮತ್ತು ಹೈದರಾಬಾದ್ ತಂಡಗಳ ನಡುವೆ ಏಪ್ರಿಲ್ 12 ರಂದು ಐಪಿಎಲ್ ಪಂದ್ಯ ನಡೆಯಲಿದ್ದು ಕೆಲವು ಮಾರ್ಗಗಳ ಸಂಚಾರ ಮತ್ತು ವಾಹನ ನಿಲುಗಡೆಯಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30ರ ವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಅಲ್ಲದೇ ಬಿಎಂಟಿಸಿ ಮತ್ತು ಮೆಟ್ರೋ ಹೆಚ್ಚುವರಿ ಸೇವೆ ನೀಡುತ್ತೇನೆ ಎಂದು ತಿಳಿಸಿದೆ.[ಐಪಿಎಲ್ ಪಂದ್ಯ : ಮೆಟ್ರೋ, ಬಿಎಂಟಿಸಿ ಸಂಚಾರ ವಿಸ್ತರಣೆ]

bengaluru

ಎಲ್ಲೆಲ್ಲಿ ಪಾರ್ಕಿಂಗ್ ನಿಷೇಧ?

1. ಕ್ವೀನ್ಸ್ ರಸ್ತೆಯಲ್ಲಿ ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ.
4. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ.
5. ಕ್ರಿಕೆಟ್ ಮೈದಾನದ ಕಾಂಪೌಂಡಿಗೆ ಹೊಂದಿಕೊಂಡಂತೆ ರಸ್ತೆಯ ಎರಡೂ ಕಡೆ.
6. ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.[ಐಪಿಎಲ್ ನಿಂದ ಹರ್ಷ ಭೋಗ್ಲೆ ಹೊರಹಾಕಲು ಯಾರು ಕಾರಣ]
7. ಕಬ್ಬನ್ ರಸ್ತೆಯಲ್ಲಿ - ಬಿ.ಆರ್.ವಿ ವೃತ್ತದಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆ ಜಂಕ್ಷನ್‌ನಿಂದ ಡಿಕೆನ್ಸ್‌ನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
8. ಸೆಂಟ್ ಮಾರ್ಕ್ಸ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದ ವರೆಗೆ.
09. ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ.
10. ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‌ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
11. ಕಬ್ಬನ್‌ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿಸಲಾಗಿದೆ
12. ಕ್ವೀನ್ಸ್‌ವೃತ್ತದಿಂದ ಲ್ಯಾವೆಲ್ಲಿ ರಸ್ತೆಯಲ್ಲಿ ಗ್ರಾಂಟ್ ಜಂಕ್ಷನ್‌ವರೆಗೆ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿsಸಲಾಗಿದೆ
13. ಸಿದ್ದಲಿಂಗಯ್ಯ ವೃತ್ತದಿಂದ ವಿಠಲ್ ಮಲ್ಯ ರಸ್ತೆಯಲ್ಲಿ ಬಿಷಪ್‌ಕಾಟನ್ ಬಾಲಕೀಯರ ಶಾಲೆಯವರೆಗೆ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ನಿಷೇಧ

ವಾಹನಗಳ ನಿಲುಗಡೆಗ ವ್ಯವಸ್ಥೆ ಎಲ್ಲಿ?
1. ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್‌ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ , ಯುಬಿ ಸಿಟಿಯಲ್ಲಿ ನಿಲ್ಲಿಸಬೇಕು.
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ವಿವಿಐಪಿ ಪಾಸ್ ಹೊಂದಿರುವವರು ಯುಬಿ ಸಿಟಿ ಪೇ ಅಂಡ್ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
4. ಕೆಎಸ್ ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಮಾರ್ಕ್ಸ್ ಕ್ಯಾಥಡ್ರೆಲ್ ಚರ್ಚ್ ಹಾಗೂ ಬೌರಿಂಗ್ ಇನ್ಸ್‌ಟಿಟ್ಯೂಟ್ ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
5 ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ (ಬಿಎಂಟಿಸಿ) ವಾಹನಗಳನ್ನು ಬಳಸಲು ಕೋರಿದೆ. ಪಂದ್ಯ ಮುಗಿದ ನಂತರ ಬಿಎಂಟಿಸಿ ನಗರದ ಎಲ್ಲಾ ಭಾಗಗಳಿಗೂ ಬಸ್ ವ್ಯವಸ್ಥೆ ಮಾಡಿದೆ.
6) ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಕೆಜಿಐಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.

ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶ ಹೇಗೆ?
1.. ಗೇಟ್‌ನಂ-1 ರಿಂದ ಗೇಟ್ ನಂ-9 ಕ್ವೀನ್ಸ್ ರಸ್ತೆಯಲ್ಲಿದ್ದು ವೀಕ್ಷಕರು ತೆರಳಬಹುದು
2. ಗೇಟ್ ನಂ. 12, 13, 14, 16, 17 ಕಬ್ಬನ್ ರಸ್ತೆಯಲ್ಲಿದ್ದು ಇಲ್ಲಿಯೂ ಪ್ರವೇಶಕ್ಕೆ ಅವಕಾಶವಿದೆ.
3. ಗೇಟ್ ನಂ. 18 ರಿಂದ ಗೇಟ್ ನಂ 21 ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತದಿಂದ ಬರುವ ಪ್ರೇಕ್ಷಕರು ತೆರಳಬಹುದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+