ಬೆಂಗಳೂರು VS ಮುಂಬೈ, ಸಂಚಾರ ನಿರ್ಬಂಧ ನೋಡಿಕೊಳ್ಳಿ
ನವದೆಹಲಿ, ಮೇ 10: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮೇ 11, ಬುಧವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವೆ ಐಪಿಎಲ್ ಪಂದ್ಯ ನಡೆಯಲಿದ್ದು ಸಂಚಾರ ನಿರ್ಭಂಧ ಹೇರಲಾಗಿದೆ.
ಈ ಕೆಳಕಂಡ ರಸ್ತೆಗಳಲ್ಲಿ ಮಧ್ಯಾಹ್ನ 2 ಗಂಟೆಯಿಂದ ರಾತ್ರಿ 11.30ರ ವರೆಗೆ ವಾಹನ ನಿಲುಗಡೆ ನಿಷೇಧಿಸಲಾಗಿದೆ. ಅಲ್ಲದೇ ಬಿಎಂಟಿಸಿ ಮತ್ತು ಮೆಟ್ರೋ ಹೆಚ್ಚುವರಿ ಸೇವೆ ನೀಡುತ್ತೇವೆ ಎಂದು ತಿಳಿಸಿವೆ.[ಕೊನೆಗೂ ಆರ್ ಸಿಬಿಗೆ ಪಂದ್ಯ ಗೆಲ್ಲಿಸಿಕೊಟ್ಟ ಬೌಲರ್ಸ್!]
ಮಳೆ ಭಯ ಇಲ್ಲ: ಹವಾಮಾನ ವರದಿ ಹೇಳಿರುವಂತೆ ಬುಧವಾರ ಮೋಡ ಕವಿದ ವಾತಾವರಣ ಬೆಂಗಳೂರಲ್ಲಿ ಇರಲಿದ್ದು ಮಳೆಯ ಭೀತಿ ಇಲ್ಲ. ಬೆಂಗಳೂರಿನಲ್ಲಿ ಎರಡು ಮಳೆ ಬಿದ್ದ ಪರಿಣಾಮ ತಾಪಮಾನದಲ್ಲಿ ಗಣನೀಯ ಇಳಿಕೆಯಾಗಿದ್ದು ಮಳೆ ಸಾಧ್ಯತೆ ಕಡಿಮೆ ಇದೆ.

1. ಕ್ವೀನ್ಸ್ ರಸ್ತೆಯಲ್ಲಿ ಸಿ.ಟಿ.ಓ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ವೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ.
3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ.
4. ರಾಜಭವನ ರಸ್ತೆ, ಟಿ.ಚೌಡಯ್ಯ ರಸ್ತೆ ಮತ್ತು ರೇಸ್ ಕೋರ್ಸ್ ರಸ್ತೆಗಳಲ್ಲಿ.
5. ಕ್ರಿಕೆಟ್ ಮೈದಾನದ ಕಾಂಪೌಂಡಿಗೆ ಹೊಂದಿಕೊಂಡಂತೆ ರಸ್ತೆಯ ಎರಡೂ ಕಡೆ.
6. ಸೆಂಟ್ರಲ್ ಸ್ಟ್ರೀಟ್ ರಸ್ತೆಯಲ್ಲಿ ರಸ್ತೆಯ ಎರಡೂ ಕಡೆ.[ಕ್ರಿಕೆಟ್ ದೇವರ ಕಾಲಿಗೆ ಬಿದ್ದರೆ ತಪ್ಪೇನು ಇಲ್ಲ]
7. ಕಬ್ಬನ್ ರಸ್ತೆಯಲ್ಲಿ - ಬಿ.ಆರ್.ವಿ ವೃತ್ತದಿಂದ ಡಿಕೆನ್ಸನ್ ರಸ್ತೆ ಜಂಕ್ಷನ್ ವರೆಗೆ ರಸ್ತೆಯ ಎರಡೂ ಕಡೆ. ಕಬ್ಬನ್ ರಸ್ತೆಯಲ್ಲಿ ಕಾಮರಾಜ ರಸ್ತೆಯಿಂದ ಡಿಕನ್ಸನ್ ರಸ್ತೆ ಜಂಕ್ಷನ್ ವರೆಗೆ ಬಿ.ಎಂ.ಟಿ.ಸಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ತರಹದ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
8. ಸೆಂಟ್ ಮಾಕ್ರ್ಸ್ ರಸ್ತೆಯಲ್ಲಿ ಎಸ್.ಬಿ.ಐ ವೃತ್ತದಿಂದ ಆಶೀರ್ವಾದಂ ವೃತ್ತದ ವರೆಗೆ.
9. ಮ್ಯೂಸಿಯಂ ರಸ್ತೆಯಲ್ಲಿ, ಎಂ.ಜಿ ರಸ್ತೆಯಿಂದ ಸೆಂಟ್ ಮಾರ್ಕ್ಸ್ ರಸ್ತೆ ವರೆಗೆ ಹಾಗೂ ರೆಸಿಡೆನ್ಸಿ ರಸ್ತೆವರೆಗೆ.
10. ಕಸ್ತೂರಬಾ ರಸ್ತೆಯಲ್ಲಿ, ಕ್ವೀನ್ಸ್‍ವೃತ್ತದಿಂದ ಹಡ್ಸನ್ ವೃತ್ತದ ವರೆಗೆ ಹಾಗೂ ಮಲ್ಯ ರಸ್ತೆಯಲ್ಲಿ ಸಿದ್ದಲಿಂಗಯ್ಯ ವೃತ್ತದಿಂದ ಆರ್.ಆರ್.ಎಂ.ಆರ್ ವೃತ್ತದವರೆಗೆ.
11. ಕಬ್ಬನ್‍ಪಾರ್ಕ್ ಒಳಭಾಗದ ಕಿಂಗ್ ರಸ್ತೆ, ಪ್ರೆಸ್ ಕ್ಲಬ್ ಮುಂಭಾಗ, ಬಾಲಭವನ ಪೌಂಟೇನ್ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಇಲ್ಲ
12. ಕ್ವೀನ್ಸ್ ವೃತ್ತದಿಂದ ಲ್ಯಾವೆಲ್ಲಿ ರಸ್ತೆಯಲ್ಲಿ ಗ್ರಾಂಟ್ ಜಂಕ್ಷನ್‍ವರೆಗೆ ರಸ್ತೆಗಳಲ್ಲಿ ವಾಹನಗಳ ಪಾರ್ಕಿಂಗ್ ಕಡ್ಡಾಯವಾಗಿ ನಿಷೇಧಿsಸಲಾಗಿದೆ
ವಾಹನಗಳ ನಿಲುಗಡೆಗ ವ್ಯವಸ್ಥೆ ಎಲ್ಲಿ?
1. ಪಂದ್ಯ ವೀಕ್ಷಣೆ ಮಾಡಲು ಬರುವ ಸಾರ್ವಜನಿಕರ ವಾಹನಗಳನ್ನು ಸೆಂಟ್‌ಜೋಸೆಫ್ ಇಂಡಿಯನ್ ಹೈಸ್ಕೂಲ್ ಮೈದಾನದಲ್ಲಿ , ಯುಬಿ ಸಿಟಿಯಲ್ಲಿ ನಿಲ್ಲಿಸಬೇಕು.
2. ಶಿವಾಜಿನಗರ ಬಸ್ ನಿಲ್ದಾಣದ 1ನೇ ಮಹಡಿಯಲ್ಲಿ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
3. ವಿವಿಐಪಿ ಪಾಸ್ ಹೊಂದಿರುವವರು ಯುಬಿ ಸಿಟಿ ಪೇ ಅಂಡ್ ಪಾರ್ಕಿಂಗ್ ಸ್ಥಳದಲ್ಲಿ ತಮ್ಮ ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.
4. ಕೆಎಸ್ ಸಿಎ ಸದಸ್ಯರ ವಾಹನಗಳನ್ನು ಸೆಂಟ್ ಮಾರ್ಕ್ಸ್ ಕ್ಯಾಥಡ್ರೆಲ್ ಚರ್ಚ್ ಹಾಗೂ ಬೌರಿಂಗ್ ಇನ್ಸ್‌ಟಿಟ್ಯೂಟ್ ನಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
5 ಸಂಚಾರ ದಟ್ಟಣೆ ತಪ್ಪಿಸಲು ಕ್ರಿಕೆಟ್ ವೀಕ್ಷಣೆಗೆ ಬರುವ ಪ್ರೇಕ್ಷಕರು ಸಾರ್ವಜನಿಕ ಸಾರಿಗೆ (ಬಿಎಂಟಿಸಿ) ವಾಹನಗಳನ್ನು ಬಳಸಲು ಕೋರಿದೆ. ಪಂದ್ಯ ಮುಗಿದ ನಂತರ ಬಿಎಂಟಿಸಿ ನಗರದ ಎಲ್ಲಾ ಭಾಗಗಳಿಗೂ ಬಸ್ ವ್ಯವಸ್ಥೆ ಮಾಡಿದೆ.
6) ವಿಶೇಷ ಕರ್ತವ್ಯಕ್ಕೆ ನಿಯೋಜನೆ ಮಾಡಿರುವ ಪೊಲೀಸ್ ಅಧಿಕಾರಿ/ಸಿಬ್ಬಂದಿ ವಾಹನಗಳನ್ನು ಕಬ್ಬನ್‌ಪಾರ್ಕ್ ಒಳಭಾಗದ ಕೆಜಿಐಡಿ ಬಿಲ್ಡಿಂಗ್ ಮುಂಭಾಗದ ಪಾರ್ಕಿಂಗ್ ಸ್ಥಳದಲ್ಲಿ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ.
ಚಿನ್ನಸ್ವಾಮಿ ಸ್ಟೇಡಿಯಂಗೆ ಪ್ರವೇಶ ಹೇಗೆ?
1.. ಗೇಟ್‌ನಂ-1 ರಿಂದ ಗೇಟ್ ನಂ-9 ಕ್ವೀನ್ಸ್ ರಸ್ತೆಯಲ್ಲಿದ್ದು ವೀಕ್ಷಕರು ತೆರಳಬಹುದು
2. ಗೇಟ್ ನಂ. 12, 13, 14, 16, 17 ಕಬ್ಬನ್ ರಸ್ತೆಯಲ್ಲಿದ್ದು ಇಲ್ಲಿಯೂ ಪ್ರವೇಶಕ್ಕೆ ಅವಕಾಶವಿದೆ.
3. ಗೇಟ್ ನಂ. 18 ರಿಂದ ಗೇಟ್ ನಂ 21 ಲಿಂಕ್ ರಸ್ತೆಯಲ್ಲಿದ್ದು ಅನಿಲ್ ಕುಂಬ್ಳೆ ವೃತ್ತದಿಂದ ಬರುವ ಪ್ರೇಕ್ಷಕರು ತೆರಳಬಹುದಾಗಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications