Bengaluru PG: ಬೆಂಗಳೂರಲ್ಲಿ ಪಿಜಿಗಳಿಗೆ ಶಾಕ್ ಕೊಟ್ಟ ಗ್ರೇಟರ್ ಬೆಂಗಳೂರು ಪ್ರಾಧಿಕಾರ!, ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರಿನಲ್ಲಿ ಆರೋಗ್ಯ ಇಲಾಖೆಯು ಹೋಟೆಲ್‌ಗಳ ಮೇಲೆ ಕಾರ್ಯಾಚರಣೆಯನ್ನು ನಡೆಸಿದ ನಂತರ ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರದ ವ್ಯಾಪ್ತಿಯಲ್ಲಿನ ಪಾಲಿಕೆಗಳು ಪಿಜಿಗಳನ್ನು ಪರಿಶೀಲನೆ ಮಾಡುವುದಕ್ಕೆ ಮುಂದಾಗಿವೆ. ಬೆಂಗಳೂರು ಪೂರ್ವ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸುರಕ್ಷತೆ, ಆರೋಗ್ಯ ಹಾಗೂ ನೈರ್ಮಲ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಪೇಯಿಂಗ್ ಗೆಸ್ಟ್ ವಸತಿ ಗೃಹಗಳು, ಹೋಟೆಲ್, ರೆಸ್ಟೋರೆಂಟ್, ಹಾಸ್ಟೆಲ್, ಡಾಬಾ ಸೇರಿದಂತೆ ಎಲ್ಲಾ ಆಹಾರ ತಯಾರಿಕೆ ಕೇಂದ್ರಗಳನ್ನು ಕಾರ್ಯಾಚರಣೆಯ ಮೂಲಕ ತಪಾಸಣೆ ಮಾಡಿ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಟ್ಟುನಿಟ್ಟಿನ ಕ್ರಮವಹಿಸುವಂತೆ ಪೂರ್ವ ನಗರ ಪಾಲಿಕೆ ಆಯುಕ್ತ ಡಿ.ಎಸ್.ರಮೇಶ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Bengaluru PG: ಪಿ.ಜಿಗಳ ತಪಾಸಣೆಗೆ ಸೂಚನೆ

ಕರ್ನಾಟಕದ ಹೈಕೋರ್ಟ್ ನಿರ್ದೇಶನ ಹಾಗೂ ಸಾರ್ವಜನಿಕರಿಂದ ಬಂದಿರುವ ದೂರುಗಳ ಹಿನ್ನೆಲೆಯಲ್ಲಿ ನಗರ ಪಾಲಿಕೆ ವ್ಯಾಪ್ತಿಯ ಗೇರ್ ಸ್ಕೂಲ್ ರಸ್ತೆ, ನ್ಯೂ ಹಾರಿಜಾನ್ ಕಾಲೇಜು ಪ್ರದೇಶ, ತೂಬರಹಳ್ಳಿ ಸುತ್ತಮುತ್ತ ಪ್ರದೇಶಗಳಲ್ಲಿರುವ ಕಾರ್ಯಾಚರಣೆ ನಡೆಸುತ್ತಿರುವ ಪಿಜಿ ವಸತಿಗೃಹಗಳನ್ನು ಕಾರ್ಯಾಚರಣೆ ಮೂಲಕ ತಪಾಸಣೆ ನಡೆಸುವಂತೆ ಆಯುಕ್ತರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Bengaluru PG

ಪಿಜಿಗಳ ತಪಾಸಣೆಗೆ ಜಂಟಿ ತಂಡ ರಚನೆ

ಇನ್ನು ಪಿಜಿ ವಸತಿಗೃಹಗಳ ತಪಾಸಣೆಗಾಗಿ ಉಪ ನಿರ್ದೇಶಕರು (ನಗರ ಯೋಜನೆ),ಕಾರ್ಯಪಾಲಕ ಎಂಜಿನಿಯರರು, ಆರೋಗ್ಯ ವೈದ್ಯಾಧಿಕಾರಿ ಮತ್ತು ಸಹಾಯಕ ಕಾರ್ಯಪಾಲಕ ಎಂಜಿನಿಯರರ(ಘನ ತ್ಯಾಜ್ಯ ನಿರ್ವಹಣೆ) ಅಧಿಕಾರಿಗಳನ್ನು ಒಳಗೊಂಡ ಜಂಟಿ ತಂಡ ರಚಿಸಿದ್ದು, ಪ್ರತಿಯೊಂದು ಪಿಜಿಗಳ ಕಾರ್ಯಚಟುವಟಿಕೆ ಕುರಿತು ಪ್ರತ್ಯೇಕವಾಗಿ ಪರಿಶೀಲನೆ ನಡೆಸಿ, ನಿಯಮ ಉಲ್ಲಂಘನೆಗಳನ್ನು ದಾಖಲಿಸಿ, ಅಗತ್ಯವಿರುವ ಕಡೆ ನಿಯಮಾನುಸಾರ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಕಟ್ಟಡ ಪರವಾನಗಿ ಹಾಗೂ ಅನಧಿಕೃತ ನಿರ್ಮಾಣ ಪರಿಶೀಲನೆ

ಮುಂದುವರಿದು ಈ ಪರಿಶೀಲನೆಯ ಸಂದರ್ಭದಲ್ಲಿ ಮಂಜೂರಾದ ಕಟ್ಟಡ ನಕ್ಷೆ, ಕಟ್ಟಡ ನಿರ್ಮಾಣ ಪರವಾನಗಿ ಹಾಗೂ ವಾಸ್ತವಿಕ ನಿರ್ಮಾಣದ ನಡುವೆ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸಲು, ಅಲ್ಲದೆ, ಸೆಟ್ಬ್ಯಾಕ್ ನಿಯಮಗಳ ಉಲ್ಲಂಘನೆ, ಅನಧಿಕೃತ ನಿರ್ಮಾಣ, ಹೆಚ್ಚುವರಿ ಮಹಡಿಗಳ ನಿರ್ಮಾಣ ಹಾಗೂ ಕಟ್ಟಡದ ಅನುಮೋದಿತ ಬಳಕೆಯನ್ನು ಬದಲಾಯಿಸಿ ವಾಣಿಜ್ಯ ಅಥವಾ ವಸತಿ ಉದ್ದೇಶಕ್ಕೆ ಬಳಸಲಾಗುತ್ತಿದೆಯೇ ಎಂಬುದನ್ನೂ ಪರಿಶೀಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ವ್ಯಾಪಾರ ಪರವಾನಗಿ ಮತ್ತು ಅನುಮತಿಗಳ ಪರಿಶೀಲನೆ

ಪಿಜಿಗಳು ಮಾನ್ಯವಾದ ಉದ್ದಿಮೆ ಪರವಾನಗಿ ಹಾಗೂ ಅನ್ವಯವಾಗುವ ಇತರೆ ಪರವಾನಗಿಗಳನ್ನು ಹೊಂದಿವೆಯೇ ಎಂಬುದನ್ನು ಪರಿಶೀಲಿಸಲು ತಿಳಿಸಲಾಗಿದೆ. ಪಿಜಿ ಹಾಗೂ ಹಾಸ್ಟೆಲ್‌ಗಳಲ್ಲಿ ವಾಸಿಸುವ ಜನರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ರಚನಾತ್ಮಕ ಸ್ಥಿತಿ, ಅಗ್ನಿ ಸುರಕ್ಷತಾ ವ್ಯವಸ್ಥೆಗಳು ಹಾಗೂ ತುರ್ತು ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳು ಸಮರ್ಪಕವಾಗಿವೆಯೇ ಎಂಬುದನ್ನು ಪರಿಶೀಲಿಸಲು ತಿಳಿಸಲಾಗಿದೆ.

ಪಿಜಿ ವಸತಿಗೃಹಗಳಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯ, ಶೌಚಾಲಯಗಳ ನಿರ್ವಹಣೆ, ಕುಡಿಯುವ ನೀರಿನ ಲಭ್ಯತೆ ಹಾಗೂ ನೀರು ಸರಬರಾಜು ವ್ಯವಸ್ಥೆ, ಒಳಚರಂಡಿ ಮತ್ತು ತ್ಯಾಜ್ಯ ನೀರಿನ ವಿಲೇವಾರಿ ವ್ಯವಸ್ಥೆಯನ್ನು ಪರಿಶೀಲಿಸಲು ಸೂಚಿಸಿದೆ. ಪಿಜಿಗಳಿಂದ ಘನ ತ್ಯಾಜ್ಯವನ್ನು ಮೂಲದಲ್ಲಿಯೇ ಪ್ರತ್ಯೇಕಿಸಲಾಗುತ್ತಿದೆಯೇ, ಸೂಕ್ತ ರೀತಿಯಲ್ಲಿ ಸಂಗ್ರಹಿಸಲಾಗುತ್ತಿದೆಯೇ ಹಾಗೂ ನಿಯಮಾನುಸಾರ ವಿಲೇವಾರಿ ಮಾಡಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಸೂಚಿಸಲಾಗಿದೆ.

ಜಿಯೋ-ಟ್ಯಾಗ್ ಛಾಯಾಚಿತ್ರಗಳೊಂದಿಗೆ ವರದಿ ಸಲ್ಲಿಕೆ

ಜಂಟಿ ಪರಿಶೀಲನಾ ತಂಡವು ಪ್ರತಿಯೊಂದು ಆಸ್ತಿಯನ್ನು ಪ್ರತ್ಯೇಕವಾಗಿ ಪರಿಶೀಲಿಸಿ, ಕಂಡುಬರುವ ಉಲ್ಲಂಘನೆಗಳನ್ನು ದಾಖಲಿಸಬೇಕು. ಅಗತ್ಯವಿರುವ ಸಂದರ್ಭಗಳಲ್ಲಿ ಉಲ್ಲಂಘನೆಗಳ ಜಿಯೋ-ಟ್ಯಾಗ್ ಮಾಡಲಾದ ಛಾಯಾಚಿತ್ರಗಳನ್ನು ಪಡೆದು ದಾಖಲೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಪರಿಶೀಲನೆಯ ಸಂದರ್ಭದಲ್ಲಿ ಕಂಡುಬರುವ ಗಂಭೀರ ಉಲ್ಲಂಘನೆಗಳ ಕುರಿತು ತಕ್ಷಣ ಕ್ರಮ ಕೈಗೊಳ್ಳುವುದರ ಜೊತೆಗೆ, ಒಟ್ಟು ಪರಿಶೀಲನಾ ಕಾರ್ಯವನ್ನು 7 ದಿನಗಳೊಳಗಾಗಿ ಪೂರ್ಣಗೊಳಿಸಿ, ಆಸ್ತಿವಾರು ವಿವರಗಳು, ಕಂಡುಬಂದ ಉಲ್ಲಂಘನೆಗಳು ಹಾಗೂ ಕೈಗೊಂಡ ಅಥವಾ ಪ್ರಸ್ತಾಪಿಸಲಾದ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸಲ್ಲಿಸಲು ಸೂಚಿಸಲಾಗಿದೆ.

ಆಹಾರ ತಯಾರಿಕೆ ಸ್ಥಳಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ

ಇದೇ ಸಂದರ್ಭದಲ್ಲಿ ರಾಜ್ಯಮಟ್ಟದಲ್ಲಿ ಇತ್ತೀಚೆಗೆ ಕೈಗೊಂಡ ಜಾರಿ ಹಾಗೂ ತಪಾಸಣಾ ಕಾರ್ಯಾಚರಣೆಗಳ ವೇಳೆ ಅವಧಿ ಮೀರಿದ ಆಹಾರ ಪದಾರ್ಥಗಳ ಸಂಗ್ರಹಣೆ, ಕಳಪೆ ನೈರ್ಮಲ್ಯ ಹಾಗೂ ಆಹಾರ ಸುರಕ್ಷತಾ ಮಾನದಂಡಗಳ ಉಲ್ಲಂಘನೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ, ಆಹಾರ ತಯಾರಿಕೆ ಮತ್ತು ಪೂರೈಕೆ ಕೇಂದ್ರಗಳ ಮೇಲೂ ಕಟ್ಟುನಿಟ್ಟಿನ ಪರಿಶೀಲನೆ ನಡೆಸಲು ಸೂಚಿಸಲಾಗಿದೆ.

ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಮಾರ್ಗಸೂಚಿಗಳನ್ವಯ ಪಾಲಿಕೆ ವ್ಯಾಪ್ತಿಯ ಎಲ್ಲಾ ಹೋಟೆಲ್ಗಳು, ಡಾಬಾಗಳು, ರೆಸ್ಟೋರೆಂಟ್ಗಳು ಹಾಗೂ ಇತರೆ ಆಹಾರ ತಯಾರಿಕೆ ಮತ್ತು ಪೂರೈಕೆ ಕೇಂದ್ರಗಳ ಆಹಾರದ ಸುರಕ್ಷತೆ ಮತ್ತು ಗುಣಮಟ್ಟಕ್ಕೆ ಸಂಬಂಧಿಸಿದ ನಿಯಮಗಳನ್ನು ಕಡ್ಡಾಯವಾಗಿ ಪರಿಶೀಲನೆ ಮಾಡುವಂತೆ ಆರೋಗ್ಯ ವಿಭಾಗದ ಅಧಿಕಾರಿ ಮತ್ತು ಸಿಬ್ಬಂದಿಗೆ ನಿರ್ದೇಶನ ನೀಡಿದರು. ಅಲ್ಲದೆ ಅವಧಿ ಮೀರಿದ ಆಹಾರ ಬಳಕೆ ಕಂಡುಬಂದಲ್ಲಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+