ನಿಯಮ ಉಲ್ಲಂಘನೆ ಮಾಡಿದ ಬೆಂಗಳೂರಿನ ಪಿ.ಜಿ, ಹೋಟೆಲ್‌ಗಳಿಂದ 2.5 ಲಕ್ಷ ರೂ. ವಸೂಲಿ

ಬೆಂಗಳೂರು: ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡುತ್ತಿರುವ ಪಿ.ಜಿಗಳು ಹಾಗೂ ಹೋಟೆಲ್‌ಗಳ ಮೇಲೆ ಕ್ರಮ ತೆಗೆದುಕೊಳ್ಳುವುದನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಮುಂದುವರಿಸಲಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ವ್ಯಾಪ್ತಿಯಲ್ಲೂ ನಿಯಮ ಉಲ್ಲಂಘನೆ ಮಾಡುತ್ತಿರುವ ಪಿಜಿಗಳು ಹಾಗೂ ಹೋಟೆಲ್‌ಗಳ ಮೇಲೆ ಕ್ರಮ ಜರುಗಿಸಲಾಗುತ್ತಿದೆ.

ಇದೀಗ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯ ಪಿ.ಜಿಗಳು ಹಾಗೂ ಹೋಟೆಲ್‌ಗಳ ಪರಿಶೀಲನೆ ಮುಂದುವರಿದಿದೆ. ನಿಯಮ ಉಲ್ಲಂಘನೆ ಮಾಡಿರುವ ಪಿಜಿಗಳು ಹಾಗೂ ಹೋಟೆಲ್‌ಗಳಿಂದ ಬರೋಬ್ಬರಿ 2,57,100 ರೂಪಾಯಿ ದಂಡ ವಸೂಲಿ ಮಾಡಲಾಗಿದೆ.

Bengaluru PGs and Hotels Fined Over 2 5 Lakh for Violating Safety Hygiene and Food Regulations

ಬೆಂಗಳೂರಿನ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪ್ರಮುಖ ಪಾಲಿಕೆಯಾದ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ದಿನಾಂಕ 12-01-2026 ರಿಂದ ದಿನಾಂಕ 04-02-2026ರ ವರೆಗೆ ಜಯನಗರ, ಬೆಂಗಳೂರು ದಕ್ಷಿಣ, ಬಿಟಿಎಂ ಲೇಔಟ್ ಹಾಗೂ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪೇಯಿಂಗ್ ಗೆಸ್ಟ್ ವಸತಿ ಗೃಹಗಳಲ್ಲಿ (PG) ಹಾಗೂ ಹೋಟೆಲ್ ಉದ್ದಿಮೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ.

ಈ ಸಂದರ್ಭದಲ್ಲಿ ಪಿಜಿ ಹಾಗೂ ಹೋಟೆಲ್‌ಗಳಲ್ಲಿ ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮೆರಾ ಅಳವಡಿಕೆ ಮತ್ತು FSSA ನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಇತ್ಯಾದಿ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಪರಿಶೀಲನೆ ನಡೆಸಲಾಗಿದೆ. ಅಲ್ಲದೇ ನ್ಯೂನತೆಗಳು ಕಂಡುಬಂದಂತಹ ಉದ್ದಿಮೆಗಳಿಗೆ ನೋಟಿಸ್‌ನ್ನು ಜಾರಿ ಮಾಡಿ, ದಿನಾಂಕ 12-01-2026 ರಿಂದ ದಿನಾಂಕ 04-02-2026ರವರೆಗೆ ಒಟ್ಟು 2,06,500 ರೂಪಾಯಿ ದಂಡ ವಿಧಿಸಲಾಗಿರುತ್ತದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ದಕ್ಷಿಣ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಅಲ್ಲದೇ ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ 14 ಪಿ.ಜಿ ಗಳ ಅಡುಗೆ ಕೋಣೆಗಳನ್ನು ಮುಚ್ಚಲಾಗಿದೆ. ಇದರ ಜೊತೆಗೆ ಕೋಟಾ ಕಾಯ್ದೆ (ಸಾರ್ವಜನಿಕ ಧೂಮಪಾನ ನಿಷೇಧ) ಅಡಿ ನಿಯಮ ಉಲ್ಲಂಘಿಸಿದ ಉದ್ದಿಮೆಗಳಿಗೂ ಸಹ 50,600 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+