Bengaluru PG: ಶುಚಿತ್ವ ಇಲ್ಲದ 10 ಪಿ.ಜಿಗಳಿಗೆ ದಕ್ಷಿಣ ನಗರ ಪಾಲಿಕೆಯಿಂದ ಬೀಗ

ಬೆಂಗಳೂರು: ಬೆಂಗಳೂರಿನಲ್ಲಿ ನಿಯಮ ಉಲ್ಲಂಘನೆ ಮಾಡುವ ಪಿ.ಜಿಗಳ (ಪೇಯಿಂಗ್ ಗೆಸ್ಟ್ / ವಸತಿ ಗೃಹ)ಗಳಲ್ಲಿ ಮೇಲೆ ಕಾನೂನು ಕ್ರಮ ಹಾಗೂ ದಂಡ ವಿಧಿಸುವ ಪ್ರಕ್ರಿಯೆಯನ್ನು ಗ್ರೇಟರ್ ಬೆಂಗಳೂರು ಪ್ರಾಧಿಕಾರವು ಮುಂದುವರಿಸಿದೆ. ಬೆಂಗಳೂರಿನಲ್ಲಿ ಕಳೆದ 10 ವರ್ಷಗಳ ಅವಧಿಯಲ್ಲಿ ಪಿ.ಜಿಗಳ ಸಂಖ್ಯೆ ಹೆಚ್ಚಳವಾಗಿದೆ. ಆದರೆ ನೂರಾರು ಪಿ.ಜಿಗಳಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಶುಚಿತ್ವ ಕಾಪಾಡಿಕೊಳ್ಳದೆ ಇರುವ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಕಳೆದ ಎರಡು ತಿಂಗಳಿನಿಂದಲೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಹಾಗೂ ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ವ್ಯಾಪ್ತಿಯಲ್ಲೂ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ.

ಇದೀಗ ಶುಚಿತ್ವ ಕಾಪಾಡಿಕೊಳ್ಳದ ಆರೋಪದ ಮೇಲೆ ಬೆಂಗಳೂರಿನ 10 ಪಿ.ಜಿಗಳಿಗೆ ದಕ್ಷಿಣ ನಗರ ಪಾಲಿಕೆಯಿಂದ ಬೀಗ ಹಾಕಲಾಗಿದೆ. ಈ ಅಭಿಯಾನ ಮುಂದುವರಿಯುತ್ತಿದ್ದು, ಬೆಂಗಳೂರಿನ ಇನ್ನಷ್ಟು ಪಿ.ಜಿಗಳಿಗೆ ಬೀಗ ಬೀಳುವ ಸಾಧ್ಯತೆ ಇದೆ. ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಆಯುಕ್ತರ ಆದೇಶದಂತೆ ಜನವರಿ 12ರಂದು ಬೆಂಗಳೂರಿನ ಜಯನಗರ, ಬೆಂಗಳೂರು ದಕ್ಷಿಣ ಹಾಗೂ ಬಿಟಿಎಂ ಲೇಔಟ್ ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಪೇಯಿಂಗ್ ಗೆಸ್ಟ್ (ವಸತಿ ಗೃಹ)ಗಳಲ್ಲಿ ಪರಿಶೀಲನೆ ಮಾಡಲಾಗಿದೆ.

Bengaluru PGs Under Scanner BBMP Seals 10 Unsanitary Paying Guest Accommodations

ಬೆಂಗಳೂರಿನ ಈ ಭಾಗದ ಪಿ.ಜಿಗಳಲ್ಲಿ ಶುದ್ಧ ಕುಡಿಯುವ ನೀರು, ಶುಚಿತ್ವ, ಅಡುಗೆ ಕೋಣೆ ನೈರ್ಮಲ್ಯ, ಸುರಕ್ಷತೆ, ಉತ್ತಮ ಶೌಚಾಲಯ ವ್ಯವಸ್ಥೆ, ಅಗ್ನಿಶಾಮಕ ಸಾಧನಗಳು ಹಾಗೂ ಸಿ.ಸಿ.ಟಿ.ವಿ ಕ್ಯಾಮರಾ ಅಳವಡಿಕೆ ಮತ್ತು FSSAIನ ಆಹಾರ ಸುರಕ್ಷತಾ ಪ್ರಮಾಣ ಪತ್ರ ಸೇರಿದಂತೆ ಮೂಲಸೌಕರ್ಯ ಸೇವೆ ಇದೆಯೇ ಎನ್ನುವುದನ್ನು ಪರಿಶೀಲನೆ ಮಾಡಲಾಗುತ್ತಿದೆ. ಒಟ್ಟು 66 ಪೇಯಿಂಗ್ ಗೆಸ್ಟ್ ವಸತಿಗೃಹ ಉದ್ದಿಮೆಗಳನ್ನು ತಪಾಸಣೆ ನಡೆಸಲಾಗಿದ್ದು, ಅದರಲ್ಲಿ ನಿಯಮ ಉಲ್ಲಂಘನೆ ಮಾಡಿರುವವರಿಗೆ ಎಚ್ಚರಿಕೆ ನೀಡಲಾಗಿದೆ.

ಪಿ.ಜಿ. ಗಳನ್ನು ನಡೆಸುತ್ತಿರುವವರಿಗೆ ತಿಳುವಳಿಕೆ ಪತ್ರಗಳನ್ನು ಜಾರಿ ಮಾಡಲಾಗಿದ್ದು, ಉದ್ದಿಮೆದಾರರು ಏಳು ದಿನಗಳ ಒಳಗಾಗಿ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು, ಕಾರ್ಯನಿರ್ವಹಣೆ ಮಾಡುವುದಕ್ಕೆ ಸೂಚಿಸಲಾಗಿದೆ ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಮುಂದುವರಿದು ತಪಾಸಣೆ ನಡೆಸಿದ ಪಿ.ಜಿ. ಉದ್ದಿಮೆಗಳಲ್ಲಿ ಕಂಡು ಬಂದ ನ್ಯೂನ್ಯತೆಗಳಿಗೆ ಒಟ್ಟು 22,500 ರೂಪಾಯಿ ದಂಡವನ್ನು ವಿಧಿಸಲಾಗಿದೆ ಎಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+