ಬೆಂಗಳೂರಿನಲ್ಲಿ ನಿಯಮ ಉಲ್ಲಂಘಿಸಿರುವ ಪಿಜಿಗಳಿಗೆ ಬೀಗ: ಜಿಬಿಎ ನಿರ್ದೇಶನ
ಬೆಂಗಳೂರಿನಲ್ಲಿರುವ ಕೆಲವೊಂದು ವಸತಿಗೃಹಗಳಿಗೆ (ಪಿ.ಜಿ) ಸಂಬಂಧಿಸಿದಂತೆ ಗಂಭೀರವಾದ ಆರೋಪಗಳು. ಅಲ್ಲದೇ ಅಪರಾಧ ಪ್ರಕರಣಗಳು ವರದಿ ಆಗಿರುವ ಹಿನ್ನೆಲೆಯಲ್ಲಿ ಕೆಲವೊಂದು ಗಂಭೀರವಾದ ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಆಡಳಿತವು ಮುಂದಾಗಿದೆ.
ಬೆಂಗಳೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಪಿಜಿಗಳಲ್ಲಿ ಅಪರಾಧ ಪ್ರಕರಣ ಹಾಗೂ ಕೆಲವೊಂದು ಗಂಭೀರ ವಿಚಾರಗಳ ಬಗ್ಗೆ ಹೆಚ್ಚು ಚರ್ಚೆ ಆಗುತ್ತಿದೆ. ಇದೀಗ ಈ ವಿಚಾರದಲ್ಲಿ ಕೆಲವೊಂದು ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಳ್ಳುವುದಕ್ಕೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಪಾಲಿಕೆಗಳು ಮುಂದಾಗಿವೆ. ಮಾರ್ಗಸೂಚಿ ಉಲ್ಲಂಘಿಸಿ ಕಾರ್ಯನಿರ್ವಹಿಸುತ್ತಿರುವ ವಸತಿ ಗೃಹಗಳನ್ನು ಮುಚ್ಚಲು ಸೂಚನೆ ನೀಡಲಾಗಿದೆ.

ಬೆಂಗಳೂರು ಪೂರ್ವ ನಗರ ಪಾಲಿಕೆ ಅಪರ ಆಯುಕ್ತರು (ಅಭಿವೃದ್ಧಿ) ಲೋಖಂಡೆ ಸ್ನೇಹಲ್ ಸುಧಾಕರ್ ಅವರು ಮಂಗಳವಾರ ಆರೋಗ್ಯ ವಿಭಾಗದ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ್ದು, ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ಜನನ ಮತ್ತು ಮರಣ ನೋಂದಣಿ, ಇಂದಿರಾ ಕ್ಯಾಂಟೀನ್, ವಸತಿಗೃಹಗಳು, ಆಹಾರ ಸುರಕ್ಷತೆ ಮತ್ತು ಗುಣಮಟ್ಟ, ಉದ್ದಿಮೆ ಪರವಾನಗಿ ಸೇರಿದಂತೆ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಸಮಗ್ರ ಪ್ರಗತಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಪಿಜಿ ಹಾಗೂ ಉದ್ದಿಮೆ ಪರವಾನಗಿ ಚರ್ಚೆ: ಇನ್ನು ಈ ಸಭೆಯಲ್ಲಿ ಪಾಲಿಕೆಯ ವ್ಯಾಪ್ತಿಯಲ್ಲಿರುವ ಪಿಜಿಗಳು ಹಾಗೂ ಉದ್ದಿಮೆ ಪರವಾನಗಿ ಸಂಬಂಧಿಸಿದಂತೆ ಕೆಲವೊಂದು ಪ್ರಮುಖ ಚರ್ಚೆಗಳನ್ನು ಮಾಡಲಾಗಿದೆ. ಪ್ರಮಾಣೀಕೃತ ಮಾರ್ಗಸೂಚಿಯ ಪ್ರಕಾರ ಕಾರ್ಯನಿರ್ವಹಿಸದ ಹಾಗೂ ಉಲ್ಲಂಘನೆ ಮಾಡಿದ ವಸತಿಗೃಹಗಳನ್ನು (ಪಿ. ಜಿ) ತಕ್ಷಣ ಪರಿಶೀಲಿಸಿ ಮುಚ್ಚುವಲ್ಲಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಅಲ್ಲದೇ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾಕಷ್ಟು ವಾಣಿಜ್ಯ ಚಟುವಟಿಕೆಗಳಿದ್ದರೂ ಪರವಾನಗಿ ಪಡೆದವರ ಸಂಖ್ಯೆ ಕಡಿಮೆ ಇರುವುದರಿಂದ, ಪ್ರಚಾರ ಹಾಗೂ ವಿಶೇಷ ಕ್ಯಾಂಪ್ ಮೂಲಕ ಉದ್ದಿಮೆ ಪರವಾನಗಿ ವಿತರಣೆ ಕಾರ್ಯವನ್ನು ವೇಗಗೊಳಿಸಲು ನಿರ್ದೇಶಿಸಿದ್ದಾರೆ.
ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು
ನಗರ ಪಾಲಿಕೆ ವ್ಯಾಪ್ತಿಯಲ್ಲಿ ಜಾರಿಯಲ್ಲಿರುವ ಆರೋಗ್ಯ ಕಾರ್ಯಕ್ರಮಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿರುವ ಆಯುಕ್ತರು, ಡೆಂಗ್ಯೂ ಮುನ್ನೆಚ್ಚರಿಕೆ ಕ್ರಮವಾಗಿ ಲಾರ್ವಾ ಸರ್ವೇ ಮತ್ತು "ಡ್ರೈ ಡೇ" ಕಡ್ಡಾಯವಾಗಿ ನಡೆಸುವಂತೆ ಹಾಗೂ ಟಿಬಿ ಕಾಯಿಲೆ ನಿಯಂತ್ರಣಕ್ಕಾಗಿ ಎಲ್ಲಾ ಆಸ್ಪತ್ರೆಗಳಿಂದ ಮಾಸಿಕ ವರದಿ ಪಡೆದು ನಿಯಮಿತ ಮೇಲ್ವಿಚಾರಣೆ ನಡೆಸುವಂತೆ ಸೂಚಿಸಿದ್ದಾರೆ.
ಮುಂದುವರಿದು ಉಚಿತ ಲಸಿಕೆಗಳ ವಿತರಣೆ ಪರಿಣಾಮಕಾರಿಯಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳುವುದು ಹಾಗೂ ರೋಗ ವಾಹಕಗಳು ಮೂಲಕ ರೋಗ ಹರಡದಂತೆ ನಿರಂತರ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇನ್ನು ಪಾಲಿಕೆಯ ವ್ಯಾಪ್ತಿಯ ಅಂಗಡಿಗಳಲ್ಲಿ ನಿಯಮ ಉಲ್ಲಂಘಿಸಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುತ್ತಿರುವುದನ್ನು ತಡೆಗಟ್ಟಲು ದಾಳಿ ನಡೆಸಿ ವಸ್ತುಗಳನ್ನು ಜಪ್ತಿ ಮಾಡುವಂತೆ ಹಾಗೂ ನಿಯಮಿತ ಮೇಲ್ವಿಚಾರಣೆ ಮಾಡಲು ಹೆಲ್ತ್ ಸೂಪರ್ವೈಸರ್‌ಗಳಿಗೆ ಸೂಚನೆ ನೀಡಿದ್ದಾರೆ.
ಜನನ ಮತ್ತು ಮರಣ ನೋಂದಣಿ: ಜನನ ಮತ್ತು ಮರಣ ಪ್ರಮಾಣ ಪತ್ರ ಸಂಬಂಧ ಸಾರ್ವಜನಿಕರು ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಗಮನಹರಿಸಿ, ಯಾವುದೇ ದೂರಿನ ಹಿನ್ನೆಲೆಯಲ್ಲಿ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ. ಹಿಂದಿನ ಎಲ್ಲಾ ದಾಖಲೆಗಳ ಡಿಜಿಟಲೀಕರಣ ಕಾರ್ಯ ತ್ವರಿತಗೊಳಿಸಲು ನಿರ್ದೇಶಿಸಿದ್ದಾರೆ.
ಇಂದಿರಾ ಕ್ಯಾಂಟೀನ್: ನಗರ ಪಾಲಿಕೆ ವ್ಯಾಪ್ತಿಯ 15 ಇಂದಿರಾ ಕ್ಯಾಂಟೀನ್ ಗಳಲ್ಲಿ ನೈರ್ಮಲ್ಯ ಕಾಪಾಡುವುದು, ಗುಣಮಟ್ಟದ ಆಹಾರ ಒದಗಿಸುವುದು ಹಾಗೂ ದೈನಂದಿನ ನಿರ್ವಹಣೆಯನ್ನು ಖಚಿತಪಡಿಸಲು ಹೆಲ್ತ್ ಸೂಪರ್ವೈಸರ್‌ಗಳಿಗೆ ನೇರ ಜವಾಬ್ದಾರರಾಗಿರುತ್ತಾರೆ. ಹೋಟೆಲ್, ರೆಸ್ಟೋರೆಂಟ್ ಮತ್ತು ಈಟರಿಗಳಲ್ಲಿ ಆಹಾರ ಗುಣಮಟ್ಟ ಹಾಗೂ ನೈರ್ಮಲ್ಯ ಕಾಪಾಡಿಕೊಂಡಿರುವುದನ್ನು ಪರಿಶೀಲಿಸಿ ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
-
Swachh Survey: ಬೆಂಗಳೂರು ಸ್ವಚ್ಛ ಸರ್ವೇಕ್ಷಣ 2025-26: 38 ಉದ್ಯಾನವನ, 11 ಮೈದಾನಗಳ ಸ್ವಚ್ಛತೆ: ರಾಜೇಂದ್ರ ಚೋಳನ್ -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications