ಬೆಂಗಳೂರಿನ ಪೊಲೀಸ್ ಠಾಣೆಗಳಲ್ಲಿ QR ಕೋಡ್ ಆಧಾರಿತ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆ ಜಾರಿ
ಬೆಂಗಳೂರು, ಜುಲೈ 11: ಬೆಂಗಳೂರಿನಲ್ಲಿ ಕೆಲಸ ಮಾಡುವ ಪೊಲೀಸ್ ವ್ಯವಸ್ಥೆಯ ಸುಧಾರಣೆಯ ಭಾಗವಾಗಿ ಜನಸ್ನೇಹಿ ಪೊಲೀಸ್ ಸಕ್ರಿಯಗೊಳಿಸಲು ನಗರದ ಪೊಲೀಸರು ಹೊಸ ವ್ಯವಸ್ಥೆಯೊಂದನ್ನು ಜಾರಿ ಮಾಡಿದ್ದಾರೆ.
QR ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಉಪಯೋಗಿಸಿ ನೀಡಬಹುದಾಗಿದೆ. ಇದರಿಂದ ನಾವು ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಅವರು ಟ್ವೀಟ್ ಮಾಡಿದ್ದಾರೆ.

ಬೆಂಗಳೂರು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆ ಮಾಡಲು ಪೊಲೀಸ್ ಇಲಾಖೆ ಮುಂದಾಗಿದೆ. QR ಕೋಡ್ ಆಧಾರಿತ ಈ ವ್ಯವಸ್ಥೆಯ ಮೂಲಕ ಪೊಲೀಸರ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಉಪಯೋಗಿಸಿ ನೀಡಬಹುದಾಗಿರುತ್ತದೆ ಎಂದು ತಿಳಿಸಲಾಗಿರುತ್ತದೆ.
A QR code based feedback mechanism has been introduced in all police stations of @BlrCityPolice. Avail this to give your honest feedback about our delivery of service. This will help us to serve you better. It's simple quick and objective.#lokasphandana pic.twitter.com/QiuAhrwm7j
— B Dayananda IPS CP Bengalur ಪೊಲೀಸ್ ಆಯುಕ್ತ ಬೆಂಗಳೂರು (@CPBlr) July 11, 2023
ಸಾರ್ವಜನಿಕರು ನೀಡಿದ ಅಭಿಪ್ರಾಯದ ಮೇಲೆ ನಗರ ಪೊಲೀಸ್ ಆಯುಕ್ತರು ಆಡಳಿತ ವ್ಯವಸ್ಥೆಯನ್ನು ಸುಧಾರಿಸಲು ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಲಾಗಿರುತ್ತದೆ. ಇತ್ತೀಚೆಗಷ್ಟೇ ಬೆಂಗಳೂರಿನ ಟ್ರಾಫಿಕ್ ಜಾಮ್ ವಿಚಾರವಾಗಿ ಯಶವಂತಪುರ ಟ್ರಾಫಿಕ್ ಪೊಲೀಸ್ ಸಾರ್ವಜನಿಕರಿಗೆ ಟ್ರಾಫಿಕ್ ಜಾಮ್ ಉಂಟಾಗಲು ಕಾರಣ ಏನು? ಒಂದು ವಾಕ್ಯದಲ್ಲಿ ಉತ್ತರಿಸಿ. ಅತ್ಯುತ್ತಮ ಉತ್ತರ ನೀಡುವವರಿಗೆ ಉತ್ತಮ ಬಹುಮಾನವೂ ಇದೆ ಎಂದು ಹೇಳುವ ಮೂಲಕ ಟ್ವೀಟ್ ಮಾಡಿದ್ದರು.

ಆ ಟ್ವೀಟ್‌ನಲ್ಲಿ ಮೇಷ್ಟ್ರು: ಟ್ರಾಫಿಕ್ ಜಾಮ್ಗಳು ಉಂಟಾಗಲು ಕಾರಣಗಳೇನು ಮತ್ತು ಅವುಗಳನ್ನು ಹೇಗೆ ನಿವಾರಿಸಬಹುದು? (1 ವಾಕ್ಯದಲ್ಲಿ ಉತ್ತರಿಸಿ) ಬುದ್ದಿವಂತ ವಿದ್ಯಾರ್ಥಿಗಳು ಈ ಕೂಡಲೇ ಉತ್ತರಿಸಬಹುದು. (ಪ್ರತಿಯೊಬ್ಬರೂ ಸಹ ವಿದ್ಯಾರ್ಥಿಗಳೇ ಅಂಬೋದು ಸತ್ಯ ಅಲ್ವಾ) "ಅತ್ಯುತ್ತಮ ಉತ್ತರದ ಮಾಲೀಕರಿಗೆ ನಮ್ಮೊಟ್ಟಿಗೆ ಠಾಣೆಯಲ್ಲಿ ಕಾಫಿ ಕುಡಿಯುವ ಅವಕಾಶ ಉಂಟು" ಎಂದು ಟ್ವೀಟ್ ಮಾಡಿತ್ತು.
ಇದಲ್ಲದೆ ನಗರ ಪೊಲೀಸ್ ವಿಭಾಗದಲ್ಲಿ ಸಾರ್ವಜನಿಕರು, ಮಾಧ್ಯಮದ ಜೊತೆ ಸಂವಹನ ನಡೆಸಲು ಜಂಟಿ ಪೊಲೀಸ್ ಆಯುಕ್ತರನ್ನು (ಅಪರಾಧ) ಅಧಿಕೃತ ವಕ್ತಾರರಾಗಿ ನೇಮಕಗೊಳಿಸಿ ನಗರ ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರು ಆದೇಶಿಸಿದ್ದರು. ಸಾರ್ವಜನಿಕ ಸುರಕ್ಷತೆ, ಸಂಚಾರ, ಅಪರಾಧ ನಿಯಂತ್ರಣ ಸಮುದಾಯ ಕಾವಲುಗಳಂತಹ ವಿಶೇಷ ಅಭಿಯಾನವನ್ನು ಅಧಿಕೃತ ವಕ್ತಾರರು ರೂಪಿಸಬೇಕು ಎಂದು ತಿಳಿಸಲಾಗಿತ್ತು.
ಸಾಮಾಜಿಕ ಮಾಧ್ಯಮಗಳಲ್ಲಿ ಬರುವ ಸುಳ್ಳುಸುದ್ದಿ, ತಿರುಚಿದ ಮಾಹಿತಿ, ಉಹಾಪೋಹಗಳನ್ನು ನಿಖರವಾದ ಮಾಹಿತಿ ನೀಡುವ ಮೂಲಕ ಸಾರ್ವಜನಿಕರ ವಿಶ್ವಾಸಾರ್ಹತೆ ಉಳಿಸಿಕೊಳ್ಳಬೇಕು. ಹಿರಿಯ ಅಧಿಕಾರಿಗಳು, ತನಿಖಾಧಿಕಾರಿಗಳು, ಬೆಂಗಳೂರು ಸಂಚಾರ ಪೊಲೀಸ್ ಮತ್ತಿತರ ವಿಭಾಗದ ಅಧಿಕಾರಿಗಳೊಂದಿಗೆ ನಿಕಟ ಸಂಪರ್ಕ ಸಾಧಿಸಿ ಎಲ್ಲೆಡೆಯ ಮಾಹಿತಿ ಸಂಗ್ರಹಿಸಿ ಇಲಾಖೆ ಆದ್ಯತೆಗೆ ಏಕರೀತಿಯ ಸಂದೇಶ ಬರುವಂತೆ ನೋಡಿಕೊಳ್ಳಬೇಕು ಎಂದು ಆದೇಶದಲ್ಲಿ ಹೇಳಲಾಗಿತ್ತು.
ಪೊಲೀಸರಿಗೆ ತನಿಖೆಗೆ ಸಹಾಯ ಮಾಡುವ ವ್ಯಕ್ತಿಗಳು ಹಾಗೂ ಅವರ ಕೆಲಸದ ಪಟ್ಟಿಯನ್ನು ಪೊಲೀಸ್ ಆಯುಕ್ತರಿಗೆ ಸಲ್ಲಿಸಬೇಕು. ಮಾಸಿಕ ಜನಸಂಪರ್ಕ ಸಭೆ ನಡೆಸಬೇಕು. ಸಾರ್ವಜನಿಕರೊಂದಿಗೆ ಅಧಿಕೃತ ವಕ್ತಾರರಾಗಿ ಪಾರದರ್ಶಕತೆ ಕಾಯ್ದುಕೊಳ್ಳುವ ಮೂಲಕ ಪೊಲೀಸ್ ಇಲಾಖೆಯ ವರ್ಚಸ್ಸು, ವಿಶ್ವಾಸಾರ್ಹತೆ ಹೆಚ್ಚಿಸಿಕೊಳ್ಳುವ ಪ್ರಯತ್ನ ಮಾಡಬೇಕು. ಸಾರ್ವಜನಿಕರ ಮತ್ತು ಮಾಧ್ಯಮಗಳ ಪ್ರಶ್ನೆಗಳಿಗೆ ಅಧಿಕೃತ ವಕ್ತಾರರು ಮಾಹಿತಿ ನೀಡಬೇಕು ಎಂದು ತಿಳಿಸಿದ್ದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications