ಬೈಕ್ ವ್ಹೀಲಿಂಗ್ ಮಾಡುತ್ತಿದ್ದ 27 ಯುವಕರನ್ನು ಬಂಧಿಸಿದ ಪೊಲೀಸರು
ಬೆಂಗಳೂರು, ಫೆಬ್ರವರಿ 10 : ಬೆಂಗಳೂರಿನಲ್ಲಿ ಬೈಕ್ ವ್ಹೀಲಿಂಗ್ ಮಾಡಿ ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದ ಪಡ್ಡೆ ಹುಡುಗರಿಗೆ ಬೆಂಗಳೂರು ಪೊಲೀಸರು ಭರ್ಜರಿ ಬಿಸಿ ಮುಟ್ಟಿಸಿದ್ದಾರೆ. ನೈಸ್ ರಸ್ತೆ ಹಾಗೂ ಔಟರ್ ರಿಂಗ್ ರಸ್ತೆಯಲ್ಲಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದ 27 ಪಡ್ಡೆ ಹುಡುಗರನ್ನು ಪೊಲೀಸರು ಬಂಧಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಾರ್ವಜನಿಕರ ದೂರಿನ ಹಿನ್ನೆಲೆಯಲ್ಲಿ ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಿದ ಪಶ್ಚಿಮ ಸಂಚಾರ ವಿಭಾಗದ ಪೊಲೀಸರು, 20 ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ನೈಸ್ ರಸ್ತೆೆ ಹಾಗೂ ಸುತ್ತಮುತ್ತಲ ರಸ್ತೆಗಳಲ್ಲಿ ಅಪಾಯಕಾರಿ ಬೈಕ್ ವ್ಹೀಲಿಂಗ್ ಮಾಡುತ್ತಿದ್ದರು.
ಈ ಮೂಲಕ ರಸ್ತೆಯಲ್ಲಿ ಸಂಚರಿಸುವವರಿಗೆ ತೊಂದರೆ ಉಂಟು ಮಾಡುತ್ತಿರುವ ಕುರಿತ ದೂರುಗಳ ಆಧರಿಸಿ ಪಶ್ಚಿಮ ವಿಭಾಗದ ಸಂಚಾರ ಡಿಸಿಪಿ ಡಾ.ಸೌಮ್ಯಲತಾ ನೇತೃತ್ವದಲ್ಲಿ ಭಾನುವಾರ ವಿಶೇಷ ಕಾರ್ಯಾಚರಣೆ ನಡೆಸಲಾಗಿತ್ತು.

ಇತ್ತೀಚೆಗೆ ನಗರದಲ್ಲಿ ಬೈಕ್ ವೀಲಿಂಗ್ ಮಾಡುವ ಪ್ರಕರಣಗಳು ಕಡಿಮೆಯಾಗಿದ್ದವು ಎಂದು ಹೇಳಲಾಗಿತ್ತು. ಆದರೆ, ನೈಸ್ ರಸ್ತೆಯಲ್ಲಿ ಯುವಕರ ಪುಂಡಾಟ ದಿನದಿಂದ ದಿನ ಹೆಚ್ಚಾಗುತ್ತಿತ್ತು. ಪಶ್ಚಿಮ ವಿಭಾಗದ ಪೊಲೀಸರು ವ್ಹಿಲಿಂಗ್ ಮಾಡುವ ಯುವಕರಿಗೆ ಭರ್ಜರಿ ಬಿಸಿ ಮುಟ್ಟಿಸಿದ್ದಾರೆ.












Click it and Unblock the Notifications