ತಮಿಳುನಾಡು ಮೂಲದ ಜಿಹಾದಿಗಳನ್ನು ಬಂಧಿಸಿದ ಬೆಂಗಳೂರು ಪೊಲೀಸರು
ಬೆಂಗಳೂರು, ಜನವರಿ 9: ತಮಿಳುನಾಡು ಮೂಲದ ಜಿಹಾದಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಬುಧವಾರ ಚೆನ್ನೈ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಧಾರ್ಮಿಕ ವಿರೋಧಿಗಳ ಮೇಲೆ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸುತ್ತಿದ್ದ ಮೂವರು ಜಿಹಾದಿಗಳನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ಅವರಿಂದ ಮೂರು ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬಂಧಿತರನ್ನು ಚೆನ್ನೈ ಮೂಲದ ಹನೀಫ್ ಖಾನ್, ಇಮ್ರಾನ್ ಖಾನ್, ಉಸ್ಮಾನ್ ಗನಿ ಮೊಹಮ್ಮದ್ ಝೈನ್ ಎಂದು ಗುರತಿಸಲಾಗಿದೆ.
ಆರೋಪಿಗಳು ಮಂಗಮ್ಮನ ಪಾಳ್ಯ, ಎಚ್‌ಎಸ್ಆರ್ ಲೇಔಟ್, ತಿಲಕ್ ನಗರ ಸೇರಿದಂತೆ ಹಲವು ಕಡೆಗಳಲ್ಲಿ ಓಡಾಡುತ್ತಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ಸಿಸಿಬಿ ಪೊಲೀಸರ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ.
ತಮಿಳುನಾಡಿನಲ್ಲಿ ಬಂಧಿತರಾಗಿರುವ ಐವರು ಜಿಹಾದಿಗಳು ನೀಡಿದ ಸುಳಿವಿನ ಮೇರೆಗೆ ಇವರನ್ನು ಬಂಧಿಸಲಾಗಿದೆ.












Click it and Unblock the Notifications