ಲಕ್ಷಾಂತರ ಮೌಲ್ಯ ಚಿನ್ನ ದೋಚಿದ್ದ ಕುಖ್ಯಾತ ಕಳ್ಳನ ಬಂಧನ
ಬೆಂಗಳೂರು, ಅಕ್ಟೋಬರ್, 08 : ಮನೆಯ ಬೆಲೆಬಾಳುವ ವಸ್ತುಗಳನ್ನು ಅಪಹರಿಸುತ್ತಿದ್ದ ಕುಖ್ಯಾತ ಕಳ್ಳ ಬುಧವಾರ ಪೊಲೀಸರ ಅತಿಥಿಯಾಗಿದ್ದಾನೆ. ಖದೀಮನನ್ನು ಬಂಧಿಸಿದ ಪೊಲೀಸರು ಆತನಿಂದ 7ಲಕ್ಷ ಮೌಲ್ಯದ ವಸ್ತು ವಶಪಡಿಸಿಕೊಂಡಿದ್ದಾರೆ. ಈತ ಮನೆಯಲ್ಲಿ ಯಾರು ಇಲ್ಲದಿರುವುದನ್ನು ನೋಡಿ ಈ ಕೃತ್ಯ ಎಸಗುತ್ತಿದ್ದ.
ಕುಮಾರ ಸ್ವಾಮಿ ಲೇ ಔಟ್ ನಿವಾಸಿ ಸೈಯ್ಯದ್ ಅಹ್ಮದ್ (28) ಕಳ್ಳತನ ಮಾಡಿದ ಆರೋಪಿ. ಮನೆಯ ಮಂದಿ ಬೀಗ ಹಾಕಿ ಹೊರಗೆ ಹೋಗುತ್ತಿರುವುದನ್ನೇ ಕಾಯುತ್ತಿದ್ದ ಈತ ಮನೆಯ ಬೀಗ ಒಡೆದು ಕಳ್ಳತನ ಮಾಡಿ ಪರಾರಿಯಾಗುತ್ತಿದ್ದ.[ಕಳ್ಳತನ ಬಯಲು ಮಾಡಿದ ಕಳ್ಳಿಯ ಸೆಲ್ಫಿ ಹುಚ್ಚು]

ಅಹಮದ್ ಇದುವರೆಗೂ 7ಲಕ್ಷ ಬೆಲೆಬಾಳುವ 241 ಗ್ರಾಂ ಚಿನ್ನದ ಒಡವೆಗಳು, ಎಲ್.ಸಿ.ಡಿ, ಟಿ.ವಿ, ಕೈಗಡಿಯಾರಗಳು, ಬಟ್ಟೆಗಳನ್ನು ಕದಿಯುತ್ತಿದ್ದ ಎಂದು ಪೊಲೀಸರು ಕೈಗೊಂಡ ತನಿಖೆಯಿಂದ ದೃಢಪಟ್ಟಿದೆ.
ಕಳ್ಳತನ ಕುರಿತಾಗಿ ಬಾಗಲೂರು ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 454, 380ರ ಅಡಿಯಲ್ಲಿ ದೂರು ದಾಖಲಾಗಿದ್ದು, ಪೊಲೀಸ್ ಆಯುಕ್ತರಾದ ವಿಕಾಸ್ ಕುಮಾರ್ ಮಾರ್ಗದರ್ಶನಲ್ಲಿ ಶೋಧಕಾರ್ಯ ಆರಂಭಿಸಿದ ಪೊಲೀಸ್ ತಂಡ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
-
Bengaluru Second Airport: ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ: ದೆಹಲಿಯಲ್ಲಿ ಕೇಂದ್ರ ಸಚಿವರ ಭೇಟಿಯಾದ ಡಿ.ಕೆ.ಶಿವಕುಮಾರ್ -
Nora Fatehi: ಸರ್ಸೆ ನಿನ್ನ ಸೆರಗ ಹಾಡು ವಿವಾದ: ಹೇಳಿದ್ದೊಂದು- ಮಾಡಿದ್ದು ಇನ್ನೊಂದು, ನನ್ನ ನಂಬಿ ಪ್ಲೀಸ್ -
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ












Click it and Unblock the Notifications