ಸುಧಾ ಮೂರ್ತಿ ಹೆಸರಿನಲ್ಲಿ ವಂಚನೆ: ಇಬ್ಬರು ಮಹಿಳೆಯರ ಬಂಧನ
ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾ ಮೂರ್ತಿ ಅವರ ಸೋಗಿನಲ್ಲಿ ಜನರನ್ನು ವಂಚಿಸಿದ ಆರೋಪದ ಮೇಲೆ ಇಬ್ಬರು ಮಹಿಳೆಯರ ವಿರುದ್ಧ ಬೆಂಗಳೂರು ನಗರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಸುಧಾ ಮೂರ್ತಿ ಅವರ ಕಾರ್ಯನಿರ್ವಾಹಕ ಸಹಾಯಕಿ ಮಮತಾ ಸಂಜಯ್ ಶುಕ್ರವಾರ ಜಯನಗರ ಠಾಣೆಗೆ ದೂರು ನೀಡಿದ್ದಾರೆ.
ಮಮತಾ ಸಂಜಯ್ ನೀಡಿದ ದೂರನ್ನು ಆಧರಿಸಿ ಜಯನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ಲಾವಣ್ಯ ಮತ್ತು ಶೃತಿ ಎಂದು ಗುರುತಿಸಲಾಗಿದೆ. ಸುಧಾಮೂರ್ತಿ ಹೆಸರು ಬಳಸಿಕೊಂಡು ಈ ಇಬ್ಬರು ಆರೋಪಿಗಳು ಅಮೆರಿಕದಲ್ಲಿ ಹಣ ಸಂಗ್ರಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಮಮತಾ ಸಂಜಯ್ ಅವರು ನೀಡಿರುವ ದೂರಿನ ಪ್ರಕಾರ, ಸುಧಾ ಮೂರ್ತಿ ಅವರು ಏಪ್ರಿಲ್ 5 ರಂದು ಉತ್ತರ ಕ್ಯಾಲಿಫೋರ್ನಿಯಾದ ಕನ್ನಡ ಕೂಟದ (ಕೆಕೆಎನ್‌ಸಿ) 50 ನೇ ವಾರ್ಷಿಕೋತ್ಸವದಲ್ಲಿ ಭಾಗವಹಿಸಲು ಇಮೇಲ್ ಮೂಲಕ ಆಹ್ವಾನವನ್ನು ಸ್ವೀಕರಿಸಿದ್ದರು. ಆದರೆ ಅವರು ಕಾರ್ಯಕ್ರಮದಲ್ಲಿ ಹಾಜರಾಗಲು ಸಾಧ್ಯವಿಲ್ಲ ಎಂದು ಏಪ್ರಿಲ್ 26ರಂದು ಕ್ಯಾಲಿಫೋರ್ನಿಯಾದ ಕನ್ನಡ ಕೂಟಕ್ಕೆ ಮಾಹಿತಿ ನೀಡಿದ್ದರು.
ಸುಧಾಮೂರ್ತಿ ಭಾಗವಹಿಸುತ್ತಾರೆ ಎಂದು ವಂಚನೆ
ಆಗಸ್ಟ್ 30 ರಂದು, ಸುಧಾ ಮೂರ್ತಿ ಅವರು ಉತ್ತರ ಕ್ಯಾಲಿಫೋರ್ನಿಯಾದ ಕನ್ನಡ ಕೂಟದ (ಕೆಕೆಎನ್‌ಸಿ) 50 ನೇ ವಾರ್ಷಿಕೋತ್ಸವದ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುತ್ತಾರೆ ಎಂದು ಫೋಟೊಗಳು ಮತ್ತು ವಿಡಯೋಗಳನ್ನು ನೋಡಿದ್ದಾರೆ. ಅನುಮಾನಗೊಂಡು, ಉತ್ತರ ಕ್ಯಾಲಿಫೋರ್ನಿಯಾದ ಕನ್ನಡ ಕೂಟದ (ಕೆಕೆಎನ್‌ಸಿ) ಸಂಘಟಕರನ್ನು ಸಂಪರ್ಕಿಸಿ ವಿಚಾರಿಸಿದಾಗ ಸುಧಾ ಮೂರ್ತಿ ಆಪ್ತ ಸಹಾಯಕಿ ಎಂದು ಹೇಳಿಕೊಂಡು ಆಕೆ ಭಾಗವಹಿಸುತ್ತಾರೆ ಎಂದು ಖಚಿತಪಡಿಸಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.
ತಾನು ಇನ್ಫೋಸಿಸ್ ಫೌಂಡೇಶನ್ ಜೊತೆ ಸಂಪರ್ಕ ಹೊಂದಿದ್ದೇನೆ ಎಂದು ಹೇಳಿಕೊಂಡಿದ್ದ ಆರೋಪಿ ಲಾವಣ್ಯ ಅವರು, ಆಗಸ್ಟ್ ಮೊದಲ ವಾರ ಸುಧಾ ಮೂರ್ತಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ತಿಳಿಸಿದ್ದಾರೆ. ಸುಧಾ ಮೂರ್ತಿ ಅವರು ಅಮೆರಿದಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳುತ್ತಾರೆ ಎಂದು ನಂಬಿಸಿ, ಹಲವರಿಂದ ಯುಎಸ್ $ 40 ಹಣ ಸಂಗ್ರಹಿಸಿದ್ದಾರೆ.
ಸೆಪ್ಟೆಂಬರ್ 26ರಂದು ಕಾರ್ಯಕ್ರಮ ನಿಗದಿ ಮಾಡಲಾಗಿತ್ತು, "ಡಾ. ಸುಧಾ ಮೂರ್ತಿಯವರೊಂದಿಗೆ ಭೇಟಿ ಮತ್ತು ಶುಭಾಶಯ" ಜಾಹೀರಾತು ನೀಡಿದ್ದಲ್ಲದೆ, ಅವರನ್ನು ಮುಖ್ಯ ಅತಿಥಿ ಎಂದು ಬಿಂಬಿಸಿ, ಕಾರ್ಯಕ್ರಮ ಟಿಕೆಟ್‌ಗಳನ್ನು $ 40 ನಂತೆ ಮಾರಾಟ ಮಾಡಲಾಗಿತ್ತು.
ಆದರೆ ಈ ಬಗ್ಗೆ ಸುಧಾ ಮೂರ್ತಿ ಅವರಿಗೆ ಮಾಹಿತಿ ಇರಲಿಲ್ಲ. ವಿಷಯ ತಿಳಿಯುತ್ತಿದ್ದಂತೆ ಅವರ ಆಪ್ತ ಸಹಾಯಕಿ ದೂರು ದಾಖಲಿಸಿದ್ದು, ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಜಯನಗರ ಪೊಲೀಸರು ಐಪಿಸಿ ಸೆಕ್ಷನ್ 419 ಮತ್ತು 420 (ವಂಚನೆ), ಮತ್ತು ಐಟಿ ಕಾಯ್ದೆಯ 66 ಡಿ ಮತ್ತು 66 ಸಿ (ವ್ಯಕ್ತಿಯಿಂದ ವಂಚನೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Moodbidri: ಮಹಿಳೆಯರನ್ನು ಮಂಚಕ್ಕೆ ಕರೆದಿದ್ದ ಆರೋಪ: ಮೂಡುಬಿದರೆ ಇನ್ಸ್ಪೆಕ್ಟರ್ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆ -
ಆಂಧ್ರಪ್ರದೇಶದಲ್ಲಿ ಕಲಬೆರಕೆ ಹಾಲು ಸೇವಿಸಿ 16 ಮಂದಿ ಸಾವು: ಹಲವು ರಾಜ್ಯಗಳಲ್ಲಿ ಅಧಿಕಾರಿಗಳಿಂದ ದಾಳಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು?












Click it and Unblock the Notifications