ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿ 3 ದಿನ ಸೀಲ್ ಡೌನ್

|
Google Oneindia Kannada News

ಬೆಂಗಳೂರು, ಜೂನ್ 26 : ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯನ್ನು ಮೂರು ದಿನಗಳ ಕಾಲ ಸೀಲ್‌ ಡೌನ್ ಮಾಡಲಾಗಿದೆ. ಕಚೇರಿಯಲ್ಲಿ ಕೆಲಸ ಮಾಡುವ ಓರ್ವ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ಖಚಿತವಾಗಿದೆ.

ಶುಕ್ರವಾರ ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತರ ಪರವಾಗಿ ಹೆಚ್ಚುವರಿ ಪೊಲೀಸ್ ಆಯುಕ್ತ (ಆಡಳಿತ) ಹೇಮಂತ್ ನಿಂಬಾಳ್ಕರ್ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಕಾಲ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಯಾವ ಸಿಬ್ಬಂದಿಯೂ ಕೆಲಸ ನಿರ್ವಹಣೆ ಮಾಡುವುದಿಲ್ಲ.

36 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ 36 ಸಾವಿರ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ಭರ್ತಿಗೆ ಅಧಿಸೂಚನೆ

Bengaluru Police Commissioner Office Closed For Three Days

ಜೂನ್ 27 ರಿಂದ 29ರ ತನಕ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಚೇರಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿರುತ್ತದೆ. ಆದ್ದರಿಂದ, ಕಚೇರಿಯಲ್ಲಿ ಕೆಲಸ ಮಾಡುವ ಅಧಿಕಾರಿ, ಸಿಬ್ಬಂದಿಗಳು ಮನೆಯಿಂದ/ಉಪ ವಿಭಾಗದ ಕಚೇರಿಯಿಂದ ಕೆಲಸ ನಿರ್ವಹಿಸಲು ಸೂಚಿಸಲಾಗಿದೆ.

ಸಿಬ್ಬಂದಿಗೆ ಕೋವಿಡ್ ಸೋಂಕು; ಪೊಲೀಸ್ ಠಾಣೆಯ ಎಲ್ಲರಿಗೂ ಕ್ವಾರಂಟೈನ್ ಸಿಬ್ಬಂದಿಗೆ ಕೋವಿಡ್ ಸೋಂಕು; ಪೊಲೀಸ್ ಠಾಣೆಯ ಎಲ್ಲರಿಗೂ ಕ್ವಾರಂಟೈನ್

ಮೂರು ದಿನಗಳ ಅವಧಿಯಲ್ಲಿ ಪೊಲೀಸ್ ಆಯುಕ್ತರ ಕಚೇರಿಯಲ್ಲಿನ ನಗರ ನಿಯಂತ್ರಣ ಕೋಣೆಯಲ್ಲಿ ನಿಯಮಿತ ಸಿಬ್ಬಂದಿಗಳನ್ನು ಒಳಗೊಂಡಂತೆ ಕಾರ್ಯ ನಿರ್ವಹಣೆ ಮಾಡಲಿದ್ದು, ಇದನ್ನು ಹೊರತುಪಡಿಸಿ ಕಚೇರಿಯಲ್ಲಿ ಯಾವುದೇ ಕೆಲಸ ನಿರ್ವಹಿಸುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಎಮ್ಮೆ ನೋಡಿಕೊಳ್ಳಲು ರಜೆ ಬೇಕು; ಪೊಲೀಸ್ ಕಾನ್ಸ್‌ಟೇಬಲ್ ರಜೆ ಪತ್ರ ವೈರಲ್ ಎಮ್ಮೆ ನೋಡಿಕೊಳ್ಳಲು ರಜೆ ಬೇಕು; ಪೊಲೀಸ್ ಕಾನ್ಸ್‌ಟೇಬಲ್ ರಜೆ ಪತ್ರ ವೈರಲ್

ಬೆಂಗಳೂರು ನಗರದ ಇನ್ಫೆಂಟ್ರಿ ರಸ್ತೆಯಲ್ಲಿರುವ ನಗರ ಪೊಲೀಸ್ ಆಯುಕ್ತರ ಕಚೇರಿ ಸಿಬ್ಭಂದಿಗಳ ಗಂಟಲು ದ್ರವದ ಪರೀಕ್ಷೆ ಮಾಡಲಾಗಿತ್ತು. ಇದರ ವರದಿ ಶುಕ್ರವಾರ ಬಂದಿದೆ. ಒಬ್ಬ ಸಿಬ್ಬಂದಿಗೆ ಸೋಂಕು ಖಚಿತವಾಗಿದ್ದು, ಅವರ ಜೊತೆ ಸಂಪರ್ಕದಲ್ಲಿ ಇದ್ದವರನ್ನು ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.

ಶುಕ್ರವಾರ ಬೆಂಗಳೂರಿನ 6 ಪೊಲೀಸ್ ಸಿಬ್ಬಂದಿಗೆ ಕೊರೊನಾ ವೈರಸ್ ಸೋಂಕು ಇರುವುದು ಪತ್ತೆಯಾಗಿದೆ. ಸಿ. ಟಿ. ಮಾರ್ಕೆಟ್ ಠಾಣೆಯ ನಾಲ್ವರು, ಚಾಮರಾಜಪೇಟೆ ಠಾಣೆಯ ಇಬ್ಬರು ಸಿಬ್ಬಂದಿಗೆ ಸೋಂಕು ತಗುಲಿದೆ.

English summary
After one police personnel tested positive for Coronavirus Bengaluru city police commissioner office closed for three days. Office will close from June 27 to 29, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X