ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಅಪಾರ್ಟ್‌ಮೆಂಟ್‌ಗಳಿಗೆ ಎಚ್ಚರಿಕೆ ನೀಡಿದ ಬೆಂಗಳೂರು ಪೊಲೀಸ್ ಆಯುಕ್ತರು

|
Google Oneindia Kannada News

ಬೆಂಗಳೂರು, ಮೇ 13 : ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವ ವೈದ್ಯರು, ಪೌರ ಕಾರ್ಮಿಕರು, ಪೊಲೀಸರು ಮುಂತಾದ ಕೊರೊನಾ ವಾರಿಯರ್ಸ್‌ಗೆ ಯಾರೂ ತೊಂದರೆ ಕೊಡಬಾರದು ಎಂದು ಈಗಾಗಲೇ ಹಲವು ಬಾರಿ ಎಚ್ಚರಿಕೆ ಕೊಡಲಾಗಿದೆ. ಈಗ ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಈ ಕುರಿತು ಪೊಲೀಸ್ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರರಾವ್ ಈ ಕುರಿತು ಬುಧವಾರ ಟ್ವೀಟ್ ಮಾಡಿದ್ದಾರೆ. ನಗರದ ಕೆಲವು ಆಸ್ಪತ್ರೆಗಳಿಗೆ ಭೇಟಿ ನೀಡಿದಾಗ ವೈದ್ಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿ ಪೊಲೀಸರಿಗೆ ಮೌಖಿಕವಾಗಿ ನೀಡಿದ ದೂರಿನ ಸಾರಾಂಶವನ್ನು ಟ್ವೀಟ್‌ನಲ್ಲಿ ಹೇಳಿದ್ದಾರೆ.

ವಿಡಿಯೋ; ಬೆಂಗಳೂರು ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯೆಗೆ ಚಪ್ಪಾಳೆ ಸ್ವಾಗತವಿಡಿಯೋ; ಬೆಂಗಳೂರು ಅಪಾರ್ಟ್‌ಮೆಂಟ್‌ನಲ್ಲಿ ವೈದ್ಯೆಗೆ ಚಪ್ಪಾಳೆ ಸ್ವಾಗತ

ನಗರದ ಕೆಲವು ಅಪಾರ್ಟ್‌ಮೆಂಟ್‌ಗಳಲ್ಲಿ ಆಸ್ಪತ್ರೆಗಳಲ್ಲಿ ಕೊರೊನಾ ರೋಗಿಗಳ ಜೀವ ಉಳಿಸಲು ಕಾರ್ಯ ನಿರ್ವಹಣೆ ಮಾಡುತ್ತಿರುವ ವೈದ್ಯರು, ಪ್ಯಾರಾ ಮೆಡಿಕಲ್ ಸಿಬ್ಬಂದಿಗಳಿಗೆ ಗೌರವ ನೀಡುತ್ತಿಲ್ಲ. ಲಿಫ್ಟ್ ಬಳಕೆ ಮಾಡಬೇಡಿ, ಮನೆಯ ಕಸ ವಿಲೇವಾರಿ ಸಂದರ್ಭದಲ್ಲಿ ಕಿರುಕುಳ ನೀಡಲಾಗುತ್ತಿದೆ.

ಕೊರೊನಾ ಚಿಕಿತ್ಸೆ; ಮೈಸೂರು ಮೂಲದ ವೈದ್ಯೆ ಡಾ. ಉಮಾರಿಗೆ ಅಮೆರಿಕದಲ್ಲಿ ಕೃತಜ್ಞತೆ!ಕೊರೊನಾ ಚಿಕಿತ್ಸೆ; ಮೈಸೂರು ಮೂಲದ ವೈದ್ಯೆ ಡಾ. ಉಮಾರಿಗೆ ಅಮೆರಿಕದಲ್ಲಿ ಕೃತಜ್ಞತೆ!

Bengaluru Police Commissioner Tweet About Apartments

ಇದು ಜನರು ಮಾಡುತ್ತಿರುವ ತಪ್ಪು ಮತ್ತು ಕಾನೂನಿನ ಪ್ರಕಾರ ಅಕ್ರಮ ಎಂದು ಭಾಸ್ಕರರಾವ್ ಟ್ವೀಟ್‌ನಲ್ಲಿ ಹೇಳಿದ್ದಾರೆ. ಕೊರೊನಾ ವಾರಿಯರ್ಸ್‌ಗೆ ಗೌರವ ಸಿಗಬೇಕು ಎಂದು ಟ್ವೀಟ್‌ನಲ್ಲಿ ಪೊಲೀಸ್ ಆಯುಕ್ತರು ಹೇಳಿದ್ದಾರೆ.

ಆಸ್ಪತ್ರೆಗೆ ಕೊರೊನಾ ಶಂಕಿತ ಬಂದಿದ್ದ ಎಂದಿದ್ದಕ್ಕೆ ಕೆಲಸ ಕಳೆದುಕೊಂಡ ವೈದ್ಯೆ ಆಸ್ಪತ್ರೆಗೆ ಕೊರೊನಾ ಶಂಕಿತ ಬಂದಿದ್ದ ಎಂದಿದ್ದಕ್ಕೆ ಕೆಲಸ ಕಳೆದುಕೊಂಡ ವೈದ್ಯೆ

ಅಪಾರ್ಟ್‌ಮೆಂಟ್‌ಗಳಲ್ಲಿ ಇಂತಹ ಘಟನೆಗಳು ನಡೆದಿರುವುದರಿಂದ ಅಪಾರ್ಟ್‌ಮೆಂಟ್ ನಿವಾಸಿಗಳ ಸಂಘ ಈ ಕುರಿತು ಗಮನಿಸಬೇಕು ಎಂದು ಪೊಲೀಸ್ ಆಯುಕ್ತರು ಟ್ವೀಟ್‌ನಲ್ಲಿ ಸೂಚನೆ ನೀಡಿದ್ದಾರೆ.

ಕೊರೊನಾ ವಾರಿಯರ್ಸ್‌ಗೆ ಮನೆ ಖಾಲಿ ಮಾಡುವಂತೆ ಒತ್ತಡ ಹಾಕಿದ ಹಲವು ಪ್ರಕರಣಗಳು ದೇಶದ್ಯಾಂತ ವರದಿಯಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಸಹ ಇಂತಹವುಗಳನ್ನು ಮಾಡಬಾರದು ಕೊರೊನಾ ವಾರಿಯರ್ಸ್‌ಗೆ ಗೌರವ ಸಲ್ಲಿಸಬೇಕು ಎಂದು ದೇಶವನ್ನು ಉದ್ದೇಶಿಸಿ ಭಾಷಣ ಮಾಡುವಾಗ ಹೇಳಿದ್ದರು.

English summary
In many apartments doctors and paramedical staff are being ill treated by denying use of this action is not only wrong but illegal too tweeted Bengaluru police commissioner Bhaskar Rao.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X