ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

'ನಿಖಿಲ್ ಎಲ್ಲಿದ್ದೀಯಪ್ಪಾ' ಎಂದಿದ್ದಕ್ಕೆ ಬಂಧಿಸಿದ್ದ ಪೊಲೀಸರಿಗೆ ಹೈಕೋರ್ಟ್ ಛೀಮಾರಿ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 12: ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಕುಟುಂಬದ ವಿರುದ್ಧ ಪೋಸ್ಟ್‌ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಅಕ್ರಮವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮಾಡಿದ್ದ ಅಧಿಕಾರಿಗಳಿಗೆ ಹೈಕೋರ್ಟ್ ಒಂದು ಲಕ್ಷ ರೂ ದಂಡ ವಿಧಿಸಿದ ಪೊಲೀಸರನ್ನು ತನಿಖೆಗೊಳಪಡಿಸಲು ಆದೇಶಿಸಿದೆ.

'ಒಂದು ತಿಂಗಳಲ್ಲಿ ಅರ್ಜಿದಾರರಿಗೆ ದಂಡದ ಮೊತ್ತ ಪಾವತಿಸಬೇಕು. ದಂಡದ ಹಣವನ್ನು ತಪ್ಪಿತಸ್ಥ ಪೊಲೀಸರ ವೇತನದಿಂದ ವಸೂಲು ಮಾಡಬೇಕು ಮತ್ತು ಡಿಜಿಪಿ ತಪ್ಪಿತಸ್ಥ ಪೊಲೀಸರ ವಿರುದ್ಧ ಇಲಾಖಾ ವಿಚಾರಣೆ ನಡೆಸಿ ಮೂರು ತಿಂಗಳಲ್ಲಿಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ವರದಿ ಸಲ್ಲಿಸಬೇಕು' ಎಂದು ನ್ಯಾ.ಪಿ.ಎಸ್‌. ದಿನೇಶ್‌ ಕುಮಾರ್‌ ಅವರಿದ್ದ ಏಕಸದಸ್ಯಪೀಠ ಆದೇಶ ನೀಡಿದೆ.

ಸರ್ಕಾರಿ ಕಾರ್ಯಕ್ರಮದಲ್ಲೂ ಕೇಳಿಬಂತು ಸರ್ಕಾರಿ ಕಾರ್ಯಕ್ರಮದಲ್ಲೂ ಕೇಳಿಬಂತು "ನಿಖಿಲ್ ಎಲ್ಲಿದ್ದೀಯಪ್ಪ"!

ಜಯಕಾಂತ್‌ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾಯಾಲಯ, 'ಶ್ರೀರಾಮಪುರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿದೆ. ನಿಯಮ ಪಾಲಿಸದೆ ಅರ್ಜಿದಾರರಿಗೆ ಪೊಲೀಸ್‌ ಕಸ್ಟಡಿಗೆ ನೀಡಿದ್ದ ಮ್ಯಾಜಿಸ್ಪ್ರೇಟ್‌ ವಿರುದ್ಧ ಇಲಾಖಾ ವಿಚಾರಣೆ ನಡೆಸಬೇಕು' ಎಂದು ಹೈಕೋರ್ಟ್‌ ರಿಜಿಸ್ಟ್ರಾರ್‌ ಜನರಲ್‌ಗೆ ಆದೇಶ ನೀಡಿದೆ.

Bengaluru police Fined for Wrongly arrested FaceBook Admin

ಪುಟದ ಆಡ್ಮಿನ್‌ ಜಯಕಾಂತ್‌ ಜೂ.17ರಂದು ನಿರೀಕ್ಷಣಾ ಜಾಮೀನು ಪಡೆದಿದ್ದರು. ಆದರೆ ಮತ್ತೆ ಜೂ.23ಕ್ಕೆ ಅದೇ ಫೇಸ್‌ಬುಕ್‌ ಪುಟದ ಕುರಿತು ಇನ್ನೊಂದು ದೂರನ್ನು ಜೆಡಿಎಸ್‌ನ ಐಟಿ ಘಟಕ ಸಲ್ಲಿಸಿತ್ತು. ಅದನ್ನು ಆಧರಿಸಿ ಜಯಕಾಂತ್‌ ಬಂಧಿಸಲಾಗಿತ್ತು. ನಂತರ ಹೈಕೋರ್ಟ್‌ ನಿರ್ದೇಶನ ಮೇರೆಗೆ ಆತನನ್ನು ಬಿಡುಗಡೆ ಮಾಡಲಾಗಿತ್ತು.

ಪ್ರಕರಣವೇನು? ಟ್ರೋಲ್ ಮಗ ಪೇಜ್ ಅಡ್ಮಿನ್ ಜೈಕಾಂತ್ ಏವೇಗೌಡರ ಕುಟುಂಬದ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಎನ್ನಲಾಗಿತ್ತು. ಹೀಗಾಗಿ, ಜೈಕಾಂತ್ ವಿರುದ್ಧ ಜೆಡಿಎಸ್ ಪಕ್ಷದ ಕಾರ್ಯಕರ್ತರು ಶ್ರೀರಾಂಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು.

ನಂತರ ಈ ದೂರು ಸಂಬಂಧ ಸೆಷನ್ಸ್ ಕೋರ್ಟ್‌ನಲ್ಲಿ ಆರೋಪಿ ಜಾಮೀನು ತಂದು ದಾಖಲೆಗಳನ್ನು ಸಲ್ಲಿಸಲು ಠಾಣೆಗೆ ಹೋಗಿದ್ದ. ಈ ವೇಳೆ ಜೈಕಾಂತ್ ಮೇಲೆ ಜೈಕಾಂತ್‌ನನ್ನು ಇನ್ನೊಂದು ಎಫ್‌ಐಆರ್ ದಾಖಲಿಸಿ ಬಂಧಿಸಿ, ವಶಕ್ಕೆ ತೆಗೆದುಕೊಂಡಿದ್ದರು.

English summary
The Karnataka High Court on Friday Imposed a Fine Of Rs 1 Lakh on Bengaluru police for Registering FIRs Against the administrator.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X