ಬೆಂಗಳೂರಲ್ಲಿ ಅಕ್ರಮ ವಲಸಿಗರು: 117 ಜನರಿಗೆ ನೋಟಿಸ್‌ ಜಾರಿ

ಬೆಂಗಳೂರು, ಜು.31: ಬೆಂಗಳೂರಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚಾಗುತ್ತಿದೆ, ವಿದೇಶದಿಂದ ಬಂದು ಇಲ್ಲಿಯೇ ನೆಲೆಯೂರಿ ವೀಸಾ ಅವಧಿ ಮುಗಿದರೂ ಅಕ್ರಮವಾಗಿ ಇಲ್ಲಿಯೇ ಉಳಿದುಕೊಳ್ಳುತ್ತಿದ್ದಾರೆ.

ಕೆಲವು ವಿದೇಶಿಗರು ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇಂತವರಿಗೆ ಕಡಿವಾಣ ಹಾಕಲು ಪೊಲೀಸರು ಮುಂದಾಗಿದ್ದಾರೆ. ಅಸ್ಸಾಂನಲ್ಲಿ ಅಕ್ರಮ ವಲಸಿಗರಿಗೆ ಶಾಕ್‌ ಕೊಟ್ಟ ಬೆನ್ನಲ್ಲೇ ರಾಜ್ಯದಲ್ಲೂ ಹಲವು ಬೆಳವಣಿಗೆಯಾಗಿದೆ. ನಗರದಲ್ಲಿ ಸಾವಿರಾರು ವಿದೇಶಿ ಪ್ರಜೆಗಳು ಅಕ್ರಮವಾಗಿ ನೆಲೆಸಿದ್ದಾರೆ. ಹೀಗೆ ತಳವೂರಿರುವ ವಿದೇಶಿಗರನ್ನು ಜೈಲಿಗೆ ಕಳುಹಿಸುವ ಕಾರ್ಯ ಚುರುಕುಗೊಂಡಿದೆ.

ಬೆಂಗಳೂರು ನಗರವೊಂದರಲ್ಲೇ 975 ಮಂದಿ ಅಕ್ರಮ ವಿದೇಶಿಗರು ವಾಸ್ತವ್ಯ ಹೂಡಿದ್ದಾರೆ, ಬೆಂಗಳೂರು ಇದೀಗ ಅಕ್ರಮ ವಿದೇಶಿಗರ ಅಡಗು ತಾಣವಾಗಿದೆ. 1076 ಅಕ್ರಮವಾಗಿ ನೆಲೆಸಿರುವ ವಿದೇಶಿಗರನ್ನು ಪೊಲೀಸರು ಪತ್ತೆ ಮಾಡಿದ್ದಾರೆ, ಇವರ ವಿರುದ್ಧ ಕ್ರಮಕ್ಕೆ ರಾಜ್ಯ ಪೊಲೀಸ್‌ ಇಲಾಖೆ ಮುಂದಾಗಿದೆ.

Bengaluru police have identified 975 over stayed foreigners

ಬೆಂಗಳೂರು ನಗರ ಪೊಲೀಸರಿಂದ 117 ಅಕ್ರಮ ವಿದೇಶಿಗರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಹಲವರನ್ನು ಜೈಲಿಗೆ ಕಳುಹಿಸಿದರೆ ಇನ್ನೂ ಕೆಲವರನ್ನು ದೇಶಬಿಟ್ಟು ತೆರಳುವಂತೆ ನೋಟಿಸ್‌ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+