ಬೆಂಗಳೂರಿನಲ್ಲಿರುವ ತಮಿಳರ ಪ್ರದೇಶಕ್ಕೆ ಬಿಗಿ ಭದ್ರತೆ
ಬೆಂಗಳೂರು, ಸೆ. 12: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾಗಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ತಮಿಳು ಸಮುದಾಯ ಹೆಚ್ಚಾಗಿ ವಾಸವಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು, ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.
ಆದರೆ, ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ತಮಿಳುನಾಡಿಗೆ ಮನವಿ ಮಾಡಿದ್ದಾರೆ. [ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ]
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ರಾಜ್ಯದ ಜನ ಶಾಂತಿ ಕಾಪಾಡಿಕೊಳ್ಳಬೇಕು. ಇತಂಹ ಸಂದರ್ಭದಲ್ಲಿ ಸುಳ್ಳು ವಂದತಿಗಳು ಹರಡುತ್ತವೆ. ಅವುಗಳಿಗೆ ಕಿವಿಗೊಡಬೇಡಿ. ಸುಪ್ರೀಂಕೋರ್ಟಿನಲ್ಲಿ ನಮಗೆ ಸ್ವಲ್ಪ ಪ್ರಮಾಣದಲ್ಲಿ ನಿರಾಶೆ ಸಿಕ್ಕಿದೆ.
ಹಲವು ಕೀಡಿಗೇಡಿಗಳು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದ್ದು, ಸಾರ್ವಜನಿಕರು ಯಾವುದೇ ವದಂತಿಗಳಿಗೆ ಕಿವಿಗೊಡಬೇಡಿ! ನಗರದಲ್ಲಿ ನಿಷೇದಾಜ್ಞೆ ಜಾರಿ ಇರುವುದಿಲ್ಲ. @CPBlr
— BengaluruCityPolice (@BlrCityPolice) September 12, 2016
15 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಸೆ.5ರಂದು ಆದೇಶಿಸಿದ್ದ ನ್ಯಾಯಾಲಯ ಈಗ 12ಸಾವಿರ ಕ್ಯೂಸೆಕ್ ಗೆ ಇಳಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಡಿಜಿಪಿ ಓಂಪ್ರಕಾಶ್ ಅವರ ಸಂದೇಶ
ಎರಡೂ ರಾಜ್ಯದಲ್ಲೂ ಶಾಂತಿಯುತ ವಾತಾವರಣ ಇರಬೇಕು. ಡಿಜಿಪಿ ಓಂಪ್ರಕಾಶ್ ಅವರು ತಮಿಳುನಾಡಿನ ಡಿಜಿಪಿ ರಾಜೇಂದ್ರನ್ ಅವರ ಜತೆ ಮಾತುಕತೆ ನಡೆಸಿದ್ದು, ಅಲ್ಲಿನ ಕನ್ನಡಿಗರಿಗೆ ರಕ್ಷಣೆ ಕೊಡಬೇಕು. ನಾವು ಇಲ್ಲಿ ತಮಿಳರಿಗೆ ತೊಂದರೆಯಾಗದಂತೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯವಾದರೆ ನಾನು ತಮಿಳುನಾಡು ಗೃಹ ಸಚಿವ ಜತೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.

ಹೆಚ್ಚಿನ ಭದ್ರತೆ ಒದಗಿಸಲಾಗಿದೆ
ಕಾವೇರಿ ವಿವಾದ ಭುಗಿಲೆದ್ದಿದ್ದು, ಸೂಕ್ಷ್ಮ ಪ್ರದೇಶಗಳಿಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿ ಸಜ್ಜಾಗಿದೆ. ಅಗತ್ಯ ಬಿದ್ದರೆ ಕೇಂದ್ರದಿಂದ ಸಿಆರ್ ಪಿಎಫ್ ಮತ್ತು ಆರ್‍ಎಎಫ್ ನ 10 ತುಕಡಿಗಳನ್ನು ಕರೆಸಿಕೊಳ್ಳಲಾಗಿದೆ. ಅಗತ್ಯ ಬಿದ್ದರೆ ಇನ್ನಷ್ಟು ತುಕಡಿಗಳನ್ನು ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.

ಹೆಚ್ಚಿನ ಭದ್ರತೆ ಒದಗಿಸಲಾಗಿದೆ
ಸರ್ವಜ್ಞನಗರ, ಚಿಕ್ಕಪೇಟೆ, ವಿವೇಕ ನಗರ, ಸಿವಿ ರಾಮನ್ ನಗರ, ಶಿವಾಜಿನಗರ, ಕೆಆರ್ ಪುರಂ, ಪುಲಕೇಶಿ ನಗರ, ಶಾಂತಿನಗರ, ಮಡಿವಾಳ, ಚಾಮರಾಜಪೇಟೆ, ಮಾಗಡಿ ರಸ್ತೆ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಮೈಸೂರು ರಸ್ತೆ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕನ್ನಡಿಗರ ರಕ್ಷಣೆಗೆ ಕಾರ್ಯದರ್ಶಿಗಳ ಕರೆ
ಕಾವೇರಿ ವಿವಾದದಿಂದ ಉಂಟಾಗಿರುವ ಗಲಭೆ ಹಿನ್ನೆಲೆಯಲ್ಲಿ ಕನ್ನಡಿಗರ ಮೇಲೆ ಕೆಲವರು ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು, ಅಲ್ಲಿ ನೆಲೆಸಿರುವ ಅಲ್ಪಸಂಖ್ಯಾತ ಕನ್ನಡಿಗರು ಭೀತಿಗೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಅವರ ರಕ್ಷಣೆಗೆ ಧಾವಿಸಬೇಕು ಎಂಬ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ತಮಿಳುನಾಡು ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.
-
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Bengaluru: ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಮಾ.27ರಂದು ನಗರದಲ್ಲಿ ಮಾಂಸ ಮಾರಾಟ ಬಂದ್ಗೆ GBA ಆದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
ಐಪಿಎಲ್ಗೂ ಮುನ್ನ ಆರ್ಸಿಬಿ ಹೊಸ ದಾಖಲೆ: 16,000 ಕೋಟಿಗೆ ಆದಿತ್ಯ ಬಿರ್ಲಾ ಗ್ರೂಪ್ ಪಾಲಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications