ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಂಗಳೂರಿನಲ್ಲಿರುವ ತಮಿಳರ ಪ್ರದೇಶಕ್ಕೆ ಬಿಗಿ ಭದ್ರತೆ

By Mahesh
|
Google Oneindia Kannada News

ಬೆಂಗಳೂರು, ಸೆ. 12: ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆಯಾಗಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆ ಬೆಂಗಳೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ತಮಿಳು ಸಮುದಾಯ ಹೆಚ್ಚಾಗಿ ವಾಸವಾಗಿರುವ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗುವುದು, ಯಾರೂ ಆತಂಕ ಪಡಬೇಕಾಗಿಲ್ಲ ಎಂದು ಗೃಹ ಸಚಿವ ಜಿ ಪರಮೇಶ್ವರ ಹೇಳಿದ್ದಾರೆ.

ಆದರೆ, ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ಹಲ್ಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸುವಂತೆ ತಮಿಳುನಾಡಿಗೆ ಮನವಿ ಮಾಡಿದ್ದಾರೆ. [ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ]

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡೂ ರಾಜ್ಯದ ಜನ ಶಾಂತಿ ಕಾಪಾಡಿಕೊಳ್ಳಬೇಕು. ಇತಂಹ ಸಂದರ್ಭದಲ್ಲಿ ಸುಳ್ಳು ವಂದತಿಗಳು ಹರಡುತ್ತವೆ. ಅವುಗಳಿಗೆ ಕಿವಿಗೊಡಬೇಡಿ. ಸುಪ್ರೀಂಕೋರ್ಟಿನಲ್ಲಿ ನಮಗೆ ಸ್ವಲ್ಪ ಪ್ರಮಾಣದಲ್ಲಿ ನಿರಾಶೆ ಸಿಕ್ಕಿದೆ.


15 ಸಾವಿರ ಕ್ಯೂಸೆಕ್ ನೀರು ಬಿಡಬೇಕೆಂದು ಸೆ.5ರಂದು ಆದೇಶಿಸಿದ್ದ ನ್ಯಾಯಾಲಯ ಈಗ 12ಸಾವಿರ ಕ್ಯೂಸೆಕ್ ಗೆ ಇಳಿಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ವಿಚಾರಣೆಯಲ್ಲಿ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ ಎಂದರು.

ಡಿಜಿಪಿ ಓಂಪ್ರಕಾಶ್ ಅವರ ಸಂದೇಶ

ಡಿಜಿಪಿ ಓಂಪ್ರಕಾಶ್ ಅವರ ಸಂದೇಶ

ಎರಡೂ ರಾಜ್ಯದಲ್ಲೂ ಶಾಂತಿಯುತ ವಾತಾವರಣ ಇರಬೇಕು. ಡಿಜಿಪಿ ಓಂಪ್ರಕಾಶ್ ಅವರು ತಮಿಳುನಾಡಿನ ಡಿಜಿಪಿ ರಾಜೇಂದ್ರನ್ ಅವರ ಜತೆ ಮಾತುಕತೆ ನಡೆಸಿದ್ದು, ಅಲ್ಲಿನ ಕನ್ನಡಿಗರಿಗೆ ರಕ್ಷಣೆ ಕೊಡಬೇಕು. ನಾವು ಇಲ್ಲಿ ತಮಿಳರಿಗೆ ತೊಂದರೆಯಾಗದಂತೆ ರಕ್ಷಣೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಅಗತ್ಯವಾದರೆ ನಾನು ತಮಿಳುನಾಡು ಗೃಹ ಸಚಿವ ಜತೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದರು.

ಹೆಚ್ಚಿನ ಭದ್ರತೆ ಒದಗಿಸಲಾಗಿದೆ

ಹೆಚ್ಚಿನ ಭದ್ರತೆ ಒದಗಿಸಲಾಗಿದೆ

ಕಾವೇರಿ ವಿವಾದ ಭುಗಿಲೆದ್ದಿದ್ದು, ಸೂಕ್ಷ್ಮ ಪ್ರದೇಶಗಳಿಗೆ ಭದ್ರತೆ ಒದಗಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿ ಸಜ್ಜಾಗಿದೆ. ಅಗತ್ಯ ಬಿದ್ದರೆ ಕೇಂದ್ರದಿಂದ ಸಿಆರ್ ಪಿಎಫ್ ಮತ್ತು ಆರ್‍ಎಎಫ್ ನ 10 ತುಕಡಿಗಳನ್ನು ಕರೆಸಿಕೊಳ್ಳಲಾಗಿದೆ. ಅಗತ್ಯ ಬಿದ್ದರೆ ಇನ್ನಷ್ಟು ತುಕಡಿಗಳನ್ನು ಕಳುಹಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದರು.

ಹೆಚ್ಚಿನ ಭದ್ರತೆ ಒದಗಿಸಲಾಗಿದೆ

ಹೆಚ್ಚಿನ ಭದ್ರತೆ ಒದಗಿಸಲಾಗಿದೆ

ಸರ್ವಜ್ಞನಗರ, ಚಿಕ್ಕಪೇಟೆ, ವಿವೇಕ ನಗರ, ಸಿವಿ ರಾಮನ್ ನಗರ, ಶಿವಾಜಿನಗರ, ಕೆಆರ್ ಪುರಂ, ಪುಲಕೇಶಿ ನಗರ, ಶಾಂತಿನಗರ, ಮಡಿವಾಳ, ಚಾಮರಾಜಪೇಟೆ, ಮಾಗಡಿ ರಸ್ತೆ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಮೈಸೂರು ರಸ್ತೆ ಭಾಗಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಕನ್ನಡಿಗರ ರಕ್ಷಣೆಗೆ ಕಾರ್ಯದರ್ಶಿಗಳ ಕರೆ

ಕನ್ನಡಿಗರ ರಕ್ಷಣೆಗೆ ಕಾರ್ಯದರ್ಶಿಗಳ ಕರೆ

ಕಾವೇರಿ ವಿವಾದದಿಂದ ಉಂಟಾಗಿರುವ ಗಲಭೆ ಹಿನ್ನೆಲೆಯಲ್ಲಿ ಕನ್ನಡಿಗರ ಮೇಲೆ ಕೆಲವರು ಹಲ್ಲೆ ಮಾಡಿರುವ ಘಟನೆ ವರದಿಯಾಗಿದ್ದು, ಅಲ್ಲಿ ನೆಲೆಸಿರುವ ಅಲ್ಪಸಂಖ್ಯಾತ ಕನ್ನಡಿಗರು ಭೀತಿಗೊಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಸರ್ಕಾರ ಅವರ ರಕ್ಷಣೆಗೆ ಧಾವಿಸಬೇಕು ಎಂಬ ಬಗ್ಗೆ ಮುಖ್ಯ ಕಾರ್ಯದರ್ಶಿಯವರು ತಮಿಳುನಾಡು ಮುಖ್ಯ ಕಾರ್ಯದರ್ಶಿಯವರೊಂದಿಗೆ ದೂರವಾಣಿ ಮೂಲಕ ಚರ್ಚೆ ನಡೆಸಿದ್ದಾರೆ.

English summary
NS Megharikh assured that Tamil speaking areas in Bengaluru and Karnataka will be safe.In Karnataka, there are more than one crore Tamil speaking people. There are 35 lakh Tamil speaking population in Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X