• search
  • Live TV
ಬೆಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಪಾಕ್ ಪರ ಘೋಷಣೆ; ಸಮಾವೇಶ ಆಯೋಜಿಸಿದ್ದ ಸಂಘಟಕರಿಗೆ ಪೊಲೀಸ್ ಬುಲಾವ್

|

ಬೆಂಗಳೂರು, ಫೆಬ್ರವರಿ 22: ಕಳೆದ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಮೂಲ್ಯ ಲಿಯೋನಾ ಎನ್ನುವಳು 'ಪಾಕಿಸ್ತಾನ್ ಜಿಂದಾಬಾದ್' ಎಂದು ದೇಶ ವಿರೋಧಿ ಘೋಷಣೆ ಕೂಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾವೇಶದ ಆಯೋಜಕರನ್ನು ಪೊಲೀಸರು ವಿಚಾರಣೆಗೆ ಕರೆದಿದ್ದಾರೆ.

ಬಿಬಿಎಂಪಿ ಸದಸ್ಯ ಇಮ್ರಾನ್ ಪಾಷಾ ಅವರನ್ನು ಪಶ್ಚಿಮ ವಿಭಾಗ ಪೊಲೀಸರು ಶನಿವಾರ ಮಧ್ಯಾಹ್ನ ವಿಚಾರಣೆ ನಡೆಸಿದ್ದಾರೆ. ಅಮೂಲ್ಯ ಎನ್ನುವ ಯುವತಿ ನೀವು ಆಯೋಜಿಸಿದ್ದ ಸಮಾವೇಶದಲ್ಲಿ ಏಕೆ ದೇಶ ವಿರೋಧಿ ಹೇಳಿಕೆ ನೀಡಿದ್ದು? ಅವಳಿಗೆ ಕಾರ್ಯಕ್ರಮಕ್ಕೆ ಆಹ್ವಾನವಿತ್ತಾ? ಇನ್ನೂ ಯಾವೆಲ್ಲ ಸಂಘಟನೆಗಳು ಸಮಾವೇಶಕ್ಕೆ ಕೈ ಜೋಡಿಸಿದ್ದವು ಎಂದು ಪೊಲೀಸರು ಇಮ್ರಾನ್ ಪಾಷಾ ಅವರನ್ನು ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ.

'ಪಾಕಿಸ್ತಾನ್ ಜಿಂದಾಬಾದ್' ಎಂದವಳಿಗೆ ವೇದಿಕೆಯಲ್ಲೇ ಓವೈಸಿ ಪ್ರತಿಕ್ರಿಯೆ ಏನು?

ಹಿಂದೂ ಮುಸ್ಲಿಂ ಸಿಖ್ ಇಸಾಯಿ ಫೌಂಡೇಶನ್ ಗುರುವಾರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಸಿಎಎ ವಿರೋಧಿಸಿ ಕಾರ್ಯಕ್ರಮ ಆಯೋಜಿಸಿತ್ತು. ಬಿಬಿಎಂಪಿ ಸದಸ್ಯ ಇಮ್ರಾನ್ ಪಾಶಾ ಅವರು ಸಮಾವೇಶಕ್ಕೆ ಪೊಲೀಸರಿಂದ ಅನುಮತಿ ಪಡೆದುಕೊಂಡಿದ್ದಾರೆ.

ಅಮೂಲ್ಯ ಲಿಯೋನಾಗೆ ನಾವೇನು ಕಾರ್ಯಕ್ರಮಕ್ಕೆ ಕರೆದಿರಲಿಲ್ಲ. ವಿಐಪಿ ಪಾಸುಗಳನ್ನು ಪಡೆದುಕೊಂಡು ವೇದಿಕೆ ಏರಿ ಮಾತನಾಡಿದ್ದಾಳೆ ಎಂದು ಸಂಘಟಕರು ಪೊಲೀಸರಿಗೆ ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

English summary
Bengaluru Police Questioned BBMP Corporater Imran Pasha Pro Pak Speach. Police investigating pak zindhabad chant case.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X