ಬೆಂಗಳೂರು : ಹೊಸ ವರ್ಷಾಚರಣೆ ಮೇಲೆ ಸಿಸಿಟಿವಿ ಕಣ್ಣು

ಬೆಂಗಳೂರು, ಡಿ. 30 : ಚರ್ಚ್‌ ಸ್ಟ್ರೀಟ್‌ನಲ್ಲಿ ಭಾನುವಾರ ರಾತ್ರಿ ಬಾಂಬ್ ಸ್ಫೋಟಗೊಂಡಿದ್ದರಿಂದ ಪೊಲೀಸರು ಹೊಸ ವರ್ಷಾಚರಣೆ ಮೇಲೆ ಕಣ್ಣಿಟ್ಟಿದ್ದಾರೆ. ಎಂಜಿ ರಸ್ತೆ ಮತ್ತು ಬ್ರಿಗೇಡ್‌ ರಸ್ತೆಯಲ್ಲಿ ಹೆಚ್ಚುವರಿಯಾಗಿ 15 ಸಿಸಿಟಿವಿಗಳನ್ನು ಅವಳವಡಿಸಲಾಗುತ್ತಿದೆ. ತುರ್ತು ಸಂದರ್ಭದಲ್ಲಿ ಸಹಾಯಕ್ಕೆ ಬರುವಂತೆ ಸಾರ್ವಜನಿಕ ಸ್ಥಳದಲ್ಲಿ 108 ಆಂಬ್ಯುಲೆನ್ಸ್‌ಗಳನ್ನು ನಿಲ್ಲಿಸಲು ಆರೋಗ್ಯ ಸಚಿವರು ಆದೇಶ ಹೊರಡಿಸಿದ್ದಾರೆ.

ಭಾನುವಾರ ರಾತ್ರಿ ಚರ್ಚ್‌ ಸ್ಟ್ರೀಟ್‌ನಲ್ಲಿ ಬಾಂಬ್ ಸ್ಫೋಟಗೊಂಡಿದ್ದರಿಂದ ಬೆಂಗಳೂರಿನ ಹೊಸ ವರ್ಷಾಚರಣೆ ನಡೆಯುವ ಪ್ರಮುಖ ಸ್ಥಳವಾದ ಎಂಜಿ ರಸ್ತೆ ಮತ್ತು ಬ್ರಿಗೇಡ್ ರಸ್ತೆಯಲ್ಲಿ ಅಗತ್ಯ ಮೆನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ. ರಾತ್ರಿ 1 ಗಂಟೆಯ ತನಕ ಇಲ್ಲಿ ಸಂಭ್ರಮಾಚರಣೆ ಮಾಡಲು ಪೊಲೀಸರು ಅವಕಾಶ ನೀಡಿದ್ದಾರೆ. [1 ಗಂಟೆವರೆಗೆ ಬಾರ್, ಹೋಟೆಲ್ ಓಪನ್ ತೆರೆದಿಡಲು ಒಪ್ಪಿಗೆ]

CCTV

ಮಂಗಳವಾರ ಎಂಜಿ ರಸ್ತೆ ಮತ್ತು ಬ್ರಿಗೇಡ್‌ ರಸ್ತೆಗಳಲ್ಲಿ ಪೊಲೀಸರು ಹೆಚ್ಚುವರಿಯಾಗಿ 15 ಸಿಸಿಟಿವಿಗಳನ್ನು ಆಳವಡಿಸುತ್ತಿದ್ದಾರೆ. ರಾತ್ರಿಯ ವೇಳೆಯಲ್ಲಿಯೂ ರಸ್ತೆಯ ಚಿತ್ರಣಗಳನ್ನು ಸ್ಪಷ್ಟವಾಗಿ ಸೆರೆ ಹಿಡಿಯುವ ಸಾಮರ್ಥ್ಯವನ್ನು ಈ ಕ್ಯಾಮರಾಗಳು ಹೊಂದಿವೆ. [ಸ್ಫೋಟದ ಹೊಣೆ ಹೊತ್ತಿದ್ದ ಅಬ್ದುಲ್ ಪೊಲೀಸರಿಗೆ ಸಿಕ್ಕ!]

ಆಂಬ್ಯುಲೆನ್ಸ್‌ ನಿಲ್ಲಿಸಲು ಸೂಚನೆ : ಚರ್ಚ್ ಸ್ಟ್ರೀಟ್ ಬಾಂಬ್ ಸ್ಫೋಟದ ಹಿನ್ನಲೆಯಲ್ಲಿ ಬೆಂಗಳೂರು ನಗರದಲ್ಲಿ ಜನ ಸಂಚಾರ ಹೆಚ್ಚಿರುವ ಪ್ರದೇಶಗಳಲ್ಲಿ 108 ಆಂಬ್ಯುಲೆನ್ಸ್‌ಗಳನ್ನು ನಿಲ್ಲಿಸುವಂತೆ ಆರೋಗ್ಯ ಸಚಿವ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಹೊಸ ವರ್ಷಾಚರಣೆ ನಡೆಯುವ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ ಸೇರಿದಂತೆ ಸಾರ್ವಜನಿಕರ ಸ್ಥಳಗಳಲ್ಲಿ ಡಿ.31ರಂದು ಆಂಬ್ಯುಲೆನ್ಸ್ ಸಿದ್ಧವಾಗಿರುತ್ತದೆ. ತುರ್ತು ಸಂದರ್ಭದಲ್ಲಿ ಚಿಕಿತ್ಸೆ ನೀಡಲು ಸಹಕಾರಿಯಾಗಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+