Bengaluru Power Cut: ಬೆಂಗಳೂರು, ತುಮಕೂರಿನ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ: ಎಲ್ಲೆಲ್ಲಿ ಎಷ್ಟು ದಿನ?
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಕರೆಂಟ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ ಎಷ್ಟು ದಿನ ಹಾಗೂ ಕಾರಣ ಏನು ಎಂದು ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುವ ಹಿನ್ನೆಲೆ ಬೆಂಗಳೂರಿನ ಹಲವಾರು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಅದರಲ್ಲೂ ವಿಶೇಷವಾಗಿ ಐಟಿ ಕಾರಿಡಾರ್‌ಗಳು ಮತ್ತು ಕೈಗಾರಿಕಾ ವಲಯಗಳಲ್ಲಿ ಈ ವಾರದಲ್ಲಿ ಕೆಲವು ದಿನಗಳವರೆಗೂ ಮಧ್ಯಂತರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಬೆಂಗಳೂರಿನ ಪ್ರಮುಖ ಐಟಿ ಪಾರ್ಕ್‌ಗಳು ಮತ್ತು ವಾಣಿಜ್ಯ ಕ್ಲಸ್ಟರ್‌ಗಳು, ವಿಶೇಷವಾಗಿ ಇಪಿಐಪಿ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.
ಬೆಂಗಳೂರಲ್ಲಿ ಎಲ್ಲೆಲ್ಲಿ ಕರೆಂಟ್ ಕಟ್?: ನಗರದ ಅತ್ತಿಬೆಲೆ, ಆನೇಕಲ್ ಮತ್ತು ಚಂದಾಪುರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ತಿಳಿಸಿದೆ. ಅತ್ತಿಬೆಲೆ ಪಟ್ಟಣ, ಕೈಗಾರಿಕಾ ಪ್ರದೇಶ, ಮಂಚನಹಳ್ಳಿ, ಮಾಯಸಂದ್ರ, ಕಾಂಬ್ಳಿಪುರ, ಹಾರೋಹಳ್ಳಿ, ವಿಬಿಎಚ್‌ಸಿ ಅಪಾರ್ಟ್‌ಮೆಂರ್ಟ್ಸ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ತೂಮಕೂರಿನಲ್ಲಿ ಕರೆಂಟ್ ಕಟ್: ತುರ್ತು ನಿರ್ವಹಣಾ ಕಾರ್ಯ ಹಾಗೂ ರೈಲ್ವೆ ಮೇಲ್ಸೇತುವೆ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವುದರಿಂದ ತುಮಕೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ ಹಲವು ದಿನಗಳವರೆಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಜನವರಿ 7ರಂದು ತುಮಕೂರಿನಲ್ಲಿ ವಿದ್ಯುತ್ ವ್ಯತ್ಯಯ: ಬೆಸ್ಕಾಂ ನಗರ ವಿಭಾಗ-2ರ ವ್ಯಾಪ್ತಿಯಲ್ಲಿ ರೈಲ್ವೆ ಮೇಲ್ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿರುವ ಹಿನ್ನೆಲೆ ತುಮಕೂರಿನ ಕೆಲವು ಭಾಗಗಳಲ್ಲಿ ಜನವರಿ 7ರ ಬುಧವಾರ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ಕರೆಂಟ್ ಕಟ್?: ಸಿದ್ದರಾಮೇಶ್ವರ ಲೇಔಟ್, ಸಾಬರಪಾಳ್ಯ, ಮಾರುತಿ ನಗರ, ವಿಜಯನಗರ, ಉಪ್ಪಾರಹಳ್ಳಿ, ಸಿ.ಬಿ.ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು. ಗ್ರಾಹಕರು ಸಹರಿಸಬೇಕು ಎಂದು ಬೆಸ್ಕಾಂ ಮನವಿ ಮಾಡಿದೆ.
ಜನವರಿ 16ರ ವರಡಗೆ ವಿದ್ಯುತ್ ವ್ಯತ್ಯಯ: ತುಮಕೂರು ನಗರ ಉಪವಿಭಾಗ-1ರಲ್ಲಿ ಬೆಸ್ಕಾಂ ಫೀಡರ್ ನಿರ್ವಹಣಾ ಕಾರ್ಯ ಕೈಗೊಳ್ಳಲಾಗುತ್ತದೆ. ಈ ಹಿನ್ನೆಲೆ ಜನವರಿ 8, 10, 12, 14 ಮತ್ತು 16ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಗರದ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?: ಬೆಳಗುಂಬ, ಲಂಬಾಣಿ ತಾಂಡ್ಯ, ಜ್ಯೋತಿಪುರ, ಎಸ್.ಎಸ್.ಲೇಔಟ್, ಕುಂದೂರು, ವೆಂಕಟಾದ್ರಿ ಲೇಔಟ್, ಹನುಮಂತಪುರ, ಕುವೆಂಪುನಗರ, ಆದರ್ಶ ನಗರ, ಅಶ್ವತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್, ಅಗ್ನಿಬನ್ನಿರಾಯ ನಗರ, ಭಗ್ಯ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಇನ್ನೂ ಯಾವೆಲ್ಲಾ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಚಿತವಾಗಿ ಚಾರ್ಚಿಂಗ್ ಸಾಧನಗಳನ್ನು ಜಾರ್ಜ್ ಮಾಡಿಟ್ಟುಕೊಳ್ಳುವು ಉತ್ತಮ ಎಂದು ಸಲಹೆ ನೀಡಿದೆ.












Click it and Unblock the Notifications