Bengaluru Power Cut: ಈ ಪ್ರದೇಶಗಳಲ್ಲಿ ಜುಲೈ 12ರ ವರೆಗೂ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳ ಹಾಗೂ ಅತೀ ಹೆಚ್ಚು ಮಳೆಯಾಗುವ ಪ್ರದೇಶಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಜುಲೈ 12ರ ವರೆಗೆ ಈ ಭಾಗಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದರೆ ಎಲ್ಲೆಲ್ಲಿ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ವಿದ್ಯುತ್ ಕಂಬಗಳ ಸ್ಥಳಾಂತರ ಸೇರಿದಂತೆ ಹಲವು ಮೂಲಸೌಕರ್ಯ ಕಾರ್ಯಗಳ ಹಿನ್ನೆಲೆ ರಾಜ್ಯದ ಚಿತ್ರದುರ್ಗ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಜುಲೈ 9ರಿಂದ 12, 2025ರ ವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಂಗಳೂರಿನಲ್ಲಿ ಎಲ್ಲೆಲ್ಲಿ ಕರೆಂಟ್ ಕಟ್?: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (ಬೆಸ್ಕಾಂ) ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯ ಪ್ರಕಾರ, ದೇವರಪುರ ವಿದ್ಯುತ್ ಕೇಂದ್ರದಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ನೆಲ್ಲಿಕಟ್ಟೆ, ಮತ್ತಿಘಟ್ಟ ಮತ್ತು ತೋಡರನಾಳುಗಳಲ್ಲಿ ವಿದ್ಯುತ್ ಸರಬರಾಜು ಕಡಿತಗೊಳ್ಳಲಿದೆ ಎಂದು ತಿಳಿಸಿದೆ.
ವಿದ್ಯುತ್ ಕಡಿತಕ್ಕೆ ಕಾರಣ ಏನು?: ಮತ್ತಿಘಟ್ಟ- ಲಿಂಗದಹಳ್ಳಿ ಮಾರ್ಗದಲ್ಲಿ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರು ನಡೆಯುತ್ತಿರುವ ಹಿನ್ನೆಲೆ ಈ ಭಾಗದಲ್ಲಿ ವಿದ್ಯತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ರಸ್ತೆ ಕಾಮಗಾರಿ ಕೈಗೊಂಡ ಹಿನ್ನೆಲೆ, ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸಲಾಗುತ್ತಿದೆ. ಆದ್ದರಿಂದ ಈ ಭಾಗಗಳಲ್ಲಿ ತಾತ್ಕಾಲಿಕವಾಗಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ವಿರೂಪಾಕ್ಷಪ್ಪ ಅವರು ವಿದ್ಯುತ್ ವ್ಯತ್ಯಯ ಆಗುವ ವಗ್ಗೆ ಮಾಹಿತಿ ನೀಡಿದ್ದಾರೆ. ರಸ್ತೆ ಅಭಿವೃದ್ಧಿ ಮತ್ತು ಸುರಕ್ಷತೆಗಾಗಿ ಈ ಕಾಮಗಾರಿಗಳು ಅತ್ಯಗತ್ಯವಾಗಿದ್ದು, ಕಂಬಗಳನ್ನು ಸ್ಥಳಾಂತರಗೊಳಿಸಲಾಗುತ್ತಿದೆ. ಆದ್ದರಿಂದ ವಿದ್ಯುತ್ ಕಡಿತ ಅನಿವಾರ್ಯ ಆಗಿದೆ ಎಂದು ತಿಳಿಸಿದ್ದಾರೆ. ಗ್ರಾಹಕರು ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿಗೆ ಸಂಪರ್ಕಿಸಬಹುದು. ಅಥವಾ @NammaBESCOM ವೇಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಗ್ರಾಹಕರಿಗೆ ಪ್ರಮುಖ ಸಲಹೆಗಳು
* 6 ಗಂಟೆಗಳ ಕಾಲ ವಿದ್ಯುತ್ ವ್ಯತ್ಯಯ ಆಗುವ ಸಾಧ್ಯತೆ ಇರುವುದರಿಂದ, ನಿವಾಸಿಗಳು ಫೋನ್‌ಗಳು, ಲ್ಯಾಪ್‌ಟಾಪ್‌ಗಳು ಮತ್ತು ತುರ್ತು ದೀಪಗಳನ್ನು ಮುಂಚಿತವಾಗಿ ಸಂಪೂರ್ಣವಾಗಿ ಚಾರ್ಜ್ ಮಾಡಿ.
* ಕುಡಿಯಲು, ಅಡುಗೆ ಮಾಡಲು ಮತ್ತು ಇತರ ಮನೆಯ ಅಗತ್ಯಗಳಿಗಾಗಿ ಸಾಕಷ್ಟು ನೀರನ್ನು ಸಂಗ್ರಹಿಸಿ.
* ಸುರಕ್ಷತಾ ಕಾರಣಗಳಿಂದಾಗಿ ವಿದ್ಯುತ್ ಕಡಿತದ ಸಮಯದಲ್ಲಿ ಲಿಫ್ಟ್‌ಗಳನ್ನು ಬಳಸಬೇಡಿ.
ಸಂಜೆ 4ರ ವರೆಗೂ ವಿದ್ಯುತ್ ವ್ಯತ್ಯಯ: ಈಗಾಗಲೇ ಬೆಸ್ಕಾಂ ಜುಲೈ 5, 2025ರ ಶನಿವಾರ ಬೆಳಗ್ಗೆ 10ರಿಂದ ಸಂಜೆ 4ರ ವರೆಗೆ ಬೆಂಗಳೂರಿನ ಹಲವಾರು ಭಾಗಗಳಲ್ಲಿ ವಿದ್ಯುತ್ ಕಡಿತಗೊಳಿಸುವುದಾಗಿ ಘೋಷಣೆ ಮಾಡಿತ್ತು. ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ 220 ಕೆವಿ ವಿದ್ಯುತ್ ಸ್ಥಾವರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡ ಹಿನ್ನೆಲೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗಿತ್ತು. ಈ ಅವಧಿಯಲ್ಲಿ ಗ್ರಾಹಕರು ಸಹಕಾರಿಸುವಂತೆ ಬೆಸ್ಕಾಂ ಕೋರಿತ್ತು.












Click it and Unblock the Notifications