Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಶುಕ್ರವಾರ, ಶನಿವಾರ ಪವರ್ ಕಟ್
Bengaluru Power Cut: ಬೆಂಗಳೂರಿನ ವಿವಿಧ ಭಾಗದಲ್ಲಿ ಫೆಬ್ರವರಿ 20 ಹಾಗೂ 21ರಂದು ಶುಕ್ರವಾರ ಹಾಗೂ ಶನಿವಾರದಂದು ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಹೇಳಿದೆ. ಬೆಂಗಳೂರಿನ ಯಾವ ಭಾಗಗಳಲ್ಲಿ ಹಾಗೂ ಎಷ್ಟು ಸಮಯ ಪವರ್ ಕಟ್ ಸಮಸ್ಯೆ ಇರಲಿದೆ ಎನ್ನುವ ಸಂಪೂರ್ಣ ವಿವರ ಇಲ್ಲಿದೆ.
ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಫೆಬ್ರವರಿ 20 ಮತ್ತು ಫೆಬ್ರವರಿ 21ರಂದು ಪವರ್ ಕಟ್ ಇರಲಿದೆ. ಶುಕ್ರವಾರ ಹಾಗೂ ಶನಿವಾರ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಸಮಯದಲ್ಲಿ ಸಾರ್ವಜನಿಕರು ಪರ್ಯಾಯ ವ್ಯವಸ್ಥೆ ಅಥವಾ ತುರ್ತು ಕೆಲಸಗಳನ್ನು ಮೊದಲೇ ಮಾಡಿಕೊಳ್ಳುವಂತೆ ಬೆಸ್ಕಾಂ ಮನವಿ ಮಾಡಿದೆ. ಬೆಂಗಳೂರಿನ ಯಾವ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎನ್ನುವ ವಿವರ ನೋಡೋಣ.

Bengaluru Power Cut: ಬೆಂಗಳೂರಿನ ಈ ಭಾಗಗಳಲ್ಲಿ ಪವರ್ ಕಟ್
ಬೆಂಗಳೂರಿನ ಪ್ರಮುಖ ಪ್ರದೇಶಗಳಲ್ಲಿ ಎರಡು ದಿನಗಳ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407 ಬಿ ಸೆಕ್ಟರ್, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿ ನಗರ, ಕೋಗಿಲು, ಬಿ.ಬಿ ರಸ್ತೆ ಯಲಹಂಕ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಾಸವಾಗಲಿದೆ. ಬಾಗಲೂರು ಕ್ರಾಸ್, ವೆಂಕಟಾಲ, ನಿಟ್ಟೆ ಕಾಲೇಜು, ಬಿಎಸ್‌ಎಫ್, ಐಎಎಫ್, ಇಂಟರ್‌ನ್ಯಾಷನಲ್ ಸ್ಕೂಲ್, ಕಾಗೆನ್ ಅಡ್ಯಾನ್ ಕಾಲೇಜು, ರಾಯಣ್ಣನ ಶಾಲೆ ಪಾಲನಹಳ್ಳಿ, ದ್ವಾರಕಾನಗರ ಇತ್ಯಾದಿ. ಪೂರ್ವಂಕರ ಆರ್‌ಎಂಜೆಡ್ ಗ್ಯಾಲೇರಿಯಾ, ತಿರುಮಲ ನಗರ, ಅಟ್ಟೂರು ಬಡಾವಣೆ 1ನೇ ಅಡ್ಡರಸ್ತೆ- ಯಿಂದ 10ನೇ ಅಡ್ಡರಸ್ತೆ, ಎಸ್ಕಾರ್ಟ್ಸ್ ಬಡಾವಣೆ, ದೊಡ್ಡಬೆಟ್ಟಹಳ್ಳಿ, ಟಿಪ್ಪು ಸರ್ಕಲ್, ಚಿಕ್ಕಬೆಟ್ಟಹಳ್ಳಿ, ಕಾವೇರಿ ಬಡಾವಣೆ, ಗಿರಿಧಾಮನಗರ, ಎಎಂಎಸ್ ಬಡಾವಣೆ, ಡಿಫೆನ್ಸ್ ಕಾಲೊನಿ, ಎಂ.ಎಸ್. ಪಾಳ್ಯ, ಶಿಕ್ಷಕರ ಕಾಲೊನಿ, ಬಿಇಎಲ್ 6ನೇ ಬ್ಲಾಕ್, ಎಚ್‌ಎಂಟಿ 3ನೇ ಬ್ಲಾಕ್, ಎಚ್‌ಎಂಟಿ 4ನೇ ಬ್ಲಾಕ್ ಹಾಗೂ ಎಚ್‌ಎಂಟಿ 6ನೇ ಬ್ಲಾಕ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ. #Bescom #WhatsappHelplinenumbers pic.twitter.com/hFb2cKbazk
— Namma BESCOM | ನಮ್ಮ ಬೆಸ್ಕಾಂ (@NammaBESCOM) February 20, 2026
ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912
ಇನ್ನು ನೀವು ವಿದ್ಯುತ್ ಸಂಬಂಧಿತ ಸಮಸ್ಯೆಗಳಿಗೆ ಬೆಸ್ಕಾಂ ಸಹಾಯವಾಣಿ ಸಂಖ್ಯೆ 1912ಕ್ಕೆ ಕರೆ ಮಾಡಬಹುದಾಗಿದೆ. ನಿಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳ ಫೋಟೋ ಅಥವಾ ವಿಡಿಯೋಗಳನ್ನು ನಿಮ್ಮ ಜಿಲ್ಲೆಗೆ ಸಂಬಂಧಪಟ್ಟ ವಾಟ್ಸ್‌ಆ್ಯಪ್ ಸಹಾಯವಾಣಿ ಸಂಖ್ಯೆಗೆ ಕಳುಹಿಸಿ, ತ್ವರಿತ ಪರಿಹರ ಪಡೆಯಿರಿ. ಹೆಚ್ಚಿನ ಮಾಹಿತಿಗಾಗಿ ಬೆಸ್ಕಾಂ ಸಹಾಯವಾಣಿ 1912ಕ್ಕೆ ಕರೆಮಾಡಿ ಎಂದು ಬೆಸ್ಕಾಂ ತಿಳಿಸಿದೆ.













Click it and Unblock the Notifications