Bengaluru Power Cut: ಇಂದು ವಿವಿಧ ಬಡಾವಣೆಗಳಲ್ಲಿ ವಿದ್ಯುತ್ ಕಡಿತ, ಎಲ್ಲೆಲ್ಲಿ?
ಬೆಂಗಳೂರು, ಆಗಸ್ಟ್ 20: ರಾಜ್ಯ ರಾಜಧಾನಿ ವ್ಯಾಪ್ತಿಯಲ್ಲಿ ಕರ್ನಾಟಕ ಪವರ್ ಟ್ರಾನ್ಸ್‌ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ತುರ್ತು ನಿರ್ವಹಣಾ ಕಾಮಗಾರಿ ಕೈಗೊಂಡಿದೆ. ಹೀಗಾಗಿ ನಗರದ ವಿವಿಧೆಡೆ ಕಳೆದ ಎರಡು ದಿನಗಳಿಂದ ವಿದ್ಯುತ್ ಕಡಿತವಾಗುತ್ತಿದೆ. ಇದೀಗ ಇಂದು ಮಂಗಳವಾರ ಆಗಸ್ಟ್ 20ರಂದು ಈ ಕೆಳಗಿನ ಬಡಾವಣೆಗಳಲ್ಲಿ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ.
ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ನಿಯಮಿತ (BESCOM) ವ್ಯಾಪ್ತಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ನಗರದ ವಿದ್ಯುತ್ ಮೂಲಸೌಕರ್ಯಕ್ಕೆ ನವೀಕರಣದ ಕಾಮಗಾರಿಯನ್ನು ಆಗಸ್ಟ್ 18ರಿಂದಲೇ ಕೈಗೊಳ್ಳಲಾಗಿದೆ. ಇದರಿಂದಾಗಿ ಬೆಂಗಳೂರಿನ ಪಶ್ಚಿಮ, ಉತ್ತರ, ಪೂರ್ವ ಮತ್ತು ದಕ್ಷಿಣ ಭಾಗದ ಅನೇಕ ಬಡಾವಣೆಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಗಲಿದೆ.

ಈ ವಿದ್ಯುತ್ ಕಡಿತವು ಇಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಡೆಯಬಹದು, ಇನ್ನು ಕೆಲವು ಕಡೆಗಳಲ್ಲಿ ಸಂಜೆ 06 ಗಂಟೆವರೆಗೆ ವಿದ್ಯುತ್ ವ್ಯತ್ಯಯವಾಗಬಹುದು ಎಂದು ಬೆಸ್ಕಾಂ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದೆ. ವಿದ್ಯುತ್ ಕಡಿತದ ಪ್ರದೇಶಗಳ ಮಾಹಿತಿ ಇಲ್ಲಿದೆ.
ಬೆಂಗಳೂರಲ್ಲಿ ಇಂದು ವಿದ್ಯುತ್ ಕಡಿತಗೊಳ್ಳಲಿರುವ ಪ್ರದೇಶಗಳ ಪಟ್ಟಿ
ನಗರದ ಪ್ರಮುಖ ಬಡಾವಣೆಗಳಾದ ಕೋಣನಕುಂಟೆ, ತಲಘಟ್ಟಪುರ, ದೊಡ್ಡಕಲ್ಲಸಂದ್ರ, ಆವಲಹಳ್ಳಿ, ಶ್ರೀನಿಧಿ ಬಡಾವಣೆ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ. ಆಡುಗೋಡಿ, ಸಲಾರ್ಪುರಿಯಾ ಟವರ್, ಬಿಗ್ ಬಜಾರ್, ಆಕ್ಸೆಂಚರ್, ಕೆಎಂಎಫ್ ಗೋಡೌನ್, ನಂಜಪ್ಪ ಲೇಔಟ್, ಹೊಸ ಮೈಕೋ ರಸ್ತೆ, ಬೆಂಗಳೂರು ಡೈರಿ ವೃತ್ತ ವ್ಯಾಪ್ತಿ, ಫೋರಂಮಾಲ್, ಲಕ್ಕಸಂದ್ರ, ವಿಲ್ಸನ್ ಗಾರ್ಡನ್, ನಿಮ್ಹಾನ್ಸ್ ಅಡ್ಮಿನ್ ಬ್ಲಾಕ್ ಹಾಗೂ ಕೋರಮಂಗಲ ಬ್ಲಾಕ್‌ಗಳು 3 ರಿಂದ 8 ಮತ್ತು ಸುತ್ತಮುತ್ತಲಿನ ಪ್ರದೇಶಗಳು.
ಬೆಸ್ಕಾಂ ವ್ಯಾಪ್ತಿಯಲ್ಲಿ ಆಗಾಗ ಕೆಪಿಟಿಸಿಲ್ ನಿರ್ವಹಣಾ ಕಾಮಗಾರಿ ನಡೆಸುತ್ತದೆ. ಆಗಾಗ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗುತ್ತದೆ. ಈ ರೀತಿಯ ತೊಂದರೆ ಸಾಮಾನ್ಯವಾಗಿ ವಾರಾಂತ್ಯದಲ್ಲಿ ಉಂಟಾಗುತ್ತದೆ. ಆದರೆ ಈಗ ಕಳೆದ ಆಗಸ್ಟ್ 18 ರಿಂದ ನಡೆಯುತ್ತಿದೆ. ವಿದ್ಯುತ್ ಲೈನ್‌ಗಳ ನಿರ್ವಹಣೆ, ಓವರ್‌ಹೆಡ್‌ನಿಂದ ಭೂಗತಕ್ಕೆ ವಿದ್ಯುತ್ ಕೇಬಲ ಅಳವಡಿಕೆ ನಡೆಯುತ್ತಲೇ ಇರುತ್ತದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.












Click it and Unblock the Notifications