Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆಗಸ್ಟ್‌ 23ರ ಭಾನುವಾರ ಕರೆಂಟ್ ಕಟ್

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಆಗಸ್ಟ್‌ 23ರ ಭಾನುವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಕರೆಂಟ್ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಆರ್.ಎಂ.ವಿ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮಲ್ಲೇಶ್ವರಂ ವಿಭಾಗದ ಸಿ 6 ಉಪ ವಿಭಾಗದಲ್ಲಿ ನಗರದ ಹಲವೆಡೆ ಭಾನುವಾರ (ಆಗಸ್ಟ್‌ 23) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

Bengaluru Power Cut Power disruption in These Areas on August 23 2026 Monday Know details

ಎಲ್ಲೆಲ್ಲಿ ಕರೆಂಟ್‌ ಕಟ್‌?

ರಾಮಯ್ಯ ಆಸ್ಪತ್ರೆ, ಪೈಪ್ ಲೈನ್ ರಸ್ತೆ, ಎಂಎಸ್ಆರ್ ನಗರ, ಬಿಇಎಲ್ ರಸ್ತೆ, ಸಿಪಿಆರ್‌ಐ ಕ್ವಾರ್ಟ್ಸ್, ಸದಾಶಿವನಗರ ಪೊಲೀಸ್ ಠಾಣೆ, ಎಜಿಎಸ್ ಲೇಔಟ್, ಬಿಇಎಲ್ ರಸ್ತೆ, ಎಂಎಸ್ಆರ್ ನಗರ, ಜಲದರ್ಶಿನಿ ಲೇಔಟ್, ಎಂಎಸ್ಆರ್ ನಗರ, ಪೈಪ್ ಲೈನ್ ರಸ್ತೆ, ರಾಮಯ್ಯ ಬಾಲಕರ ಹಾಸ್ಟೆಲ್, ಎ.ಕೆ.ಕಾಲೋನಿ, ಶ್ರೀನಿಕೇತ್ ಅಪಾರ್ಟ್‌ಮೆಂಟ್, ಕಾಫಿ ಡೇ, ಪಿಜ್ಜಾ ಹಟ್ ರಾಮಯ್ಯ ಆಸ್ಪತ್ರೆ ಎದುರು, ನಾರಾಯಣ ಪ್ರಸಾದ್ ಕಟ್ಟಡ, ಸೀನಪ್ಪ ಲೇಔಟ್, ಬಿಇಎಲ್ ರಸ್ತೆ, ಇಸ್ರೋ, ಡಾಲರ್ಸ್ ಕಾಲೋನಿ, ಬಿಇಎಲ್ ರಸ್ತೆ, ಚಿಕ್ಕಮಾರನಹಳ್ಳಿ, ಗೌರಿ ಅಪಾರ್ಟ್‌ಮೆಂಟ್‌ ಸೇರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಸಂಜೆ 4 ಗಂಟೆಯವರೆಗೆ ವಿದ್ಯುತ್‌ ಪೂರೈಕೆ ವ್ಯತ್ಯಯ

ಇನ್ನೂ ಪ್ರೆಸ್ಟೀಜ್ ಪಾಲ್ಕಾನ್ ಸಿಟಿ ಮತ್ತು ಇಸ್ಕಾನ್ ಉಪಕೇಂದ್ರ ನಿರ್ವಹಣಾ ಕಾಮಗಾರಿ ಹಿನ್ನೆಲೆ ಆಗಸ್ಟ್ 23ರ ಭಾನುವಾರ ಬೆಳಗ್ಗೆ 11ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಪೋರಂ ಮಾಲ್, ಫ್ರೇಸ್ಟೀಜ್ ಪಾಲ್ಕಾನ್ ಸಿಟಿ ಅಪಾರ್ಟ್‌ಮೆಂಟ್, ದೊಡ್ಡಕಲ್ಲಸಂದ್ರ, ಕನಕಪುರ ಮುಖ್ಯ ರಸ್ತೆ, ನಾರಾಯಣ ನಗರ 3ನೇ ಬ್ಲಾಕ್, ಮುನಿ ರೆಡ್ಡಿ ಲೇಔಟ್, ಕುಮಾರನ್ಸ್ ಶಾಲೆ, ಜ್ಯೋತಿ ಲೇಔಟ್, ಗಂಗಪತಿಪುರ, ಸುಪ್ರಜ ನಗರ, ಜೆಎಸ್ಎಸ್ ಶಾಲೆ, ಕೋಣನಕುಂಟೆ, ಜರಗನಹಳ್ಳಿ ಪಾರ್ಕ್ ಪ್ರದೇಶ.

ಗಂಗಾಧರೇಶ್ವರ ದೇವಸ್ಥಾನ, ಬಸವರಾಜು ಲೇಔಟ್, ರಾಜೀವ್ ಗಾಂಧಿ ರಸ್ತೆ, ಸಾರಕ್ಕಿ ಕೆರೆ, ಸಾರಕ್ಕಿ ಸಿಗ್ನಲ್, ನಾಗರ್ಜುನ ಪ್ರೀಮಿಯರ್ ಅಪಾರ್ಟ್‌ಮೆಂಟ್, ಶ್ರೀನಿಧಿ ಲೇಔಟ್, ಮಂತ್ರಿ ಅಪಾರ್ಟ್‌ಮೆಂಟ್, ತಲಘಟ್ಟಪುರ, ರಘುವನಹಳ್ಳಿ, ಗುಬ್ಬಲಾಳ, ಕುವೆಂಪುನಗರ, ವಿ.ವಿ.ನಗರ, ವಿ.ವಿ. ಲೇಔಟ್, ಬಾಲಾಜಿ ಲೇಔಟ್, ರಾಯಲ್ ಫಾರಂ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ಮಹತ್ವದ ಸಲಹೆ

ಕಾಮಗಾರಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮಗಿದರೆ, ವಿದ್ಯುತ್ ಸರಬರಾಜನ್ನು ಮರುಸ್ಥಾಪಿಸಲಾಗುವುದು. ಆದರೂ ಸಾರ್ವಜನಿಕರು ಮೊಬೈಲ್, ಬ್ಯಾಟರಿ, ಲ್ಯಾಪ್‌ಟಾಪ್‌ ಸೇರಿದಂತೆ ವಿದ್ಯುತ್‌ಗೆ ಸಂಬಂಧಿತ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ. ಸಾರ್ವಜನಿಕರು ಸಹಕರಿಸಬೇಕು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಬೆಸ್ಕಾಂ ಇಂತಹ ಸಂದೇಶವನ್ನು ನೀಡುತ್ತಿರುವುದು ಇದೇ ಮೊದಲೇನಲ್ಲ. ಮೊದಲಿನಿಂದಲೂ ಸಹ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಆಗುವ ಹಿಂದಿನ ದಿನವೇ ಮುಂಜಾಗ್ರತಾ ಕ್ರಮವಾಗಿ ರವಾನೆ ಮಾಡುತ್ತಲೇ ಬಂದಿದೆ. ಸಾರ್ವಜನಿಕರು ಮುಂಜಾಗ್ರತಾ ಕ್ರಮವಾಗಿ ಇದಕ್ಕೆ ಪರ್ಯಾಯವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲು ಈ ಸಲಹೆ ತುಂಬಾ ಸಹಾಯ ಆಗುತ್ತಲಿದೆ ಅಂತಲೇ ಹೇಳಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+