Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಆಗಸ್ಟ್‌ 29ರ ಶನಿವಾರ ವಿದ್ಯುತ್ ವ್ಯತ್ಯಯ

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಆಗಸ್ಟ್‌ 29ರ ಶನಿವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ಕರೆಂಟ್ ಕಟ್‌ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೆಪಿಟಿಸಿಎಲ್ ವತಿಯಿಂದ ನಿರ್ವಹಣೆ ಕಾಮಗಾರಿ ಕೈಗೊಳ್ಳುವ ಹಿನ್ನೆಲೆ ಶನಿವಾರ (ಆಗಸ್ಟ್‌ 29) ಬೆಳಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಬೆಂಗಳೂರಿನ ಹಲವೆಡೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

Bengaluru Power Cut Power disruption in These Areas on August 29 2026 Monday Know details

ಶನಿವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಕೆಪಿಟಿಸಿಎಲ್ ಎರಡನೇ ತ್ರೈಮಾಸಿಕ ನಿರ್ವಹಣೆಗಾಗಿ ಎಲ್‌ಸಿ ಪಡೆದುಕೊಂಡಿರುವ ಹಿನ್ನೆಲೆಯಲ್ಲಿ ರಾಜನಕುಂಟೆ, ಕಾಡುಗೋಡಿ ಉಪಕೇಂದ್ರ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಳತ್ತೂರು, ಅಯಪ್ಪ ದೇವಸ್ಥಾನ, ಕುಂಬೇನ ಅಗ್ರಹಾರ, ಪಟಾಲಮ್ಮ ಲೇಔಟ್, ವಿಎಸ್‌ಆರ್ ಲೇಔಟ್, ಕಾಡುಗೋಡಿ, ಚನ್ನಸಂದ್ರ, ಎಫ್‌ಸಿಐ ಗೋಡೋನ್, ಸಫಲ್, ಶಂಕ್ರಪುರ, ಸಿದ್ದಾರ್ಥ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ಸಾಯಿ ಆಶ್ರಮ, ಎಚ್‌ಡಿಎಫ್‌ಸಿ ಬ್ಯಾಂಕ್, ಅಲಂಬಿಕ್ ಆಪ್ಟ್, ಮಾರ್ವೆಲ್ ಆಪ್ಟ್, ಇಮ್ಮಡಿ ಹಳ್ಳಿ, ಕೈತೋಟ, ದಿಣ್ಣೂರು, ಮೈತ್ರಿ ಲೇಔಟ್, ಸರ್ಕಾರಿ ಪಾಲಿಟೆಕ್ನಿಕ್, ಚನ್ನಸಂದ್ರ ಮುಖ್ಯರಸ್ತೆ, ನಾಗೊಂಡನಹಳ್ಳಿ, ನಾಗರಾಜ್ ಲೇಔಟ್, ದೊಮ್ಮರ ಪಾಳ್ಯ, ಪ್ರಶಾಂತ್ ಲೇಔಟ್, ಉಪಕಾರ್ ಲೇಔಟ್, ಪೃಥ್ವಿ ಲೇಔಟ್, ಸ್ವಾಮಿ ವಿವೇಕಾನಂದ ರಸ್ತೆ, ವೈಟ್‌ಫೀಲ್ಡ್ ಮುಖ್ಯರಸ್ತೆ, ಇಸಿಸಿ ರಸ್ತೆ, ನಾಯ್ಡು ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಭೈರವೇಣಯ್ಯ ದೇವಸ್ಥಾನ ರಸ್ತೆ, ರುಸ್ತುಮ್ಜಿ ಲೇಔಟ್, ಅಂಬೇಡ್ಕರ್ ನಗರ, ಪ್ರೆಸ್ಟೀಜ್ ಮೇಬರಿ ಆಪ್ಟ್, ಆದರ್ಶ ಫಾರ್ಮ್ ಮೆಡೋಸ್, ಬೋರ್ವೆಲ್ ರಸ್ತೆ, ಹೊರ ವೃತ್ತ, ಹಗದೂರು, ಬೀರ್ ಸ್ಟ್ರೀಟ್, ಬ್ರೂಕ್ ಬಾಂಡ್, ಹಗದೂರು ಕೇನ್, ವಿನಾಯಕನಗರ, ಬ್ರಿಗೇಡ್ ಕಾಸ್ಮೊ ಪೊಲೀಸ್ ಆಪ್ಟ್, ಗೋಯಲ್ ಹರಿಯಾಣ ಆಪ್ಟ್, ವಿಜಯನಗರ, ಗಾಂಧಿಪುರ, ಇಮ್ಮಡಿಹಳ್ಳಿ ಮುಖ್ಯ ರಸ್ತೆ, ದೊಬರಪಾಳ್ಯ, ಸುಮಧುರ ಅಪಾರ್ಟ್‌ಮೆಂಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್‌ ಕಟ್‌ ಆಗಲಿದೆ ಎಂದು ತಿಳಿಸಿದೆ.

ಬೆಸ್ಕಾಂನಿಂದ ಮಹತ್ವದ ಸಲಹೆ

ಒಂದು ವೇಳೆ ಕಾಮಗಾರಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮಗಿದರೆ ವಿದ್ಯುತ್ ಸರಬರಾಜನ್ನು ಮರುಸ್ಥಾಪಿಸಲಾಗುವುದು. ಆದರೂ ಸಾರ್ವಜನಿಕರು ಮೊಬೈಲ್, ಬ್ಯಾಟರಿ, ಲ್ಯಾಪ್‌ಟಾಪ್‌ ಸೇರಿದಂತೆ ವಿದ್ಯುತ್‌ಗೆ ಸಂಬಂಧಿತ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ. ಸಾರ್ವಜನಿಕರು ಸಹಕರಿಸಬೇಕು, ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಸಂಪರ್ಕಿಸಬಹುದು ಅಂತಲೂ ತಿಳಿಸಿದೆ.

ಶುಕ್ರವಾರ ಎಲ್ಲೆಲ್ಲಿ ಕರೆಂಟ್ ಕಟ್?

ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇ ವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕೆಎಂಎಫ್, ಇಟಗಲ್‌ಪುರ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+