Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಫೆಬ್ರವರಿ 22 ಭಾನುವಾರ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಫೆಬ್ರವರಿ 22ರ ಭಾನುವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ, ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಪೀಣ್ಯ ವಿಭಾಗದ 220/66/11ಕೆ.ವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರ ವ್ಯಾಪ್ತಿಯಲ್ಲಿ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಹಲವು ಪ್ರದೇಶಗಳಲ್ಲಿ ಭಾನುವಾರ ಬೆಳಗ್ಗೆ 9ರಿಂದ ಮಧ್ಯಾಹ್ನ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಭಾನುವಾರ ಎಲ್ಲೆಲ್ಲಿ ಕರೆಂಟ್ ಕಟ್?
ಹೆಚ್‌ಎಂಟಿ ರಸ್ತೆ, ಆರ್‌ಎನ್‌ಎಸ್ ಅಪಾರ್ಟ್‌ಮೆಂಟ್, ಸಿಎಂಟಿಐ, ಬೋರ್‌ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್‌ಚೇಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯುನಿಕೇಷನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, ಮೆಕ್ ಲೇಔಟ್, ಮಲಯಾಳಿ ಅತಿಥಿ ಗೃಹ ರಸ್ತೆ, ಕೆಎಚ್‌ಬಿ ಲೇಔಟ್ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಆಗಲಿದ ಎಂದು ಬೆಸ್ಕಾಂ ತಿಳಿಸಿದೆ.
ರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರೆಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಭಿರವೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ ರಸ್ತೆ, ಯುಕೊ ಬ್ಯಾಂಕ್ ರಸ್ತೆ, ಥರ‍್ಲಾಕ್ ರಸ್ತೆ, 7ನೇ ಮುಖ್ಯ ರಸ್ತೆ, 3ನೇ ಹಂತ, ರಾಜಗೋಪಾಲ ನಗರ, ಕಸ್ತೂರಿ ಬಡವಾಣೆ, ಜಿಕೆಡಬ್ಲ್ಯೂ ಲೇಔಟ್, ಬೈರವೇಶ್ವರ ನಗರ, ಇಎಸ್ಐಸಿ ಆಸ್ಪತ್ರೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಆಗಲಿದೆ ಎಂದು ತಿಳಿಸಿದೆ.
ಗ್ರಾಹಕರಿಗೆ ಮಹತ್ವದ ಮಾಹಿತಿ
ಇನ್ನೂ ಯಾವೆಲ್ಲಾ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆಯೋ ಅಂತಹ ಪ್ರದೇಶಗಳ ನಿವಾಸಿಗಳು ಮುಂಜಾಗ್ರತಾ ಕ್ರಮವಾಗಿ ಮೊಬೈಲ್, ಲ್ಯಾಪ್‌ಟ್ಯಾಪ್, ಬ್ಯಾಟರಿ ಸೇರಿದಂತೆ ವಿದ್ಯುತ್ ಸಂಬಂಧಿತ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ ಎಂದು ಸಲಹೆ ನೀಡಿದೆ.
ಶನಿವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ಮಧ್ಯಂತರವಾಗಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿತ್ತು. ಅದರಂತೆಯೇ ಕೆಎಂಎಫ್, ವೈಎನ್‌ಕೆ ನ್ಯೂ ಟೌನ್ 208, 407, ಸಿಬಿ ಸಾಂದ್ರ, ಅಲ್ಲಾಳಸಂದ್ರ, ಶಾರದನಗರ, ಜನಪ್ರಿಯ, ಅನ್ರಿಯಾ, ಮಾರುತಿನಗರ, ಕೋಗಿಲು, ಬಿಬಿ ರಸ್ತೆ ಯಲಹಂಕ, ಬಾಗಲೂರು ಕ್ರಾಸ್, ದ್ವಾರಕನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.












Click it and Unblock the Notifications