Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಜುಲೈ 29ರ ಬುಧವಾರ ವಿದ್ಯುತ್ ವ್ಯತ್ಯಯ
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಇದೀಗ ಜುಲೈ 29ರ ಬುಧವಾ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ, ಸಮಯ ಹಾಗೂ ಕಾರಣ ಏನು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಾಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆ. ನಿಮ್ಹಾನ್ಸ್ ಮತ್ತು ಜಯದೇವ ಉಪಕೇಂದ್ರ ವ್ಯಾಪ್ತಿಯಲ್ಲಿ ಬುಧವಾರ (ಜುಲೈ 29) ಬೆಳ್ಳಗೆ 9ರಿಂದ ಮಧ್ಯಾಹ್ನ 1 ಗಂಟೆಗಳವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ. ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಬುಧವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಎಸ್-1 ನಿಮ್ಹಾನ್ಸ್, ಕಿದ್ವಾಯಿ, ರಾಜೀವ್ ಗಾಂಧಿ, ಸಂಜಯ್ ಗಾಂಧಿ, ಇಂದಿರಾ ಗಾಂಧಿ ಆಸ್ಪತ್ರೆ, ಜಯನಗರ 1, 2, 3, 4, 9ನೇ ಟಿ ಬ್ಲಾಕ್, ಸೋಮೇಶ್ವರನಗರ, ವಿಲ್ಸನ್ ಗಾರ್ಡನ್, ಬನ್ನೇರುಘಟ್ಟ ರಸ್ತೆ, ಆರ್.ವಿ ರಸ್ತೆ, ಐಎಎಸ್ ಕಾಲೋನಿ, ಕೆಎಎಸ್ ಕಾಲೋನಿ, ಎನ್.ಎಸ್ ಪಾಳ್ಯ ಇಂಡಸ್ಟ್ರಿಯಲ್ ಏರಿಯಾ, ಜಾಹ್ನವಿ ಎನ್‌ಕ್ಲೇವ್, ಅನಂತ ಲೇಔಟ್, ಬಿಳೇಕಳ್ಳಿ ಮುಖ್ಯ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಜಯನಗರ 4, 9ನೇ ಟಿ ಬ್ಲಾಕ್, ಜಯನಗರ ಈಸ್ಟ್ ಎಂಡ್, ಎಬಿಸಿಡಿ ರಸ್ತೆ, ಬಿಹೆಚ್ಇಎಲ್ ಲೇಔಟ್, ಎಸ್‌ಆರ್‌ಕೆ ಗಾರ್ಡನ್, ಎನ್ಎಲ್ ಲೇಔಟ್ ತಿಲಕ್ ನಗರ, ಜಯದೇವ ಆಸ್ಪತ್ರೆ ಸುತ್ತಮುತ್ತಲ ಪ್ರದೇಶಗಳು, ಎಸ್‌ಎಸ್ ಪಾಳ್ಯ ಮುಖ್ಯ ರಸ್ತೆ, ಜಿಆರ್‌ಬಿ ಮುಖ್ಯ ರಸ್ತೆ, ಬಿಸ್ಮಿಲ್ಲಾ ನಗರ, ಶೋಭ ಅಪಾರ್ಟ್‌ಮೆಂಟ್, ವೆಗಾಸಿಟಿ ಮಾಲ್, ಏರ್‌ಟೆಲ್ ಆಫೀಸ್, ಬನ್ನೇರುಘಟ್ಟ ಮುಖ್ಯ ರಸ್ತೆ, ಕೆ.ಇ.ಬಿ ಕಾಲೋನಿ, ಗುರಪ್ಪನ ಪಾಳ್ಯ, ಬಿಟಿಎಮ್ ಮೊದಲನೇ ಹಂತ ಮತ್ತು ಸುತ್ತಮುತ್ತಲ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಬೆಸ್ಕಾಂನಿಂದ ಮಹತ್ವದ ಸಲಹೆ
ಕಾಮಗಾರಿಗಳು ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮಗಿದರೆ, ವಿದ್ಯುತ್ ಸರಬರಾಜನ್ನು ಮರುಸ್ಥಾಪಿಸಲಾಗುವುದು. ಸಾರ್ವಜನಿಕರು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು, ಮೊಬೈಲ್, ಬ್ಯಾಟರಿ, ಲ್ಯಾಪ್‌ಟಾಪ್ ಸೇರಿದಂತೆ ವಿದ್ಯುತ್‌ಗೆ ಸಂಬಂಧಿತ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಮುಂಚಿತವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವುದು ಉತ್ತಮ. ಸಾರ್ವಜನಿಕರು ಸಹಕರಿಸಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿಗೆ ಕರೆ ಮಾಡಬಹುದು ಎಂದು ತಿಳಿಸಿದೆ.


Click it and Unblock the Notifications
