Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ಶುಕ್ರವಾರ ಕರೆಂಟ್‌ ಕಟ್

Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಶುಕ್ರವಾರ (ನವೆಂಬರ್ 20) ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಸಮಯದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.

ಕೆಪಿಟಿಸಿಎಲ್‌ ವತಿಯಿಂದ ತುರ್ತು ನಿರ್ವಹಣಾ ಕಾರ್ಯ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಹಲವು ಭಾಗಗಳಲ್ಲಿ ಶುಕ್ರವಾರ (ನವೆಂಬರ್ 20) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್‌ ಪೂರೈಕೆಯಲ್ಲಿ ತಾತ್ಕಾಲಿಕಾವಾಗಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ. ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿ ನೋಡಿ.

Bengaluru Power Cut Power Outage in These Areas on November 19 Friday Know complete details

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್‌ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ, ಸೆಂಚುರಿ ಲೇಔಟ್ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ವಿದ್ಯತ್ ವ್ಯತ್ಯಯ ಆಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಮಲ್ಲೇಶ್ವರ, ಎಂ.ಡಿ.ಬ್ಲಾಕ್, ವೈಯಾಲಿಕಾವಲ್, ಈಜುಕೊಳ ವಿಸ್ತರಣೆ, ಕೋದಂಡರಾಮಪುರ, ರಂಗನಾಥಪುರ, ಬಿಎಚ್‌ಇಎಲ್, ಐಐಎಸ್‌ಸಿ ಬ್ರೈನ್ ಸೆಂಟರ್, ಅಂಬೇಡ್ಕರ್ ನಗರ, ಯಶವಂತಪುರ ಪೈಪ್‌ಲೈನ್ ರಸ್ತೆ, ಎಲ್‌ಎನ್ ಕಾಲೋನಿ, ಸುಬೇದ್ರಪಾಳ್ಯ, ದಿವಾನರ ಪಾಳ್ಯ, ಕೆ.ಎನ್.ವಿಸ್ತರಣೆ, ಯಶವಂತಪುರ 1ನೇ ಮುಖ್ಯರಸ್ತೆ, ಹೆಚ್​.ಎಂ.ಟಿ. ಮುಖ್ಯ ರಸ್ತೆ, ಮಾಡೆಲ್ ಕಾಲೋನಿ, ಶರೀಫ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.

ಕೊಡಗಿತಿರುಮಲಾಪುರ, ಟಿಬಿ ಕ್ರಾಸ್, ಹೆಸರಘಟ್ಟ, ಬಿಳಿಜಾಜಿ, ಮಠಕೂರು, ಕೊಳುವರಾಯನಹಳ್ಳಿ, ಸೀತಾ ಕೆಂಪನಹಳ್ಳಿ, ಲಿಂಗನಹಳ್ಳಿ, ಮಾದಪನಹಳ್ಳಿ, ರಾಘವೇಂದ್ರ ಧಾಮ, ಪಕ್ಕೇಗೌಡ ಪಾಳ್ಯ, ಸಿಲ್ವೇಪುರ, ಕಸಘಟ್ಟಪುರ, ಶಾಸಕರ ಬಡಾವಣೆ, ರಾಘವೇಂದ್ರ ಬಡಾವಣೆ, ಬಿಇಎಲ್ ಬಡಾವಣೆ, ಬಿಇಎಲ್ ಲೇಔಟ್ ಕಲತಮನಹಳ್ಳಿ, ಮುದ್ದಿನಪಾಳ್ಯ, ಮೀಡಿಯಾಗ್ರಹಾರ, ಎನ್‌ರಿಚ್ ಗಾರ್ಡನ್, ಚಿಕ್ಕಬ್ಯಾಲಕೆರೆ, ಕುರುಬರಹಳ್ಳಿ, ಮಾವಲಿಪುರ, ಕೊಂಡಶೆಟ್ಟಿಹಳ್ಳಿ, ಕೃಷ್ಣಾ ಲೇಔಟ್, ಮಧುಗಿರಿಹಳ್ಳಿ, ಶಿವಕೋಟೆ, ಅನ್ನಪೂರ್ಣೇಶ್ವರಿ ಲೇಔಟ್, ಬಾಲಾಜಿ ಲೇಔಟ್, ಆದಿತ್ಯ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್​ ವ್ಯತ್ಯಯ ಉಂಟಾಗಲಿದೆ.

ಸಾರ್ವಜನಿಕರಿಗೆ ಮಹತ್ವದ ಮಾಹಿತಿ

ಕಾಮಗಾರಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮುಕ್ತಾಯವಾದರೆ ವಿದ್ಯುತ್ ಸರಬರಾಜನ್ನು ತಕ್ಷಣವೇ ಮರುಸ್ಥಾಪಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕು. ಮೊಬೈಲ್, ಬ್ಯಾಟರಿ, ಲ್ಯಾಪ್‌ಟಾಪ್‌ ಸೇರಿದಂತೆ ವಿದ್ಯುತ್‌ಗೆ ಸಂಬಂಧಿತ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವಂತೆ ಸಲಹೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+