Bengaluru Power Cut: ಬೆಂಗಳೂರಿನ ಈ ಪ್ರದೇಶಗಳಲ್ಲಿ ನವೆಂಬರ್ 30ರ ಸೋಮವಾರ ಕರೆಂಟ್ ಕಟ್
Bengaluru Power Cut: ವಿದ್ಯುತ್‌ಗೆ ಸಂಬಂಧಿಸಿದ ಕಾಮಗಾರಿ ನಡೆಯುವ ಸ್ಥಳಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಮಾಡಲಾಗುತ್ತದೆ. ಹಾಗೆಯೇ ಇದೀಗ ಸೋಮವಾರ (ನವೆಂಬರ್ 30) ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ಕಡಿತ ಆಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಹಾಗಾದ್ರೆ ಎಲ್ಲೆಲ್ಲಿ ಹಾಗೂ ಸಮಯದ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ರಾಜಾಜಿನಗರದ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳುವ ಹಿನ್ನೆಲೆಯಲ್ಲಿ ನವೆಂಬರ್ 30ರ ಮಂಗಳವಾರ ಬೆಂಗಳೂರಿನ ಹಲವು ಭಾಗಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಎಲ್ಲೆಲ್ಲಿ ಎನ್ನುವ ಪ್ರಶ್ನೆಗೆ ಉತ್ತರ ಇಲ್ಲಿದೆ ನೋಡಿ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಬೆಸ್ಕಾಂ ಪ್ರಕಟಣೆಯ ಪ್ರಕಾರ, ನವೆಂಬರ್ 30ರ ಬೆಳಗ್ಗೆ 11ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಪಟ್ಟಣಗೆರೆ, ಕೃಷ್ಣ ಗಾರ್ಡನ್, ಬಿ.ಹೆಚ್.ಇ.ಎಲ್ ಲೇಔಟ್, ಭೂಮಿಕಾ ಲೇಔಟ್, ಬಿ.ಇ.ಎಂ.ಎಲ್ 1ನೇ, 2 ಮತ್ತು 10ನೇ ಹಂತ, ಮೈಲಸಂದ್ರ, ಉತ್ತರಹಳ್ಳಿ ಮುಖ್ಯ ರಸ್ತೆ, ಕಾನ್‌ಕಾರ್ಡ್ ಲೇಔಟ್, ಓಂಕಾರ ನಗರ, ಕೋಡಿಪಾಳ್ಯ, ಕೋನಸಂದ್ರ, ಹೆಮ್ಮಿಗೆಪುರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿದೆ.
ಚೆಟ್ಟಿಪಾಳ್ಯ, ಚೂಡೇನಪುರ, ಕಾಟನಾಯಕನಪುರ, ಬಿಜಿಎಸ್ ಆಸ್ಪತ್ರೆ, ಗಾಣಕಲ್ಲು, ಶ್ರೀನಿವಾಸಪುರ ಕಾಲೋನಿ, ಎಂ.ಎಲ್. ಲೇಔಟ್, ಬಿಡಿಎ ಲೇಔಟ್, ಸಚ್ಚಿದಾನಂದನಗರ, ಒಲಂಪಸ್ ಆಸ್ಪತ್ರೆ, ಹಲಗೆ ವಡೇರಹಳ್ಳಿ, ದ್ವಾರಕಾನಗರ, ಐಡಿಯಲ್ ಹೋಮ್ಸ್, ಸ್ವಾಮಿ ವಿವೇಕಾನಂದ ರಸ್ತೆ ಹಾಗೂ ಸುತ್ತಮುತ್ತಲಿನ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.
ಸಾರ್ವಜನಿಕರಿಗೆ ಮಹತ್ವದ ಮಾಹಿತಿ
ತುರ್ತು ನಿರ್ವಹಣಾ ಕೆಲಸವನ್ನು ಸುಗಮವಾಗಿ ಪೂರ್ಣಗೊಳಿಸಲು ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದೆ. ಅಲ್ಲದೆ, ಕಾಮಗಾರಿ ನಿಗದಿತ ಸಮಯಕ್ಕಿಂತ ಮುಂಚಿತವಾಗಿ ಮುಕ್ತಾಯವಾದರೆ ವಿದ್ಯುತ್ ಸರಬರಾಜನ್ನು ತಕ್ಷಣವೇ ಮರುಸ್ಥಾಪಿಸಲಾಗುವುದು. ಸಾರ್ವಜನಿಕರು ಸಹಕರಿಸಬೇಕು. ಮೊಬೈಲ್, ಬ್ಯಾಟರಿ, ಲ್ಯಾಪ್‌ಟಾಪ್ ಸೇರಿದಂತೆ ವಿದ್ಯುತ್‌ಗೆ ಸಂಬಂಧಿತ ಉಪಕರಣಗಳನ್ನು ಮುಂಜಾಗ್ರತಾ ಕ್ರಮವಾಗಿ ಚಾರ್ಜ್ ಮಾಡಿಟ್ಟುಕೊಳ್ಳುವಂತೆ ಸಲಹೆ ನೀಡಿದೆ.
ಭಾನುವಾರ ಎಲ್ಲೆಲ್ಲಿ ಪವರ್ ಕಟ್?
ಇನ್ನು 220/66/11 ಕೆವಿ ಎಸ್‌ಆರ್‌ಎಸ್ ಪೀಣ್ಯ ಉಪಕೇಂದ್ರದಲ್ಲಿ ಕೆಪಿಟಿಸಿಎಲ್ ವತಿಯಿಂದ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4, ಎನ್-5 ಮತ್ತು ಎನ್-7 ಉಪ ವಿಭಾಗಗಳಲ್ಲಿ ಭಾನುವಾರ (ನವೆಂಬರ್ 29) ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ತಿಳಿಸಿತ್ತು.
ಈ ನಿರ್ವಹಣಾ ಕಾರ್ಯದಿಂದಾಗಿ ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ, ಲಗ್ಗೆರೆ ಹಳೆ ಗ್ರಾಮ, ಲವಕುಶನಗರ, ರಾಜೀವ್‌ಗಾಂಧಿನಗರ, ಚೌಡೇಶ್ವರಿ ನಗರ 6, 7, 8, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1 ಮತ್ತು 2ನೇ ಕ್ರಾಸ್ ಹಾಗೂ 1ನೇ ಹಂತದ ಪಿಐಎ ಪ್ರದೇಶಗಳಲ್ಲಿ ಕರೆಂಟ್ ಕಟ್ ಆಗಲಿದೆ ಎಂದು ತಿಳಿಸಿತ್ತು.
ಗೃಹಲಕ್ಷ್ಮಿ ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಾಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿ.ಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್.ಟಿ.ಟಿ.ಎಫ್ ಸರ್ಕಲ್, ಗಣಪತಿನಗರ ಮುಖ್ಯರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ, ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್‌ಎಫ್ ಲೇಔಟ್, ಎನ್‌ಎಸ್ ಬಡಾವಣೆ ಮತ್ತು ಕೆಜಿ ಲೇಔಟ್ ಪ್ರದೇಶಗಳಲ್ಲಿಯೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ತಿಳಿಸಿದೆ.


Click it and Unblock the Notifications
