Bengaluru 2nd Airprot: ನೆಲಮಂಗಲ ಬಳಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಮಾಹಿತಿ, ವಿವರ

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಲ್ಲಿ ಎನ್ನುವ ಪ್ರಶ್ನೆಗೆ ಕೆಲವೇ ದಿನಗಳಲ್ಲಿ ಅಧಿಕೃತ ಉತ್ತರ ಸಿಗುವ ಸಾಧ್ಯತೆ ಇದೆ. ಡಾಬಸ್‌ಪೇಟೆ, ಕನಕಪುರ, ಮಾಗಡಿ, ದೊಡ್ಡಬಳ್ಳಾಪುರ, ಕನಕಪುರ, ವಸಂತನರಸಾಪುರ, ನೆಲಮಂಗಲ ಸೇರಿದಂತೆ ಹಲವು ಸ್ಥಳಗಳ ಹೆಸರು ಕೇಳಿಬಂದಿತ್ತು. ಇದೀಗ ನೆಲಮಂಗಲದ ಸಮೀಪ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವುದು ಬಹುತೇಕ ಖಚಿತವಾಗಿದೆ.

ಬೆಂಗಳೂರು ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸಂಬಂಧ ಶುಕ್ರವಾರ 11ನೇ ಸುತ್ತಿನ ಸಭೆ ನಡೆದಿದೆ. ಐಡೆಕ್‌ ಸಂಸ್ಥೆ ವಿಮಾನ ನಿಲ್ದಾಣಕ್ಕೆ 7 ಸ್ಥಳಗಳನ್ನು ಗುರುತಿಸಿದ್ದು, ಇದರಲ್ಲಿ ನೆಲಮಂಗಲ ಬಳಿ ಗುರುತಿಸಿರುವ ಸ್ಥಳ ಸೂಕ್ತ ಎನ್ನುವ ತೀರ್ಮಾನಕ್ಕೆ ಬರಲಾಗಿದೆ ಎಂದು ವಿಕ ವರದಿಮಾಡಿದೆ.

bengaluru prepares for second international airport near nelamangala

ನಾಡಪ್ರಭು ಕೆಂಪೇಗೌಡ ವಿಮಾನ ನಿಲ್ದಾಣದ ಮೇಲೆ ಹೆಚ್ಚಿನ ಒತ್ತಡ ಉಂಟಾಗುತ್ತಿದ್ದು, ಇನ್ನೊಂದು ದಶಕದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವ ಗುರಿ ಹೊಂದಲಾಗಿದೆ. ದೆಹಲಿ, ಮುಂಬೈ ಬಳಿಕ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹೊಂದಲಿರುವ ನಗರ ಎನ್ನುವ ಹೆಗ್ಗಳಿಕೆ ಬೆಂಗಳೂರು ಪಾತ್ರವಾಗಲಿದೆ.

ಇದೇ ಸ್ಥಳ ಬಹುತೇಕ ಅಂತಿಮ

ಐಡೆಕ್ ಮತ್ತು ಬೋಸ್ಟನ್ಸ್ ಕನ್ಸಲ್ಟೆನ್ಸಿ ಗ್ರೂಪ್‌ನ ಸಂಸ್ಥೆಗಳು ಕಳೆದ ತಿಂಗಳು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧ್ಯಕ್ಷತೆಯಲ್ಲಿ ನಡೆದಿದ್ದ ಸಭೆಯಲ್ಲಿ, ವಿಮಾನ ನಿಲ್ದಾಣಕ್ಕೆ ಗುರುತಿಸಲಾಗಿದ್ದ 7 ಸ್ಥಳಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದ್ದವು. ಇಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲಾಗಿತ್ತು.

ಬೆಂಗಳೂರು ದಕ್ಷಿಣ ಭಾಗದ ಜನರ ಅನುಕೂಲದ ದೃಷ್ಟಿಯಿಂದ ಹಾರೋಹಳ್ಳಿ, ಕನಕಪುರ ಬಳಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಸೂಕ್ತ ಎನ್ನಲಾಗಿತ್ತು. ಆದರೆ ತಮಿಳುನಾಡು ಸರ್ಕಾರ ಹೊಸೂರು ಬಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಾಡುವ ಯೋಜನೆ ಬಹಿರಂಗಪಡಿಸಿದ ನಂತರ, ಹಾರೋಹಳ್ಳಿ ಸ್ಥಳವನ್ನು ಯೋಜನೆಯಿಂದ ಕೈಬಿಡಲಾಗಿದೆ.

ಈಗ ನೆಲಮಂಗಲ-ಕುಣಿಗಲ್ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಂತಿರುವ ಸ್ಥಳದಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಲು ಯೋಜಿಸಲಾಗಿದ್ದು, ಪ್ರಸ್ತಾವನೆ ಅಂತಿಮಗೊಳಿಸುವ ಸಾಧ್ಯತೆ ಇದೆ.

ಸರ್ಕಾರ ಇದೇ ಜಾಗವನ್ನು ಅಂತಿಮಗೊಳಿಸಿದ ಬಳಿಕ, ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಪ್ರಸ್ತಾವನೆಯನ್ನು ಕಳಿಸಿಕೊಡಲಿದೆ. ಎರಡನೇ ವಿಮಾನ ನಿಲ್ದಾಣ ಸ್ಥಾಪನೆಗೆ ಅಗತ್ಯವಾದ 15 ಮಾನದಂಡಗಳಿಗೆ ಅನುಗುಣವಾಗಿದ್ದು, ಒಪ್ಪಿಗೆ ಸಿಗುವ ಸಾಧ್ಯತೆ ಕೂಡ ಇದೆ.

ಕಾರ್ಯನಿರ್ವಹಣೆ ಮಾಡುತ್ತಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ 150 ಕಿ.ಮೀ. ಸುತ್ತಳತೆಯಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆಗೆ ಅವಕಾಶವಿಲ್ಲ ಎನ್ನುವ ನಿಯಮ ಇದೆ. 2035ರ ವೇಳೆಗೆ ಈ ಷರತ್ತಿನ ಅವಧಿ ಮುಕ್ತಾಯವಾಗಲಿದ್ದು ಆ ವೇಳೆಗೆ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ಉದ್ದೇಶ ಸರ್ಕಾರದ್ದಾಗಿದೆ.

ಉತ್ತಮ ಸಾರಿಗೆ ವ್ಯವಸ್ಥೆ

ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ನೆಲಮಂಗಲ-ಕುಣಿಗಲ್ ರಾಷ್ಟ್ರೀಯ ಹೆದ್ದಾರಿ ಸಮೀಪದ ಜಾಗ ಸೂಕ್ತವಾಗಿದೆ ಎನ್ನುವ ಅಭಿಪ್ರಾಯ ಕೂಡ ವ್ಯಕ್ತವಾಗಿದೆ. ಫೆರಿಫೆರಲ್ ರಸ್ತೆ, ನೈಸ್ ರಸ್ತೆಗಳು ವಿಮಾನ ನಿಲ್ದಾಣಕ್ಕೆ ಸಂಪರ್ಕವನ್ನು ಸುಲಭವಾಗಿಸುತ್ತವೆ ಎನ್ನಲಾಗಿದೆ. ನೆಲಮಂಗಲದವರೆಗೆ ಮೆಟ್ರೋ ಮಾರ್ಗ ವಿಸ್ತರಣೆ ಮಾಡುವ ಯೋಜನೆ ಕೂಡ ಇದ್ದು, ಪ್ರಯಾಣಿಕರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎನ್ನುವ ಅಭಿಪ್ರಾಯವಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+